- ಒಂದೇ ಕುಟುಂಬದ ಮೂವರು ಸಾವು
- ಹುಮನಾಬಾದ್‌ನ ಧುಮ್ಮನಸೂರ್‌ನಲ್ಲಿ ಘಟನೆ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರೂ ಮಕ್ಕಳೊಂದಿಗೆ ಬಾವಿಗೆ ಹಾರಿ ಒಂದೇ ಕುಟುಂಬದ ಮೂವರು ಸಾವಿಗೀಡಾದ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ನಡೆದಿದೆ.
ಅಂಕುಶ್ ಹುಚ್ಚೇನೂರ್(28), ಮಗಳು ತನು(6), ಮಗ ಸಾಯಿರಾಜ್(5) ಎಂಬ ಮೂವರು ಮೃತ ದುರ್ದೈವಿಗಳು,
ಆಟೋ ಚಾಲಕರಾಗಿದ್ದ ಅಂಕುಶ ಕೌಟುಂಬಿಕ ಕಲಹ ಕಾರಣಕ್ಕೆ ಮನೆಯಲ್ಲಿ ಜಗಳವಾಡಿದ್ದರು. ಇದರಿಂದ ಬುಧವಾರ ರಾತ್ರಿ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸೂಚನೆ
ಈ ಸಂಬಂಧ ಹುಮಮಾಬಾದ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮುಂದುವರೆಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿಯು ಕಾರ್ಯಚರಣೆ ನಡೆಸಿ ಮೃತದೇಹ ಹೊರ ತೆಗೆದರು.