ಬೀದರ್ | ಪ್ರತಿ ಟನ್ ಕಬ್ಬಿಗೆ ₹3,300 ಬೆಲೆ ನಿಗದಿಗೆ ಆಗ್ರಹಿಸಿ ರಸ್ತೆಗಿಳಿದ ರೈತರು

Date:

ಪ್ರತಿ ಟನ್ ಕಬ್ಬಿಗೆ ₹3,300 ಬೆಲೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ರೈತರು, ವಿವಿಧ ಸಂಘಟನೆಗಳ ಮುಖಂಡರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧ್ಯಕ್ಷತೆಯಲ್ಲಿ ಈ ಹಿಂದೆ ಎರಡು ಸಭೆಗಳು ನಡೆಸಲಾಯಿತು. ಪ್ರತಿ ಟನ್‌ ಕಬ್ಬಿಗೆ ₹2,750 ನೀಡಲಾಗುವುದು. ಇದರೊಂದಿಗೆ ಈಗಾಗಲೇ ಮುಖ್ಯಮಂತ್ರಿಯವರು ಘೋಷಿಸಿದ ₹50 ಹೆಚ್ಚುವರಿಯೊಂದಿಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ ₹50 ಹೆಚ್ಚುವರಿ ಕೊಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಆದರೆ, ಕಬ್ಬು ಬೆಳೆಗಾರರು ಇದನ್ನು ಒಪ್ಪಲಿಲ್ಲ. ಹೀಗಾಗಿ ಸಭೆ ಯಾವುದೇ ತೀರ್ಮಾನಕ್ಕೆ ಬರದಿರುವ ಕಾರಣ ಬೀದಿಗಿಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಹುಮನಾಬಾದ್‌ ಪಟ್ಟಣದಿಂದ ಹಾದು ಹೋಗಿರುವ ಹೈದರಾಬಾದ್‌–ಮುಂಬೈ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಹೋರಾಟ ನಡೆಸಲು ತೀರ್ಮಾನಿಸಿದರು. ಪಟ್ಟಣದ ಪ್ರವಾಸಿ ಮಂದಿರದಿಂದ ಹಳೆ ತಹಶೀಲ್ದಾರ್ ಕಚೇರಿವರೆಗೆ ಬೃಹತ್ ಮೆರವಣಿಗೆ ಮೂಲಕ ತೆರಳಿದರು.

ಪ್ರತಿಭಟನೆಯಲ್ಲಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್, ಮಾಜಿ ಸಚಿವ ರಾಜಶೇಖರ ಪಾಟೀಲ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಆದರೆ ಪೊಲೀಸರು ಹೆದ್ದಾರಿ ತಡೆಗೆ ಅವಕಾಶ ನೀಡದೆ ಪ್ರತಿಭಟನಾಕಾರರನ್ನು ಬಂಧಿಸಿದರು.

1002387592

ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಹಳೆ ತಹಶೀಲ್ದಾರ್ ಕಚೇರಿ ಎದುರಿನ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ಮುಂದುವರೆಸಿದ್ದು, ಸಿಎಂ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟಿಸಿದರು. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು.

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ರೈತರು ಸಂಪೂರ್ಣ ಬೆಳೆ ಕಳೆದುಕೊಂಡಿದ್ದಾರೆ. ಹಿಂಗಾರು ಬಿತ್ತನೆ ತಕ್ಕಮಟ್ಟಿಗೆ ಆಗದಿರುವ ಕಾರಣ ರೈತರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ರೈತರಿಗೆ ತಕ್ಷಣ ಸರ್ಕಾರ ಬೆಳೆ ಪರಿಹಾರ ನೀಡಬೇಕು ಹಾಗೂ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರ ನಿಗದಿಪಡಿಸಿದ ಬೆಲೆ ನೀಡಬೇಕೆಂದು ರೈತರು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...