ಬೀದರ್‌ | ರಿಶೈನ್‌ ಸಂಸ್ಥೆಯಿಂದ ಉಚಿತ ನೋಟ್‌ ಬುಕ್‌ ವಿತರಣೆ

Date:

ಬೀದರ್‌ ನಗರದ ರಿಶೈನ್ ಆರ್ಗನೈಜೇಶನ್‌ ವತಿಯಿಂದ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್‌, ಮೊರಂಬಿ ಹಾಗೂ ಔರಾದ್‌ ತಾಲೂಕಿನ ಸಂತಪೂರ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಕ್ಕಳ ದಿನಾಚರಣೆ ಪ್ರಯುಕ್ತ ಉಚಿತ ನೋಟ್‌ ಬುಕ್‌ ವಿತರಣೆ ಮಾಡಲಾಯಿತು.

- Advertisement -

ಸಂಸ್ಥೆಯ ಅಧ್ಯಕ್ಷ ರೋಹನ್‌ ಕುಮಾರ ಮಾತನಾಡಿ, ʼಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ನೋಟ್ ಬುಕ್, ಪೆನ್ ಹಾಗೂ ಬಟ್ಟೆ ವಿತರಿಸಲಾಗುತ್ತಿದೆ. ಮಕ್ಕಳಿಗೆ ಶಿಕ್ಷಣ ಜೊತೆಗೆ ಮಾನವೀಯ ಮೌಲ್ಯಗಳನ್ನು ತಿಳಿಸುವ ಕೆಲಸ ಆಗಬೇಕಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...
WhatsApp Image 2025 11 15 at 5.41.08 PM

ʼಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಯುವಕರು ದುಷ್ಚಟಗಳಿಗೆ ಬಲಿಯಾಗಿ ಅಮೂಲ್ಯ ಬದುಕು ಹಾಳುಮಾಡಿಕೊಳ್ಳುತ್ತಿದ್ದಾರೆ. ಮಕ್ಕಳು ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಂಡು ಉನ್ನತ ಹುದ್ದೆ ಪಡೆಯಬೇಕಿದೆ. ಶಿಕ್ಷಕರು, ವಿದ್ಯಾರ್ಥಿಗಳು ಸಮಾಜದಲ್ಲಿ ಮಾನವೀಯತೆ ಬಿತ್ತುವ ಕಾರ್ಯ ಮಾಡಬೇಕುʼ ಎಂದು ನುಡಿದರು.

ಇದನ್ನೂ ಓದಿ : ಬೀದರ್‌ | ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರಾದ ಸೈಮನ್, ಶ್ರೀಧರ್ ಸೋಮನೂರ್, ಸಿದ್ದಾರ್ಥ್ ಮಂಟಾಳೆ, ಸೂರ್ಯ ಮಚ್ಚೆ ಶ್ರೀ ಡೆಲ್ವಿನ್ ಮಾರ್ಕಸ್, ಬಾಬುರಾವ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...