ಬೀದರ್ | ಬೆಳೆಹಾನಿ ಜಂಟಿ ಸಮೀಕ್ಷೆಗೆ ರೈತ ಸಂಘ ಒತ್ತಾಯ

Date:

Advertisements

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಗಡಿಭಾಗ ಸೇರಿದಂತೆ ಹಲವೆಡೆ ಮುಂಗಾರು ಬೆಳೆಹಾನಿ ಸಂಭವಿಸಿದ್ದು, ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿ ತಾಲೂಕು ರೈತ ಸಂಘದ ಕಾರ್ಯಕರ್ತರು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ಮಾತನಾಡಿ, “ಗಡಿ ಭಾಗದ ಪಾಂಡರಿ, ಖುದವಂತಪೂರ, ಹಲಸಿ(ಎಲ್), ಇಂಚೂರು, ಗೋರಚಿಂಚೋಳಿ, ಲಖಣಗಾಂವ, ತಳವಾಡ(ಕೆ), ಹಜನಾಳ, ಕುಂಟೆಸಿರ್ಸಿ, ನಿಡೇಬಾನ್ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಮುಂಗಾರಿನ ಆರಂಭದಲ್ಲಿ ಮಳೆ ಕೊರತೆಯಿಂದ ಬಿತ್ತನೆಯಾದ ಬೆಳೆಗಳು ಮೊಳಕೆಯೊಡೆಯದೇ ಹಾಳಾಗಿವೆ. ಜುಲೈ ತಿಂಗಳಿನಲ್ಲಿ ಬಿತ್ತನೆ ಕಂಡ ಸೋಯಾ ಅವರೆ, ತೊಗರಿ, ಉದ್ದು, ಹೆಸರು ಸೇರಿದಂತೆ ಹಲವು ಬೆಳೆಗಳು ಮತ್ತು ತೋಟಗಾರಿಕೆ ಬೆಳೆಗಳು ವಾಡಿಕೆಗಿಂತ ಹೆಚ್ಚು ಸುರಿದ ಮಳೆಗೆ ಜಲಾವೃತಗೊಂಡು ನಷ್ಟಕ್ಕಿಡಾಗಿವೆ” ಎಂದು ಹೇಳಿದರು.

“ಸಾಲಸೋಲ ಮಾಡಿ ಬಿತ್ತನೆ ಮಾಡಿದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಸಮಸ್ಯೆ ಗಂಭೀರವಾಗಿ ಪರಿಗಣಿಸಿ ಕೂಡಲೇ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಬೆಳೆಹಾನಿ ಸಮೀಕ್ಷೆ ಪಾರದರ್ಶಕವಾಗಿ ನಡೆಸಿ ಸರ್ಕಾರಕ್ಕೆ ಸಮರ್ಪಕ ವರದಿ ಸಲ್ಲಿಸಿ ಅರ್ಹ ರೈತರಿಗೆ ಪರಿಹಾರ ಸಿಗುವಂತೆ ನೋಡಿಕೊಳ್ಳಬೇಕು. ಬೆಳೆಹಾನಿ ಸಮೀಕ್ಷೆಗೆ ವಿಳಂಬ ನೀತಿ ಅನುಸರಿಸಿದರೆ ಬೀದಿಗಿಳಿದು ಪ್ರತಿಭಟನೆ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಕರ್ಕಶ ಶಬ್ದದ ಸೈಲೆನ್ಸರ್‌ ಅಳವಡಿಸಿದರೆ ನಿರ್ದಾಕ್ಷಿಣ್ಯ ಕ್ರಮ; ಎಸ್‌ಪಿ ಸೂಚನೆ

ಈ ಸಂದರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಬಾಬುರಾವ ಜೋಳದಾಪಕೆ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ್, ಶೇಷಾರಾವ ಕಣಜೆ, ಭಾವುರಾವ ಪಾಟೀಲ್, ಶ್ರೀರಂಗ ಗಾಜರೆ, ನಾಗಶೆಟೆಪ್ಪ ಖಂದಾರೆ, ಬಾಬುರಾವ ಸೋನಜಿ, ಬಾಬುರಾವ ಭಾಸಗೆ, ಸತ್ಯವಾನ ಸೂರ್ಯವಂಶಿ, ನಾಗಶೆಟ್ಟಿ ಲಂಜವಾಡೆ ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X