ಬಸವಕಲ್ಯಾಣ ತಾಲ್ಲೂಕಿನ ಮನ್ನಳ್ಳಿ ಗಡಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಠಾಳ ಠಾಣೆ ಪೊಲೀಸರು ಭಾನುವಾರ ಮಧ್ಯಾಹ್ನ ಬಂಧಿಸಿದ್ದಾರೆ.
ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ ಗ್ರಾಮದ ಶ್ಯಾಮ ಲಕ್ಷ್ಮಣ ಹಾಗೂ ಸೋಮನಾಥ ಗೋವಿಂದ, ವಿಜಯಕುಮಾರ್ ದಿಗಂಬರ ಹಾಗೂ ಬಳಿರಾಮ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದ ಧಾಕ್ಟೆವಾಡಿ ಕಡೆಯಿಂದ ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ ಗ್ರಾಮದ ಕಡೆಗೆ ಬೈಕ್ ಮೇಲೆ ಚೀಲದಲ್ಲಿ ಗಾಂಜಾ ಸಾಗಾಟ ಮಾಡುವ ವೇಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರಿಂದ ₹2.80 ಲಕ್ಷ ಮೌಲ್ಯದ 5.6 ಕೆಜಿ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಬಂಧಿತ ನಾಲ್ವರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಆನ್‌ಲೈನ್ ಗೇಮಿಂಗ್ : ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ
ಸಿಪಿಐ ಕೃಷ್ಣಕುಮಾರ್ ಮಾರ್ಗದರ್ಶನದಲ್ಲಿ ಮಂಠಾಳ ಠಾಣೆ ಪಿಎಸ್‌ಐ ಸುವರ್ಣ ಮಲ್ಲಶೆಟ್ಟಿ ನೇತ್ರತ್ವದಲ್ಲಿ ಪೊಲೀಸ್ ಸಿಬ್ಬಂದ ದಾಳಿ ನಡೆಸಿದರು. ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದೆ.