ಬೀದರ್‌ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುವರ್ಣ ಮಹೋತ್ಸವ ಸಂಭ್ರಮ

Date:

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುವರ್ಣ ಮಹೋತ್ಸವ ಸಮಾರಂಭವನ್ನು ಮೇ 19 ಹಾಗೂ 20ರಂದು ಸಂಭ್ರಮದಿಂದ ನಡೆಯಿತು.

- Advertisement -

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಬೀದರ್ ವಿದ್ಯಾರ್ಥಿಗಳು ಯಾರಿಗಿಂತಲೂ ಕಡಿಮೆ ಇಲ್ಲ. ಅನೇಕರು ವಿಜ್ಞಾನಿಗಳಾಗಿದ್ದಾರೆ. ದೇಶ, ವಿದೇಶದಲ್ಲಿ ಉನ್ನತ ಹುದ್ದೆಗಳಲ್ಲಿದ್ದಾರೆ. 50 ವರ್ಷ ಪೂರೈಸಿರುವ ಕಾಲೇಜು ಸಾವಿರಾರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಮಾತನಾಡಿ, ʼಸರ್ಕಾರಿ ಕಾಲೇಜುಗಳಲ್ಲಿ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ಕೊಡಲಾಗುತ್ತಿದೆ. ಬಡ ಹಾಗೂ ಮಾಧ್ಯಮ ವರ್ಗದ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳ ಪ್ರಯೋಜನ ಪಡೆಯಬೇಕುʼ ಎಂದು ಹೇಳಿದರು.

ಪ್ರಾಚಾರ್ಯೆ ಡಾ.ಜೈಶ್ರೀ ಪ್ರಭಾ ಮಾತನಾಡಿ, ʼ1974 ರಲ್ಲಿ ಪ್ರಾರಂಭವಾದ ಕಾಲೇಜು ಯಶಸ್ವಿಯಾಗಿ 50 ವರ್ಷ ಪೂರೈಸಿದೆ. ಜಿಲ್ಲೆಯ ಶೈಕ್ಷಣಿಕ ಪ್ರಗತಿ ತನ್ನದೇ ಆದ ಕೊಡುಗೆ ನೀಡಿದೆ. ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಸ್ನಾತಕ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರ್ಣಗೊಳಿಸಿದ್ದಾರೆʼ ಎಂದು ತಿಳಿಸಿದರು.

ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಕಾಲೇಜಿನ ಸಿಬ್ಬಂದಿ ಕಾರ್ಯದರ್ಶಿ ಡಾ.ರಾಜಕುಮಾರ, ಸಾಂಸ್ಕೃತಿಕ ಕಾರ್ಯದರ್ಶಿ ಡಾ.ಎಲಿಷಾ ದೇವಿದಾಸ, ಡಾ.ಮಹಾದೇವಿ ಹೆಬ್ಬಾಳೆ, ಡಾ.ಜೈಭಾರತ ಮಂಗೇಶ್ಕರ್, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು. ಪಾಲಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಕನ್ನಡದ ಹಿರಿಮೆಯನ್ನು ಬಾನೆತ್ತರಕ್ಕೆ ಏರಿಸಿದ ಬಾನು ಮುಷ್ತಾಕ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...