ಬೀದರ್‌ | ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸಮಿತಿ ರಚಿಸಿ : ನಾಗಲಕ್ಷ್ಮೀ ಚೌಧರಿ

Date:

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಸಮಿತಿಯನ್ನು ಎಲ್ಲ ಸರಕಾರಿ, ಅರೆ ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಸ್ಥಾಪಿಸಿ ಜನಜಾಗೃತಿ ಮೂಡಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.

- Advertisement -

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಮಹಿಳೆಯರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ʼಹತ್ತು ಮಂದಿಗಿಂತ ಹೆಚ್ಚು ಮಹಿಳಾ ಸಿಬ್ಬಂದಿ ಕಾರ್ಯನಿರ್ವಹಿಸುವ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಪಾಶ್ಚ ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ ಹಾಗೂ ಹೈಕೋರ್ಟ ನಿರ್ದೇಶನ ನೀಡಿದೆ. ಎಲ್ಲ ಸ್ಥಳಗಳಲ್ಲಿ ಮಹಿಳಾ ದೌರ್ಜನ್ಯ ತಡೆ ಸಮಿತಿ ಸ್ಥಾಪಿಸುವುದರಿಂದ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಹಿಡಿಯಬಹುದಾಗಿದೆ. ದೌರ್ಜನ್ಯ ತಡೆ ಬಗ್ಗೆ ಅರಿವು ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ಔರಾದ ಪಟ್ಟಣದಲ್ಲಿ ವಾಸಿಸುವ ಅಲೆಮಾರಿ ಜನಾಂಗದವರ ಕಾಲೋನಿಗೆ ಭೇಟಿ ನೀಡಿದ್ದೇನೆ, ಅವರು ಕನಿಷ್ಠ ಮೂಲ ಸೌಕರ್ಯ ಇಲ್ಲದೆ ಹಲವು ವರ್ಷಗಳಿಂದ ಜೀವನ ಸಾಗಿಸುತ್ತಿರುವುದು ನೋವಿನ ಸಂಗತಿ. ಅಲೆಮಾರಿಗಳ ಅಭಿವೃದ್ಧಿಗೆ ಅಗತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಔರಾದ್‌ನ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಗುಣಮಟ್ಟ ಆಹಾರ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಸೂಚಿಸಿದರು.

ಕಳೆದ 40 ವರ್ಷಗಳಿಂದ ಔರಾದ್ ಪಟ್ಟಣದ ಸೂರಿಲ್ಲದೆ ವಾಸಿಸುವ ಅಲೆಮಾರಿ ಸಮುದಾಯದವರಿಗೆ ಶಿಕ್ಷಣ, ಆರೋಗ್ಯ ಹಾಗೂ ಸಂಪರ್ಕಕ್ಕೆ ಅನುಕೂಲವಾಗುವಂತೆ ಪಟ್ಟಣಕ್ಕೆ ಸಮೀಪವಾಗುವಂತೆ ಭೂಮಿ ಒದಗಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರೊಂದಿಗೆ ಚರ್ಚಿಸಿದರು. ಔರಾದ್‌ನ ತಾಲ್ಲೂಕ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಎಲ್ಲ ಇಲಾಖೆಗಳ ಬಾಲಕಿಯರ ವಸತಿ ನಿಲಯಗಳ ನಿರ್ವಹಣೆ ಬಗ್ಗೆ ವರದಿ ನೀಡಬೇಕು. ಆಹಾರ, ಆರೋಗ್ಯ, ಸ್ವಚ್ಛತೆ, ಭದ್ರತಾ ವ್ಯವಸ್ಥೆ ಕುರಿತು ಒಂದು ವಾರದಲ್ಲಿ ವರದಿ ಸಲ್ಲಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಲೆಮಾರಿ ಗುಡಿಸಲಿಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ : ಅಧಿಕಾರಿ ಗೈರು, ತಹಶೀಲ್ದಾರ್‌ಗೆ ತರಾಟೆ

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸಿಂಧು ಎಸ್., ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ಬ್ರಿಮ್ಸ್ ನಿರ್ದೇಶಕ ಶಿವಕುಮಾರ ಶೆಟಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜ್ಞಾನೇಶ್ವರ ನಿರುಗುಡಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಚಾಕುವಿನಿಂದ ಇರಿದು ಮಾವನನ್ನೆ ಕೊಂದ ಅಳಿಯ

ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ,...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...