ಬೀದರ್‌ | ವಿವಾಹೇತರ ಸಂಬಂಧ : ಮಹಾರಾಷ್ಟ್ರ ಮೂಲದ ಯುವಕನಿಗೆ ಮನಬಂದಂತೆ ಥಳಿತ; ಸಾವು

Date:

ಬೀದರ್‌ ಜಿಲ್ಲೆಯಲ್ಲಿ ಅಮಾನವೀಯ ಘಟನೆವೊಂದು ಇಡೀ ನಾಗರೀಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ವಿವಾಹೇತರ ಸಂಬಂಧ ಹೊಂದಿದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ನೆಲದ ಮೇಲೆ ಮಲಗಿಸಿ ಕೋಲಿನಿಂದ ತೀವ್ರವಾಗಿ ಥಳಿಸುತ್ತಿರುವ ಭಯಾನಕ ದೃಶ್ಯ ವಿಡಿಯೊ ವೈರಲ್‌ ಆಗಿದೆ.

- Advertisement -

ಔರಾದ್‌ ತಾಲೂಕಿನ ಗಡಿ ಗ್ರಾಮ ನಾಗನಪಲ್ಲಿ ಎಂಬ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಅದೇ ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಶಂಕೆ ಹಿನ್ನೆಲೆ ಈ ಘಟನೆ ನಡೆದಿದೆ. ತೀವ್ರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಏನಿದು ಘಟನೆ :

ಮಹಾರಾಷ್ಟ್ರದ ನಾಂದೇಡ ಜಿಲ್ಲೆಯ ದೆಗಲೂರ ತಾಲೂಕಿನ ಗೌಣಗಾಂವ್ ಗ್ರಾಮದ ವಿಷ್ಣು ಪಾಂಚಾಳ (29) ಎಂಬ ಯುವಕ ತನ್ನ ತಾಯಿ, ಅಣ್ಣನೊಂದಿಗೆ ತೆಲಂಗಾಣದ ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದನು. ಅದೇ ಬಡವಾಣೆಯಲ್ಲಿ ವಿವಾಹಿತ ಮಹಿಳೆಯೊಬ್ಬರು ವಿಷ್ಣುಗೆ ಪರಿಚಯಳಾಗಿ ಸಂಬಂಧ ಬೆಳೆದಿತು, ಬಳಿಕ ಇಬ್ಬರು ಒಂದು ವರ್ಷ ಬೇರೆಡೆ ಒಟ್ಟಿಗೆ ಸಂಸಾರ ನಡೆಸಿದರು. ಈ ವಿಷಯವನ್ನು ಮಹಿಳೆಯ ತಂದೆ ಹಾಗೂ ಸಹೋದರನಿಗೆ ತಿಳಿದಿತ್ತು.

ಕಳೆದ ಮೂರು ತಿಂಗಳ ಹಿಂದೆ ಮಹಿಳೆಯು ವಿಷ್ಣು ಅವರನ್ನು ಬಿಟ್ಟು ತನ್ನ ತವರೂರು ಆದ ನಾಗನಪಲ್ಲಿ ಗ್ರಾಮಕ್ಕೆ ಬಂದು ನೆಲೆಸಿದ್ದಳು. ದೀಪಾವಳಿ ಹಬ್ಬದಂದು (ಅ.21) ಸ್ನೇಹಿತರ ಜೊತೆ ವಿಷ್ಣು ನಾಗನಪಲ್ಲಿ ಗ್ರಾಮಕ್ಕೆ ಹೋಗಿದ್ದ. ಈ ವೇಳೆ ಮಹಿಳೆಯ ತಂದೆ ಹಾಗೂ ಸಹೋದರ ಇಬ್ಬರೂ ನೋಡಿ, ವಿಷ್ಣನನ್ನು ಹಿಡಿದು ಮನಬಂದಂತೆ ಕೋಲಿನಿಂದ ಥಳಿಸಿದ್ದಾರೆ.

ʼಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಚಿಂತಾಕಿ ಠಾಣೆಯ ಪೊಲೀಸರು ಧಾವಿಸಿ ಗಾಯಗೊಂಡ ವ್ಯಕ್ತಿಯನ್ನು ಚಿಂತಾಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಔರಾದ್‌ ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಬೀದರ್‌ ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಿಸಿ, ನಂತರ ಹೈದರಾಬಾದ್‌ನ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರು. ಆದರೆ ಅ.22ರಂದು ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆʼ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ ಜಿಲ್ಲೆಗೆ 14 ಕೆಪಿಎಸ್‌ ಶಾಲೆ ಮಂಜೂರು

ʼನನ್ನ ಮಗನನ್ನು ಕೊಲೆ ಮಾಡುವ ಉದ್ದೇಶದಿಂದ ಮಹಿಳೆಯ ತಂದೆ ಅಶೋಕ್ ಹಾಗೂ ಸಹೋದರ ಗಜಾನನ ಸೇರಿ ಹಲ್ಲೆ ನಡೆಸಿದ್ದಾರೆʼ ಎಂದು ಆರೋಪಿಸಿ ನೀಡಿದ ದೂರಿನ ಮೇರೆಗೆ ಚಿಂತಾಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...