ಬೀದರ್‌ | ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

Date:

ಬೀದರ್ ಜಿಲ್ಲೆಯಲ್ಲಿ ಪ್ರತಿ ಟನ್‌ ಕಬ್ಬಿಗೆ ₹3,200 ಬೆಲೆ ನಿಗದಿಗೊಳಿಸಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಕರಬಸಪ್ಪಾ ಹುಡಗಿ ಅವರು ಉರುಳು ಸೇವೆ ನಡೆಸಿದರು.

- Advertisement -

ಬೀದರ್‌ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಸಂಯುಕ್ತ ಕಿಸಾನ್‌ ಮೋರ್ಚಾ (ರೈತ ಸಂಘಟನೆಗಳ ಒಕ್ಕೂಟ) ವತಿಯಿಂದ ಗುರುವಾರದಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭಿಸಿ‌ ಛತ್ರಪತಿ ಶಿವಾಜಿ ವೃತ್ತದವರೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಕಚೇರಿವರೆಗೆ ಉರುಳು ಸೇವೆ ನಡೆಸಿದರು.

ಬಳಿಕ ರೈತ ಮುಖಂಡ ಕರಬಸಪ್ಪಾ ಹುಡಗಿ ಅವರು ಮಾತನಾಡಿ, ʼಕಬ್ಬು ಬೆಲೆ ನಿಗದಿ ಕುರಿತ ನಮ್ಮ ಬೇಡಿಕೆಯನ್ನು ಸರ್ಕಾರ ಹಾಗೂ ಜಿಲ್ಲಾ ಆಡಳಿತ ತಕ್ಷಣ ಈಡೇರಿಸಬೇಕು. ಬೇಡಿಕೆ ಪೂರೈಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಹಾಗೂ ವಿನೂತನ ಪ್ರತಿಭಟನೆಗಳನ್ನು ನಡೆಸಲಾಗುವುದು. ನಮ್ಮ ಹಕ್ಕಿನ ದರ ಸಿಗುವವರೆಗೆ ಧರಣಿ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲʼ ಎಂದು ಎಚ್ಚರಿಸಿದರು.

WhatsApp Image 2025 11 15 at 3.41.11 PM

ಇದನ್ನೂ ಓದಿ : ಬೀದರ್ | ಟನ್ ಕಬ್ಬಿಗೆ ₹3,100 ಬೆಲೆ ಕೊಡಲೇಬೇಕು : ಪಟ್ಟು ಹಿಡಿದ ರೈತರು, ಧರಣಿ ಆರಂಭ

ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಕಿಸಾನ್ ಮಹಾಸಭಾದ ಕಲಬುರಗಿ ವಿಭಾಗದ ಅಧ್ಯಕ್ಷ ಮೌಲಾ ಮುಲ್ಲಾ, ಕಲಬುರಗಿ ಆದಿನ್ನಾಥ ಹೀರಾ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಮುಖಂಡರಾದ ಈಶ್ವರಸಿಂಗ ಠಾಕೂರ, ರಾಜಶೇಖರ ನಾಗಮೂರ್ತಿ, ಪೀರಪ್ಪಾ ಔರಾದೆ, ಜಗನ್ನಾಥ ಚಿಲ್ಲಾಬಟೆ, ರೈತ ಸಂಘದ ಮುಖಂಡರಾದ ಖಾಸೀಮ ಅಲಿ, ಶಂಕರೆಪ್ಪಾ ಮರ್ಕಲ್, ಕೊಂಡಿಬಾ ಪಾಂಡ್ರೆ, ಶಿವರಾಜ ಪಾಟೀಲ್ ಅತಿವಾಳ, ಬಾಬುರಾವ ಹೊನ್ನಾ,ಶಿವರಾಯ ಮುದಾಳೆ, ಖಾಶೆಪ್ಪಾ ಬೇಲೂರ. ಧುಳಪ್ಪಾ. ರುದ್ರಸ್ವಾಮಿ, ಸಂತೋಷ ಗುದಗೆ, ಮಲ್ಲಿಕಾರ್ಜುನ ಸಂಗಮ, ನಜೀರ್ ಅಹ್ಮದ್ ಚೊಂಡಿ, ಪ್ರಕಾಶ ಬಾವುಗೆ, ಶಾಂತಮ್ಮ ಮೂಲಗೆ, ಶಿವಲೀಲಾ ಹೋಳಸಮುದ್ರ, ವಿಜಯಕುಮಾರ ಬಾವುಗೆ, ವೀರಾರೆಡ್ಡಿ, ವಿಠಲ್ ರಾವ, ನಾಗಶೆಟ್ಟಿ, ಭೀಮರಾವ, ಖಮರ ಪಟೇಲ್, ವಿಜಯ ರೇಡ್ಡಿ, ನಾಗಶೇಟ್ಟಿ ಚೆನ್ನಮಲ್ಲ, ಮುಖೀಮೊದ್ದಿನ ನಂದಗಾAವ, ಖಾನಸಾಬ ಬಸವಕಲ್ಯಾಣ, ಸಂಜು ಪಾಟೀಲ್ ಹುಣಜಿ, ಬಾಬುರಾವ ಪಾಟೀಲ್ ಗೊದಿಪ್ಪರ್ಗಾ, ಸುರೇಶ ಪಾಟೀಲ್, ಬಸವರಾಜ ಅಷ್ಟೂರ, ಸೋಮನಾಥ ಏಳಕೂರ ಸೇರಿದಂತೆ ಅನೇಕ ರೈತ ನಾಯಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ರೈತರಿಗೆ ನ್ಯಾಯ ಓದಗಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ : ಹರಿನಾಥರೆಡ್ಡಿ

ಅಭಿವೃದ್ದಿ ಹೆಸರಿನಲ್ಲಿ ಬೇನಾಮಿ ಸಂಸ್ಥೆಯನ್ನು ಸ್ಥಾಪಿಸಿ ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಗದಗ | ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ

"2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ...