ಬೀದರ್‌ | ಬ್ಯಾಂಕ್‌ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

Date:

  • ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
  • ರೈತ ಸಂಗಪ್ಪ 8ರಿಂದ 10 ಲಕ್ಷ ರೂ. ಸಾಲ ಮಾಡಿದ್ದರು

ಸಾಲಬಾಧೆ ತಾಳಲಾರದೇ ರೈತ ನೇಣಿಗೆ ಶರಣಾಗಿರುವ ಘಟನೆ ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ.

ತರನಳ್ಳಿ ಗ್ರಾಮದ ರೈತ ಸಂಗಪ್ಪ ಶಿವರಾಯ ಮಳಚಾಪೂರೆ(56) ಎಂಬುವರು ಮೃತ ದುರ್ದೈವಿ.

2.20 ಎಕರೆ ಜಮೀನು ಹೊಂದಿರುವ ರೈತ ಸಂಗಪ್ಪ ಅವರು ಕೃಷಿ ಚಟುವಟಿಕೆಗಳ ನಿರ್ವಹಣೆಗೆ ಪಿಕೆಪಿಎಸ್ ಸೇರಿ ಹಲವೆಡೆ ಸುಮಾರು 8ರಿಂದ 10 ಲಕ್ಷ ರೂ ಸಾಲ ಮಾಡಿದ್ದು, ಸಾಲದ ತೀರಿಸುವ ಚಿಂತೆಯಲ್ಲಿ ಮಂಗಳವಾರ ಬೆಳಿಗ್ಗೆ 9ಗಂಟೆ ಸುಮಾರಿಗೆ ತನ್ನ ಹೊಲದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಹಾಲಕ್ಕಿ ಮಹಿಳೆಯ‌ ಸ್ವಚ್ಛತಾ ಕಾರ್ಯ; ಆನಂದ್ ಮಹೀಂದ್ರಾ ಮೆಚ್ಚುಗೆ

ಮೃತ ರೈತನ ಪತ್ನಿ ನಾಗಮ್ಮ ಮಳಚಾಪೂರೆ ನೀಡಿರುವ ದೂರಿನ ಮೇರೆಗೆ ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬಂದ್ | ಚಿಕ್ಕಬಳ್ಳಾಪುರ: ತಲೆ ಬೋಳಿಸಿಕೊಂಡು ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬರು ತಲೆ ಬೊಳಿಸಿಕೊಂಡು...

ಬೆಳಗಾವಿ | ಆಪರೇಷನ್ ಹಸ್ತದ ಬಗ್ಗೆ ಲಕ್ಷ್ಮಣ್ ಸವದಿ ಮಾರ್ಮಿಕ ಹೇಳಿಕೆ

ಬಹಳಷ್ಟು ಮಂದಿ ಜೆಡಿಎಸ್‌-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರುಲು ಸಿದ್ದರಾಗಿದ್ದಾರೆ. ಎಲ್ಲದಕ್ಕೂ ಕಾಲ...

ಚಾಮರಾಜನಗರ | ಚೈನ್ನೈ ಮೂಲದ ವೈದ್ಯೆ ಅನುಮಾನಾಸ್ಪದ ಸಾವು

ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆ ಡಾ. ಸಿಂಧುಜಾ (28) ಅನುಮಾನಾಸ್ಪವಾಗಿ...

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ...