ಮಹಾರಾಷ್ಟ್ರದಿಂದ ಅಕ್ರಮವಾಗಿ ₹5.25 ಲಕ್ಷ ಮೌಲ್ಯದ ಗಾಂಜಾ ಖರೀದಿಸಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಸವಕಲ್ಯಾಣ ನಗರ ಠಾಣೆ ಪೊಲೀಸರು ಬಂಧಿಸಿ, ಅವರಿಂದ ಗಾಂಜಾ ಜಪ್ತಿ ಮಾಡಿದ್ದಾರೆ.
ಬಸವಕಲ್ಯಾಣ ನಗರ ಠಾಣೆಯ ವ್ಯಾಪ್ತಿಯ ಖಾನಾಪುರ ಶಿವಾರದ ರಾಜಮಾತಾ ಜೀಜಾವು ನಗರ ಲೇಔಟ್ ಸಮೀಪದಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಕುರಿತು ಖಚಿತ ಮಾಹಿತಿ ಮೇರೆಗೆ ಬಸವಕಲ್ಯಾಣ ನಗರ ಠಾಣೆ ಪಿಎಸ್ಐ ಚಂದ್ರಶೇಖರ್ ನಾರಾಯಣಪುರ ನೇತ್ರತ್ವದಲ್ಲಿ ದಾಳಿ ನಡೆಸಲಾಗಿದೆ.
ʼಬಂಧಿತರಿಂದ ₹5.25 ಲಕ್ಷ ಮೌಲ್ಯದ 5.25 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆʼ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
ಗೌಸೋದ್ದಿನ್, ವಿನೋದ, ಸೀಮನ್, ನಾಗರಾಜ, ಧರೆಪ್ಪಾ, ಶ್ರೀಕಾಂತ, ಭಾಗ್ಯವಂತ, ಮುತ್ತಪ್ಪಾ ಹಾಗೂ ನಜಬ್ ಕಾಜ್ಮಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.