ಬೀದರ್‌ | ಸಾಲದ ಕಂತು ಕಟ್ಟಿಲ್ಲವೆಂದು ರೈತನ ಮೇಲೆ ಹಲ್ಲೆ; ಬ್ಯಾಂಕ್‌ ಸಿಬ್ಬಂದಿ ವಿರುದ್ಧ ದೂರು ದಾಖಲು

Date:

ಸಾಲದ ಕಂತು ಕಟ್ಟಿಲ್ಲವೆಂದು ಖಾಸಗಿ ಬ್ಯಾಂಕ್‌ ಸಿಬ್ಬಂದಿ ರೈತರೊಬ್ಬರ ಜಮೀನಿಗೆ ತೆರಳಿ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಭಾಲ್ಕಿ ತಾಲ್ಲುಕಿನ ಕೇಸರಜವಳಗಾ ಗ್ರಾಮದಲ್ಲಿ ನಡೆದಿದೆ.

- Advertisement -

ಭಾಲ್ಕಿಯ ಸಿದ್ಧಶ್ರೀ ಬ್ಯಾಂಕ್‌ನ ನಾಲ್ವರು ಸಿಬ್ಬಂದಿ ಏ.17 ರಂದು ಸಂಜೆ ರೈತ ರಾಜಕುಮಾರ ನಾಗಪ್ಪಾ ಮಟ್ಟೆ ಅವರು ಕೆಲಸ ಮಾಡುತ್ತಿರುವ ಜಮೀನಿಗೆ ತೆರಳಿ ಸಾಲದ ಕಂತಿನ ಹಣ ಯಾಕೆ ಕಟ್ಟಿಲ್ಲ ಎಂದು ಅವಾಚ್ಯ ಶಬ್ದಗಳಿಂದ‌ ನಿಂದಿಸಿ ರಾಜಕುಮಾರ್‌ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ರೈತ ರಾಜಕುಮಾರ್ ನಾಗಪ್ಪ ಮಟ್ಟೆ ಅವರ ಪತ್ನಿ ವಿಜಯಲಕ್ಷ್ಮಿಅವರು ಭಾಲ್ಕಿ ಪಟ್ಟಣದಲ್ಲಿರುವ ಸಿದ್ಧಶ್ರೀ ಬ್ಯಾಂಕ್‌ನಲ್ಲಿ ₹35 ಸಾವಿರ ಸಾಲ ಪಡೆದಿದ್ದರು. ಬ್ಯಾಂಕ್‌ ನಿಯಮದಂತೆ ಪ್ರತಿ ವಾರ ಸಾಲದ ಕಂತು ಮರುಪಾವತಿಸಿದ್ದಾರೆ. ಆದರೆ ಉಳಿದಿರುವ ಬಾಕಿ ₹9,180 ಹಣ ಯಾಕೆ ಕಟ್ಟಿಲ್ಲವೆಂದು ಪ್ರಶ್ನಿಸಿ ಎಂದು ಬ್ಯಾಂಕ್‌ ಸಿಬ್ಬಂದಿ ರಾಜಕುಮಾರ್‌ ಅವರಿಗೆ ಬಡಿಗೆಯಿಂದ ಹೊಡೆದು ಗಾಯಗೊಳಿಸಿದ್ದರು.

ಹಲ್ಲೆಗೊಳಗಾದ ರೈತ ರಾಜಕುಮಾರ್‌ ಮಟ್ಟೆ ಅವರನ್ನು ಕೂಡಲೇ ಹುಲಸೂರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಚಿಕಿತ್ಸೆ ಮುಂದುವರೆದಿದೆ.

ʼಸಾಲದ ಕಂತು ಕಟ್ಟುವುದು ಯಾವುದೂ ಬಾಕಿ ಇಲ್ಲ. ಅಂದು ಮುಂಜಾನೆ ಕಟ್ಟಬೇಕಾದ ಸಾಲದ ಕಂತು ಕಟ್ಟಿಲ್ಲವೆಂದು ಸಂಜೆ ಜಮೀನಿಗೆ ಬಂದು ನನ್ನ ತಲೆ, ಬೆನ್ನಿನ ಮೇಲೆ ಹೊಡೆದು ಗುಪ್ತಗಾಯ ಮಾಡಿದ್ದಾರೆ. ಈ ಹಿಂದೆ ಕೂಡ ಒಮ್ಮೆ ಸಾಲದ ಮರುಪಾವತಿ ವಿಚಾರಕ್ಕೆ ಬ್ಯಾಂಕ್‌ ಸಿಬ್ಬಂದಿಯೊಂದಿಗೆ ಜಗಳವಾಗಿತ್ತುʼ ಎಂದು ಹಲ್ಲೆಗೊಳಗಾದ ರಾಜಕುಮಾರ್‌ ಮಟ್ಟೆ ಅವರು ʼಈದಿನ.ಕಾಮ್‌ʼ ಜೊತೆ ಮಾತನಾಡಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ : ಅರಣ್ಯ ಪಾಲಕ ದಸ್ತಗಿರಿಸಾಬ ಅಮಾನತುಈ ಸುದ್ದಿ ಓದಿದ್ದೀರಾ?

ರೈತ ರಾಜಕುಮಾರ್‌ ಮಟ್ಟೆ ಅವರು ನೀಡಿದ ದೂರಿನ ಮೇರೆಗೆ ಭಾಲ್ಕಿ ಸಿದ್ಧಶ್ರೀ ಬ್ಯಾಂಕ್‌ ಸಿಬ್ಬಂದಿಗಳಾದ ಸಂಗಮೇಶ ಚಮಕೋಡೆ, ಸಂಗಮೇಶ ಬಿರಾದರ್‌, ಕಿರಣ ಪಾಟೀಲ್‌ ಹಾಗೂ ಸುನೀಲ್‌ ಎಂಬುವವರ ಮೇಲೆ ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...