ಬೀದರ್‌ | ಕನ್ನಡ ಮಾಧ್ಯಮ ಶಾಲೆ ಮುಚ್ಚಿದರೆ ಹೋರಾಟ: ಸುರೇಶ ಚನಶೆಟ್ಟಿ ಎಚ್ಚರಿಕೆ

Date:

ಬೀದರ್ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯಿಂದಲೇ 25 ಕ್ಕಿಂತ ಕಡಿಮೆ ಮಕ್ಕಳ ದಾಖಲಾತಿ ಇರುವ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಪರೋಕ್ಷ ಪ್ರಯತ್ನ ನಡೆಯುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಆರೋಪಿಸಿದ್ದಾರೆ.

- Advertisement -

ʼಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ವೇಳೆ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದಿರುವುದು ಇದಕ್ಕೆ ನಿದರ್ಶನ. ಇದು ಶಿಕ್ಷಣ ಹಕ್ಕು ಕಾಯ್ದೆಯ ಉಲ್ಲಂಘನೆಯಾಗಿದೆ. ಈವರೆಗೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾಗಿದ್ದವರು ಶಾಲೆಗೆ ತೆರಳಲು ಕೌನ್ಸೆಲಿಂಗ್‍ನಲ್ಲಿ ಭಾಗವಹಿಸಿದರೆ 25ಕ್ಕಿಂತ ಕಡಿಮೆ ಮಕ್ಕಳು ಇರುವ ಶಾಲೆಗಳ ಖಾಲಿ ಹುದ್ದೆಗಳು ಆನ್‍ಲೈನ್‍ನಲ್ಲಿ ತೋರಿಸುತ್ತಿಲ್ಲ. ಹೀಗಾಗಿ ಹೆಚ್ಚುವರಿ ಶಿಕ್ಷಕರು ಹಾಗೂ ಸಿಆರ್‌ಪಿಗಳು ಕೌನ್ಸೆಲಿಂಗ್‍ನಲ್ಲಿ ಸ್ಥಳ ಸಿಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆʼ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ʼಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಪ್ರತಿ ವಿದ್ಯಾರ್ಥಿಗೂ ಆಯಾ ಗ್ರಾಮದಲ್ಲಿ ಶಾಲೆ ಇರಬೇಕು. ದೂರವಿದ್ದರೆ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಎಂಬ ನಿಯಮವಿದೆ. ಆದರೆ, ಇಲಾಖೆಯು ಗಾಮ ಪಂಚಾಯಿತಿಗೊಂದು ಮ್ಯಾಗ್ನಿಫೈಡ್ ಶಾಲೆ, ಹೋಬಳಿಗೆ ಒಂದು ಕೆಪಿಎಸ್ ಶಾಲೆ, ತಾಲ್ಲೂಕಿಗೊಂದು ಪಿಎಂಶ್ರೀ ಶಾಲೆ ಹೆಸರಲ್ಲಿ ಸಣ್ಣ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿದೆʼ ಎಂದು ಆಪಾದಿಸಿದ್ದಾರೆ.

ʼಶಾಲೆ ಮುಚ್ಚಿದರೆ ಕನ್ನಡ ಭಾಷೆಯ ಭವಿಷ್ಯಕ್ಕೆ ಕುತ್ತು ಬರಲಿದೆ. ಸರ್ಕಾರಿ ಶಾಲೆಗಳು ಕನ್ನಡ ಮಾಧ್ಯಮದ ಆಧಾರವಾಗಿವೆ. ಅವನ್ನೇ ಮುಚ್ಚುವ ಕಾರ್ಯ ಖಂಡನೀಯ. ಇದರ ವಿರುದ್ಧ ಎಲ್ಲ ಕನ್ನಡ ಪರ ಸಂಘಟನೆಗಳು ಧ್ವನಿ ಎತ್ತಬೇಕಿದೆ. ಶಾಲಾ ಶಿಕ್ಷಣ ಇಲಾಖೆಯು ವರ್ಗಾವಣೆ ಕೌನ್ಸೆಲಿಂಗ್ ಮುಂದೂಡಿದ್ದು, ಮರು ಕೌನ್ಸೆಲಿಂಗ್ ನಡೆಸುವ ಜಿಲ್ಲೆಯಲ್ಲಿ ಎಲ್ಲ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಆನ್‍ಲೈನ್‍ನಲ್ಲಿ ಪ್ರಕಟಿಸಿ, ವರ್ಗಾವಣೆಯಲ್ಲಿ ಶಿಕ್ಷಕರಿಗೆ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಬೇಕುʼ ಎಂದು ಆಗ್ರಹಿಸಿದ್ದಾರೆ.

ʼಜಿಲ್ಲೆಯ ಅನೇಕ ಶಾಲೆಗಳಲ್ಲಿ 25ಕ್ಕಿಂತ ಹೆಚ್ಚು ಮಕ್ಕಳಿದ್ದರೂ ಒಬ್ಬರೂ ಕಾಯಂ ಶಿಕ್ಷಕರಿಲ್ಲ. ಗಡಿ ಭಾಗದ ಶಾಲೆಗಳು ಒಳಗೊಂಡಂತೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿಷಯಕ್ಕೊಬ್ಬರು ಶಿಕ್ಷಕರನ್ನು ನೇಮಿಸಿ ಗುಣಮಟ್ಟದ ಶಿಕ್ಷಣ ನೀಡುವುದು ಹಾಗೂ ಕನ್ನಡ ಶಾಲೆಗಳನ್ನು ಉಳಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆʼ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ವಡ್ಡರ್ಸೆ ನೆನಪು; ಬೆಳೆ ನೀಡದೆ ಹೋಯಿತೆ ‘ಮುಂಗಾರು’?

ʼಯಾವ ಕಾರಣಕ್ಕೂ ಕನ್ನಡ ಶಾಲೆಗಳನ್ನು ಮುಚ್ಚಬಾರದು. ಒಂದು ವೇಳೆ ಅಂತಹ ಕ್ರಮಕ್ಕೆ ಮುಂದಾದರೆ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಪರ ಹಾಗೂ ಶಿಕ್ಷಕರ ಸಂಘಟನೆಗಳೊಂದಿಗೆ ಬೀದಿಗಿಳಿದು ಹೋರಾಟ ನಡೆಸಲಿದೆʼ ಎಂದು ಚನ್ನಶೆಟ್ಟಿ ಎಚ್ಚರಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...