ಬೀದರ್‌ | ಸಮೀಕ್ಷೆಗಿರುವ ನ್ಯೂನತೆ ಸರಿಪಡಿಸಲು ಸರ್ಕಾರಿ ನೌಕರರ ಸಂಘ ಆಗ್ರಹ

Date:

ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಸಮೀಕ್ಷೆದಾರರಿಗೆ ದಸರಾ ರಜೆ ನೀಡುವುದು, ಸಮೀಕ್ಷೆಗಿರುವ ನ್ಯೂನತೆಗಳನ್ನು ಸರಿಪಡಿಸವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಎಂದು ಭಾಲ್ಕಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ತಾಲೂಕು ಸರಕಾರಿ ನೌಕರರ ಸಂಘ ಒತ್ತಾಯಿಸಿದೆ.

- Advertisement -

ಈ ಕುರಿತು ಭಾಲ್ಕಿ ಪಟ್ಟಣದ ತಹಸೀಲ್ ಕಚೇರಿಯಲ್ಲಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ ಮತ್ತು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಬನ್ನಾಳೆ ನೇತೃತ್ವದಲ್ಲಿ ಶುಕ್ರವಾರ ತಹಸೀಲ್ದಾರಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ʼಸಮೀಕ್ಷೆ ಕಾರ್ಯದಲ್ಲಿ ಕೈಗೊಂಡಿರುವ ಸಮೀಕ್ಷೆದಾರರು ಹಲವು ತಾಂತ್ರಿಕ ತೊಂದರೆ ಅನುಭವಿಸುತ್ತಿದ್ದಾರೆ. ಸಮೀಕ್ಷೆ ಕಾರ್ಯದಲ್ಲಿ ಇಂಟರ್‌ನೆಟ್ ಸಮಸ್ಯೆ ಎದುರಾಗುತ್ತಿದೆ. ಕುಟುಂಬ ಸದಸ್ಯರಿಗೆ ಒಟಿಪಿ ಸಮಸ್ಯೆ ಕಾಡುತ್ತಿದೆ. ಸಮೀಕ್ಷೆದಾರರಿಗೆ 150 ಮನೆಗಳನ್ನು ನಿಯೋಜಿಸಿರುವುದರಿಂದ ಕೆಲಸದ ಒತ್ತಡ ಹೆಚ್ಚಾಗುತ್ತಿದೆ. ಹಾಗಾಗಿ ಮೇಲಾಧಿಕಾರಿಗಳು ಗಮನ ಹರಿಸಿ ಸಮೀಕ್ಷೆಗಿರುವ ಎಲ್ಲ ಅಡೆತಡೆಗಳನ್ನು ನಿವಾರಿಸುವುದರ ಜತೆಗೆ ಸಮೀಕ್ಷೆದಾರರಿಗೆ ಇರುವ ಮನೆಗಳನ್ನು ಕಡಿತಗೊಳಿಸಬೇಕು. ಸಮೀಕ್ಷೆಯಲ್ಲಿ ಬಹುತೇಕ ಶಿಕ್ಷಕರೇ ಇದ್ದಾರೆ. ಆದ್ದರಿಂದ ಸಮೀಕ್ಷೆದಾರರಿಗೆ ತಮ್ಮ ಸೇವೆಯ ವ್ಯಾಪ್ತಿಯಲ್ಲಿ ಸಮೀಕ್ಷೆ ಕೈಗೊಳ್ಳಲು ಅವಕಾಶ ಕಲ್ಪಿಸಬೇಕುʼ ಎಂದು ಮನವಿ ಮಾಡಿದರು.

ʼಬಹುತೇಕ ಸಮೀಕ್ಷೆದಾರರಿಗೆ ಇನ್ನೂ ಸಮೀಕ್ಷೆ ಕಿಟ್ ತಲುಪಿರುವುದಿಲ್ಲ. ಕೂಡಲೇ ಸಮೀಕ್ಷೆ ಕಿಟ್ ವಿತರಿಸುವುದರ ಜತೆಗೆ ಸಮೀಕ್ಷೆಯಲ್ಲಿ ಪಾಲ್ಗೊಂಡ ಸಮೀಕ್ಷೆದಾರರಿಗೆ ನಾಡಿನ ದೊಡ್ಡ ಹಬ್ಬ ಆಗಿರುವ ದಸರಾ ಹಬ್ಬದಲ್ಲಿ ನಾಲ್ಕೈದು ದಿವಸ ರಜೆ ನೀಡಬೇಕು ಎಂದು ವಿನಂತಿಸಿದರು.

ಇದನ್ನೂ ಓದಿ : ಬೀದರ್‌ | ಭಾರಿ ಮಳೆ : ಒಡೆದ ಐತಿಹಾಸಿಕ ತ್ರಿಪುರಾಂತ ಕೆರೆ

ತಾಲೂಕು ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ರಾಜಪ್ಪ ಪಾಟೀಲ್, ಪ್ರಮುಖರಾದ ಅಶೋಕ ಕುಂಬಾರ, ವಸಂತ ಹುಣಸನಾಳೆ, ಪ್ರಭು ಡಿಗ್ಗೆ, ನಿರಂಜಪ್ಪ ಪಾತ್ರೆ, ಶಿವಕಾಂತ ಬಾಪುರ್ಸೆ, ಅಶೋಕ, ಗದಗೆಪ್ಪ ಪಾಟೀಲ್, ಕೃಷ್ಣ ಲಾಂಚಕರ್, ವೆಂಕಟ ಮಲಗೊಂಡ, ಪ್ರಕಾಶ, ವಿಶ್ವನಾಥ, ಓಂಕಾರ, ಮಲ್ಲಿಕಾರ್ಜುನ ಪಾಟೀಲ್, ದಯಾನಂದ ಕಣಜೆ, ಶಿವಕುಮಾರ ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...