ಬೀದರ್‌ | ಬೆಳೆ ಹಾನಿ ಪರಿಹಾರ ಶೀಘ್ರ ಬಿಡುಗಡೆಗೆ ರೈತ ಸಂಘ ಆಗ್ರಹ

Date:

ಜಿಲ್ಲೆಯಲ್ಲಿ ಸುರಿದ ಮಳೆ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಶೀಘ್ರದಲ್ಲಿ ಪರಿಹಾರ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

- Advertisement -

ಕಳೆದ ಮೂರು ತಿಂಗಳಿನಿಂದ ನಿರಂತರ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ಬೆಳೆಗಳು ಹಾನಿಗೊಳಗಾಗಿವೆ. ಆದರೆ ಇಂದಿನವರೆಗೆ ರೈತರಿಗೆ ಸರ್ಕಾರದಿಂದ ಯಾವುದೇ ಪರಿಹಾರ ನೀಡಲಾಗಿಲ್ಲ. ಇದರಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಭಾನುವಾರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ʼಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ದೀಪಾವಳಿ ಹಬ್ಬಕ್ಕೂ ಮೊದಲು ರೈತರ ಖಾತೆಗೆ ಪರಿಹಾರ ಹಣ ಜಮೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದರೂ, ಆದರೆ, ಇಲ್ಲಿಯವರೆಗೆ ಅದು ನಿಜವಾಗಿಲ್ಲ. ಇದೀಗ ಸಚಿವರು ಅಕ್ಟೋಬರ್ 30ರೊಳಗೆ ಹಣ ನೀಡುವುದಾಗಿ ಹೇಳಿಕೆ ನೀಡಿರುವುದನ್ನು ಸಂಘಟನೆ ಗಮನಿಸಿದೆʼ ಎಂದರು.

ಮಳೆಯಿಂದಾಗಿ ಕೈಗೆ ಬಂದ ಬೆಳೆ ಹಾನಿಯಾದಕ್ಕೆ ರೈತರು ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು, ಹಿಂಗಾರು ಬಿತ್ತನೆಗೆ ಅಗತ್ಯವಾದ ಬೀಜ ಮತ್ತು ಗೊಬ್ಬರ ಖರೀದಿಸಲು ಸಹ ಕೈಯಲ್ಲಿ ಹಣವಿಲ್ಲದ ಸ್ಥಿತಿಯಲ್ಲಿದ್ದಾರೆ. ಸರ್ಕಾರದಿಂದ ನಿರಂತರವಾಗಿ ಕೇವಲ ಭರವಸೆಗಳು ಮಾತ್ರ ಸಿಗುತ್ತಿವೆ ಎಂದು ಸಂಘಟನೆಯ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಸಾವಿನಲ್ಲೂ ಒಂದಾದ ದಂಪತಿ

ʼಅಕ್ಟೋಬರ್ 30ರೊಳಗಾಗಿ ರೈತರ ಖಾತೆಗೆ ಪರಿಹಾರ ಹಣ ಜಮೆ ಆಗದಿದ್ದರೆ ರೈತರು ರಸ್ತೆ ಬಂದ್ ಮಾಡಿ ತೀವ್ರ ಹೋರಾಟ ಆರಂಭಿಸಬೇಕಾಗುತ್ತದೆ. ಅದರಿಂದ ಉಂಟಾಗುವ ಎಲ್ಲ ಪರಿಣಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರೇ ನೇರ ಜವಾಬ್ದಾರರು ಎಂದು ಜಿಲ್ಲಾ ಅಧ್ಯಕ್ಷರು ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ ಅವರು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...