ಬೀದರ್‌ | ಒಂದೇ ವಾರದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ

Date:

ಕಳೆದ ಒಂದು ವಾರದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಪ್ರತ್ಯೇಕ ಘಟನೆಗಳು ಔರಾದ್‌ ತಾಲೂಕಿನ ಸಂತಪೂರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿವೆ.

- Advertisement -

ಪ್ರಕರಣ 1 : ಅಂದು ಅ.14ರ ಮಂಗಳವಾರ. ಔರಾದ್‌ ತಾಲ್ಲೂಕಿನ ಗಡಿಕುಶನೂರ ಗ್ರಾಮದ ವಿದ್ಯಾರ್ಥಿ ರಾಕೇಶ ಗಣಪತಿ (22) ಹೊಟ್ಟೆ ನೋವು ತಾಳಲಾರದೆ ಅಂದು ಸಂಜೆ ಮನೆಯಲ್ಲಿದ್ದ ಇಲಿಯ ಔಷಧಿ ಸೇವಿಸಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅ.15ರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿ ಬೀದರ್‌ನ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ. ಪದವಿ ಓದುತ್ತಿದ್ದರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರಕರಣ 2 : ಅಕ್ಟೋಬರ್‌ 19ರ ಭಾನುವಾರ ಸಂಜೆ ಹೊತ್ತು. ಔರಾದ್‌ ತಾಲ್ಲೂಕಿನ ಬೇಲೂರ‌ (ಎನ್) ಗ್ರಾಮದಲ್ಲಿ ಸಚಿನ್ ಕಾಶಿನಾಥ್ (19) ಎಂಬ ವಿದ್ಯಾರ್ಥಿ ಯಾವುದೋ ಕಾರಣಕ್ಕೆ ಮನಸ್ಸಿನ ಮೇಲೆ ಪರಿಣಾಮ ಮಾಡಿಕೊಂಡು ತನ್ನ ಹೊಲದ ಬಾವಿಯಲ್ಲಿ ಬಿದ್ದು ಜೀವ ಕಳೆದುಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ತೆರಳಿ ಶವ ಹೊರತೆಗೆದರು. ಮೃತ ವಿದ್ಯಾರ್ಥಿ ಬೀದರ್‌ನ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಇಂಜಿನಿಯರ್‌ ವ್ಯಾಸಂಗ ಮಾಡುತ್ತಿದ್ದರು.

ಪ್ರಕರಣ 3 : ಔರಾದ್‌ ತಾಲ್ಲೂಕಿನ ವಡಗಾಂವ (ದೇ) ಗ್ರಾಮದಲ್ಲಿ ಅ.19ರ ಭಾನುವಾರ ಸಂಜೆ ಕಾರ್ತಿಕ ಪ್ರಕಾಶ (19) ಎಂಬ ವಿದ್ಯಾರ್ಥಿ ಗ್ರಾಮದ ಹೊರವಲಯದ ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವಿದ್ಯಾರ್ಥಿ ಬೀದರ್‌ನ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ನರ್ಸಿಂಗ್‌ ವ್ಯಾಸಂಗ ಮಾಡುತ್ತಿದ್ದರು.

ಈ ಮೇಲಿನ ಪ್ರಕರಣ 1 ಮತ್ತು 2ರ ಜೀವ ಕಳೆದುಕೊಂಡ ಇಬ್ಬರು ವಿದ್ಯಾರ್ಥಿಗಳು ಒಂದೇ ದಿನ, ಅದೇ ಸಮಯಕ್ಕೆ ಪ್ರತ್ಯೇಕ ಕಡೆ ಬಾವಿಯಲ್ಲಿ ಹಾರಿದ್ದಾರೆ. ಇನ್ನು ಇಬ್ಬರು ವಡಗಾಂವ ಗ್ರಾಮದ ಪ್ರೌಢ ಶಾಲೆಯ ಸಹಪಾಠಿಗಳು ಎಂದು ತಿಳಿದು ಬಂದಿದೆ. ಆದರೆ, ಇಬ್ಬರ ಸಾವಿಗೂ ಖಚಿತ ಕಾರಣ ತಿಳಿದು ಬಂದಿಲ್ಲ.

ಈ ಮೇಲಿನ ಮೂರು ಘಟನೆಗಳು ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮೂರು ಪ್ರತ್ಯೇಕ ಯುಡಿಆರ್‌ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ 4 : ಔರಾದ್‌ ತಾಲ್ಲೂಕಿನ ಗಡಿಕುಶನೂರ ಗ್ರಾಮದಲ್ಲಿ ಅಕ್ಟೋಬರ್‌ 15ರಂದು ವಿದ್ಯಾರ್ಥಿ ರಾಕೇಶ ಆತ್ಮಹತ್ಯೆ ಮಾಡಿಕೊಂಡ ಮುಂಚೆ ದಿನ ಅದೇ ಗ್ರಾಮದ ಸುಧಾ ಪ್ರಕಾಶ ಎಂಬ 9ನೇ ತರಗತಿ ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ವಿದ್ಯಾರ್ಥಿ ಹುಮನಾಬಾದ್‌ ತಾಲ್ಲೂಕಿನ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ದಸರಾ ರಜೆ ನಿಮಿತ್ತ ಊರಿಗೆ ಬಂದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇದು ಪ್ರಕರಣ ದಾಖಲಾಗಿಲ್ಲ.

ಒಂದೇ ತಾಲ್ಲೂಕಿನ ಅಕ್ಕಪಕ್ಕದ ಗ್ರಾಮಗಳಲ್ಲಿ ವಾರದೊಳಗೆ ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ ಸುದ್ದಿ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ. ಮಕ್ಕಳ ಭವಿಷ್ಯದ ಬಗ್ಗೆ ನೂರಾರು ಕನಸು ಕಂಡಿದ್ದ ಪೋಷಕರು ಕಣ್ಣೀರಿನಲ್ಲಿ ಜೀವನ ಸಾಗಿಸುವಂತಾಗಿದೆ.

ಬದುಕಿನಲ್ಲಿ ಭರವಸೆ ಇರಲಿ :

ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ. ಬದುಕಿಗೆ ಭರವಸೆಯೇ ಮುಖ್ಯ. ಯುವ ಸಮುದಾಯ ಬದುಕಿನ ಬಗ್ಗೆ ಭರವಸೆ ಇಟ್ಟುಕೊಳ್ಳಬೇಕು. ಭರವಸೆಯೇ ಯಾವುದೇ ವ್ಯಕ್ತಿಯನ್ನು ಆತ್ಮಹತ್ಯೆ ಯೋಚನೆಯಿಂದ ಪಾರುಮಾಡುವ ಮಂತ್ರ. ಪೋಷಕರು ಮಕ್ಕಳ ಮೇಲೆ ನಿಗಾವಹಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಆತ್ಮಹತ್ಯೆ ಯೋಚನೆ ಸುಳಿಯದಂತೆ ನೋಡಿಕೊಳ್ಳಬೇಕು.

ಶಾಲಾ-ಕಾಲೇಜುಗಳಲ್ಲಿ ಮಾನಸಿಕ ಮತ್ತು ದೈಹಿಕ ಆರೋಗ್ಯ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಬೇಕು. ಖಿನ್ನತೆ, ಒತ್ತಡದಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರೊಂದಿಗೆ ಆಪ್ತ ಸಮಾಲೋಚನೆ ನಡೆಸುವ ವ್ಯವಸ್ಥೆ ಜೊತೆಗೆ ಅವರಿಗೆ ನೆರವು ಒದಗಿಸುವ ಕೆಲಸ ಆಗಬೇಕಿದೆ.

ಇದನ್ನೂ ಓದಿ : ಬರ-ನೆರೆ ಪರಿಹಾರ | ಹತ್ತು ವರ್ಷಗಳಲ್ಲಿ ಕರ್ನಾಟಕಕ್ಕೆ ಆದ ನಷ್ಟವೆಷ್ಟು? ಕೇಂದ್ರ ಸರ್ಕಾರ ಕೊಟ್ಟಿದ್ದೆಷ್ಟು?

ನೆನಪಿಡಿ : ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ…ಆತ್ಮಹತ್ಯೆಗಳಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್‌ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ-104,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...