ಬೀದರ್‌ | ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿ

Date:

ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‍ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘವು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ʼರಾಜ್ಯದ 102 ಸರ್ಕಾರಿ ಪಾಲಿಟೆಕ್ನಿಕ್‍ಗಳಲ್ಲಿ 1,600 ಅತಿಥಿ ಉಪನ್ಯಾಸಕರು ಇದ್ದಾರೆ. ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಅನೇಕರು ವಯೋಮಿತಿ ಮೀರುವ ಹಂತದಲ್ಲಿದ್ದಾರೆ. ಅದಾಗಿಯೂ ಅವರಿಗೆ ಸೇವಾ ಭದ್ರತೆ ಕಲ್ಪಿಸಿಲ್ಲ ಎಂದು ಸಂಘದ ರಾಜ್ಯ ಅಧ್ಯಕ್ಷ ಪ್ರವೀಣಕುಮಾರ ಮೀರಾಗಂಜಕರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ʼಗುತ್ತಿಗೆ ನೌಕರರಿಗೆ ಬೇರೆ ಇಲಾಖೆಗಳಲ್ಲಿ 12 ತಿಂಗಳಲ್ಲಿ ಒಂದು ದಿನದ ಸಂಬಳ ಕಡಿತಗೊಳಿಸಿ, ಸಂಬಳ ಕೊಡಲಾಗುತ್ತಿದೆ. ಆದರೆ, ಪಾಲಿಟೆಕ್ನಿಕ್ ಅತಿಥಿ ಉಪನ್ಯಾಸಕರಿಗೆ 10 ತಿಂಗಳ ವೇತನ ಮಾತ್ರ ನೀಡಲಾಗುತ್ತಿದೆ. ಪಾಲಿಟೆಕ್ನಿಕ್‍ಗಳಲ್ಲಿ ಹೊಸ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದೆ, ಈಗಿರುವ ಅತಿಥಿ ಉಪನ್ಯಾಸಕರನ್ನೇ ಕಾಯಂಗೊಳಿಸಬೇಕುʼ ಎಂದು ಒತ್ತಾಯಿಸಿದರು.

ʼಗುಜರಾತ್, ಹರಿಯಾಣ ಮಾದರಿಯಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು. ಪ್ರಶ್ನೆ ಪತ್ರಿಕೆ ಮೌಲ್ಯಮಾಪನ, ತರಬೇತಿಗೆ ಅವಕಾಶ ನೀಡಬೇಕು. ಮಹಿಳಾ ಅತಿಥಿ ಉಪನ್ಯಾಸಕರಿಗೆ ಹೆರಿಗೆ ರಜೆ ಕೊಡಬೇಕು. ಪ್ರತಿ ತಿಂಗಳು ವೇತನ ಬಿಡುಗಡೆ ಮಾಡಬೇಕುʼ ಎಂದು ಬೇಡಿಕೆ ಮಂಡಿಸಿದರು.

ಇದನ್ನೂ ಓದಿ : ಕನ್ನಡ ರಾಜೋತ್ಸವ | ಕರ್ನಾಟಕ ಸರ್ವಧರ್ಮ ಸಮನ್ವಯ ನಾಡು : ಸಚಿವ ಈಶ್ವರ ಖಂಡ್ರೆ

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಕಾಂತ ವಿಶ್ವಕರ್ಮ, ಪ್ರಮುಖರಾದ ಸಂತೋಷ್ ಲದ್ದೆ, ನಿತೀಶ್ ಕಾರಬಾರಿ, ಶರಣಬಸಪ್ಪ ವಾಲೆ, ಅವಿನಾಶ್, ಗೋವಿಂದ ನಾಯಕ್, ಫಾತಿಮಾ ಫಾರೂಕ್, ಕೀರ್ತಿ ಹಾಪಲಿ, ಅಶ್ವಿನಿ, ಪೂರ್ಣಿಮಾ ಸ್ವಾಮಿ, ಪ್ರವೀಣ್ ತೋರಣೆ, ಹುಸ್ನಜಬೀನ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...