ಜಿಲ್ಲೆಯ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಐದು ಕಳವು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಐದು ಜನ ಆರೋಪಿಗಳನ್ನು ಬಂಧಿಸಿ, ಅವರಿಂದ ₹5.95 ಲಕ್ಷ ಮೌಲ್ಯದ 14 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.
ಔರಾದ್ (ಬಿ) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ₹95 ಸಾವಿರ ಮೌಲ್ಯದ ಎರಡು ಬೈಕ್ ಜಪ್ತಿ ಮಾಡಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಮನ್ನಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ₹1 ಲಕ್ಷ ಮೌಲ್ಯದ 2 ಬೈಕ್ ಹಾಗೂ ಇಬ್ಬರು ಆರೋಪಿಗಳ ಬಂಧಿಸಲಾಗಿದೆ. ಬಗದಲ್ ಠಾಣೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿ, ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ. ನೂತನ ನಗರ ಠಾಣೆ ಪೊಲೀಸರು ₹3.50 ಲಕ್ಷ ಬೆಲೆಬಾಳುವ 9 ಬೈಕ್ ಜಪ್ತಿ ಮಾಡಿ, ಒಬ್ಬ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದಾರೆ.

ಎಐ ಕ್ಯಾಮೆರಾ ತಂತ್ರಾಂಶದ ಸಹಾಯದಿಂದ ಕಳವು ಪ್ರಕರಣಗಳನ್ನು ಭೇದಿಸಲು ಸಾಧ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಮಾಂಜ್ರಾ ನದಿಯಲ್ಲಿ ಮುಳುಗಿ ರೈತ ಸಾವು : 5 ಲಕ್ಷ ಪರಿಹಾರ ಚೆಕ್ ವಿತರಣೆ