ಭಾಲ್ಕಿ ಪಟ್ಟಣದ ಡಾ.ಅಂಬೇಡ್ಕರ್ ವೃತ್ತ ಸಮೀಪದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪಿಯು ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ (ಫೆ.23) ಗೋಲ್ಡನ್ ಸ್ಕಾಲರ್‌ಶಿಪ್ ಪರೀಕ್ಷೆ ಜರುಗಲಿದೆ ಎಂದು ಆಡಳಿತಾಧಿಕಾರಿ ಮೋಹನ ರೆಡ್ಡಿ ತಿಳಿಸಿದ್ದಾರೆ.
ʼಬೆಳಿಗ್ಗೆ 9 ಗಂಟೆಯಿಂದ ಪರೀಕ್ಷೆ ಪ್ರಾರಂಭಗೊಳ್ಳಲಿದ್ದು, ಅತಿ ಹೆಚ್ಚು ಅಂಕ ಪಡೆಯುವ 20 ವಿದ್ಯಾರ್ಥಿಗಳಿಗೆ ಉಚಿತ 2 ವರ್ಷ ಪಿಯುಸಿ ಶಿಕ್ಷಣ ಜತೆಗೆ ನೀಟ್, ಜೆಇಇ, ಕೆಸೆಟ್ ಪರೀಕ್ಷೆ ತರಬೇತಿ ನೀಡಲಾಗುತ್ತದೆ. ಜತೆಗೆ ಪರೀಕ್ಷೆಯಲ್ಲಿ ಹಾಜರಾದ ಮಕ್ಕಳಿಗೆ ಕಾಲೇಜು ಶುಲ್ಕದಲ್ಲಿ ರಿಯಾಯತಿ ನೀಡಲಾಗುತ್ತದೆʼ ಎಂದರು.
ಇದುವರೆಗೂ ಈ ಕಾಲೇಜಿನಲ್ಲಿ ಕಲಿತ 10ಕ್ಕೂ ಅಧಿಕ ವಿದ್ಯಾರ್ಥಿಗಳು ಎಂಬಿಬಿಎಸ್ ಮತ್ತು ಎಂಜನಿಯರಿಂಗ್ ಸೀಟು ಪಡೆದುಕೊಂಡಿದ್ದಾರೆ. ಅತಿ ಕಡಿಮೆ ಶುಲ್ಕದಲ್ಲಿ ಗುರುಕುಲ ಮಾದರಿ ಶಿಕ್ಷಣ ಸೌಲಭ್ಯ ಕಲ್ಪಿಸಲಾಗುತ್ತದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ : 5 ಜನ ಸಾವು, 7 ಜನರಿಗೆ ಗಾಯ
ʼಸುಸಜ್ಜಿತ ಕಟ್ಟಡ ಮತ್ತು ಅನುಭವಿ ಉಪನ್ಯಾಸಕ ಬಳಗ ಹೊಂದಿದೆ. ವಿಶೇಷವಾಗಿ ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಮಾಡುವ ವಿದ್ಯಾರ್ಥಿಗಳಿಗೆ ಹಿರೇಮಠ ಸಂಸ್ಥಾನದ ಪ್ರಸಾದ ನಿಲಯದಲ್ಲಿ ಉಚಿತ ಪ್ರವೇಶ ನೀಡಲಾಗುವುದು. ಪಾಲಕರು, ವಿದ್ಯಾರ್ಥಿಗಳು ಸದುಪಯೋಗ ಪಡೆದು ಕೊಳ್ಳಬೇಕುʼ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.