ಬೀದರ್‌ | ಗಾಂಧೀಜಿ ವಿಚಾರಧಾರೆಗಳು ಇಂದಿಗೂ ಪ್ರಸ್ತುತ : ವಿಜಯಕುಮಾರ್‌ ಬಾವಗಿ

Date:

ಗಾಂಧೀಜಿಯವರ ಬಗ್ಗೆ ಇರುವ ಪ್ರಶ್ನೆಗಳಿಗೆ ಅವರೇ ಉತ್ತರವಾಗಿದ್ದರು. ಅವರು ತಮ್ಮ ಜೀವನದುದ್ದಕ್ಕೂ ಸತ್ಯ, ಅಹಿಂಸೆ ಮಾರ್ಗದಲ್ಲಿ ನಡೆದಿದ್ದರು ಎಂದು ಬೀದರ ನೂತನ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ವಿಜಕುಮಾರ ಬಾವಗಿ ಹೇಳಿದರು.

- Advertisement -

ಬುಧವಾರ ಬೀದರ್ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಜನಪದ ಕಲಾವಿದರ ಬಳಗ ಬೀದರ ಸಹಯೋಗದಲ್ಲಿ ಜರುಗಿದ ‘ಗಾಂಧೀಜಿಯವರ ವಿಚಾರ ಪ್ರಸ್ತುತತೆ ಯುವ ಜನತೆಗೆ’ ವಿಷಯ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

‘ಸ್ವತಂತ್ರ ಹೋರಾಟದ ಸಂದರ್ಭದಲ್ಲಿ ಎಲ್ಲರೂ ಒಂದೆಡೆ ಸೇರಲು ಅವಕಾಶ ಕಲ್ಪಿಸುವ ಮೂಲಕ ಮಹತ್ಮಾ ಗಾಂಧೀಜಿಯವರು ಕ್ಲಾಸ್ ಮ್ಯೂಮೆಂಟ್‌ನಿಂದ ಮಾಸ್ ಮ್ಯೂಮೆಂಟ್ ಆಗಿ ಪರಿವರ್ತನೆ ಮಾಡಿದರು. ಗಾಂಧೀಜಿ ವಿಚಾರಧಾರೆಗಳು ಇಂದಿಗೂ ನಮ್ಮ ಭಾರತ ಸಂವಿಧಾನದ ರಾಜ್ಯನೀತಿ ನಿರ್ದೇಶಕ ತತ್ವಗಳಲ್ಲಿ ಕಾಣಬಹುದು’ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಟಿ. ದಾಸರಹಳ್ಳಿ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕೆ.ಜಿ.ಎಸ್.ಎನ್ ಕಾರ್ಯಕ್ರಮ ಸಂಘಟಕರಾದ ಡಾ.ಅಬಿದ ಬೇಗಮ್ ಮಾತನಾಡಿ, ‘ಹೆಣ್ಣು ಮಕ್ಕಳು ಕೇವಲ ಅಕ್ಷರದ ಶಿಕ್ಷಣ ಪಡೆದರೆ ಸಾಲದು, ಬದುಕಿನ ಮೌಲ್ಯ ಶಿಕ್ಷಣ ಪಡೆಯಬೇಕು. ಆದರೆ, ಇಂದಿನ ಮಕ್ಕಳಿಗೆ ಮೌಲ್ಯಯುತ ಜೀವನದ ಶಿಕ್ಷಣ ನೀಡಲಾಗುತ್ತಿಲ್ಲ’ ಎಂದರು.

‘ಮಹಿಳೆಯರಲ್ಲಿ ಸ್ಪೂರ್ತಿ ತುಂಬುವ ಉದ್ದೇಶದಿಂದ ಮಹಿಳಾ ಕಾಲೇಜುಗಳಲ್ಲಿ ಹೆಚ್ಚಾಗಿ ಇಂತಹ ವಿಚಾರ ಸಂಕಿರಣಗಳು ಆಯೋಜಿಸುತ್ತಿದ್ದೇವೆ. ಹೆಣ್ಣು ಮಕ್ಕಳು ಇದರ ಲಾಭ ಪಡೆಯಬೇಕು. ಮಕ್ಕಳಲ್ಲಿ ಧೈರ್ಯ, ನಾಯಕತ್ವ ಗುಣ, ಸೇವಾ ಮನೋಭಾವ ಬೆಳೆಸಲು ಎನ್‌ಎಸ್‌ಎಸ್ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ತಮ್ಮಲ್ಲಿಯೇ ಬತ್ತಿ ಹೋಗದಂತೆ ಬಿಡದೆ ಇತರರಿಗೂ ಹಂಚಬೇಕು’ ಎಂದು ಕರೆ ನೀಡಿದರು.

WhatsApp Image 2024 11 07 at 3.15.24 PM 1

ಜಾನಪದ ಕಲಾವಿದರ ಬಳಗದ ಅಧ್ಯಕ್ಷ ವಿಜಕುಮಾರ ಸೋನಾರೆ ಮಾತನಾಡಿ, ‘ಮಕ್ಕಳಲ್ಲಿ ಗಾಂಧೀಜಿಯವರ ವಿಚಾರಧಾರೆಗಳನ್ನು ಬಿತ್ತುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಗಾಂಧೀಜಿ ಅವರ ಸತ್ಯ, ಅಹಿಂಸೆ, ತ್ಯಾಗ ಮಾರ್ಗವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮ ಸುತ್ತಮುತ್ತಲಿನ ಪರಿಸರವೂ ನಾವು ಸ್ವಚ್ಛವಾಗಿಡಬಹುದು’ ಎಂದರು.

ಗಾಂಧೀಜಿಯವರ ವಿದ್ಯಾರ್ಥಿ ಜೀವನ ಕುರಿತು ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಅಧ್ಯಕ್ಷೆ ಪಾರ್ವತಿ ವಿ. ಸೋನಾರೆ ಮಾತನಾಡಿ, ‘ಗಾಂಧೀಜಿಯವರ ಆಶಯಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಅಗತ್ಯವಿದೆ. ನಾವು ಕನ್ನಡಿಯಂತಾಗದೆ ಗಾಜಿನಂತಾಗಿ ಎರಡೂ ಮಗ್ಗಲು ವಿಮರ್ಶಿಸಬೇಕು. ಮಹಾತ್ಮರ ಜೀವನವನ್ನು ಆಳವಾಗಿ ಅದ್ಯಯನ ಮಾಡಬೇಕು. ಜಗತ್ತಿಗೆ ಶಾಂತಿ ಸಂದೇಶ ನೀಡಿದ ಗಾಂದೀಜಿಯವರ ಜೀವನ ಸಂದೇಶ ವಿದ್ಯಾರ್ಥಿಗಳು ಅಧ್ಯಯನ ನಡೆಸಬೇಕು’ ಎಂದು ಸಲಹೆ ನೀಡಿದರು.

ಗಾಂಧೀಜಿಯವರ ವಿಚಾರದಲ್ಲಿ ಮಹಿಳೆಯರ ಶಿಕ್ಷಣ ಕುರಿತು ಸಾಹಿತಿ ಕಸ್ತೂರಿ ಪಟಪಳ್ಳಿ ಅವರು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಕ್ಫ್ ಧರಣಿಗೂ, ಬಿಜೆಪಿ ಬಂಡಾಯಕ್ಕೂ ಶೋಭಾ ನಾಯಕಿಯಾಗಿದ್ದೇಕೆ?

ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಮನೋಜಕುಮಾರ ಕುಲಕರ್ಣಿ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಶ್ರೀನಿವಾಸ ರೆಡ್ಡಿ, ಡಾ.ವಿದ್ಯಾ ಪಾಟೀಲ್, ಸಹ ಪ್ರಾಧ್ಯಾಪಕಿ ವಿಜಯಲಕ್ಷ್ಮಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಭಾರತಿ ವಸ್ತ್ರದ, ಹಿರಿಯ ಸಾಹಿತಿ ಪುಣ್ಯವತಿ ವಿಸಾಜಿ, ಜಾನಪದ ಕಲಾವಿದರ ಬಳಗದ ಕಾರ್ಯದರ್ಶಿ ಯೇಸುದಾಸ ಅಲಿಯಂಬುರೆ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುನೀಲ ಭಾವಿಕಟ್ಟಿ, ಚಂದ್ರಕಾಂತ ಹಳ್ಳಿಖೇಡಕರ್, ಮಾರುತಿ ಏಣಕುರೆ, ಕುಪೇಂದ್ರ ಹೊಸಮನಿ, ಅಂಬರೇಶ ಮಲ್ಲೇಶಿ, ಬಾಲಾಜಿ ಜಬಾಡೆ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...