ಬೀದರ್ | ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡದ ಆರೋಪ : ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿ ಅಮಾನತು

Date:

ಶಾಲಾ ಮಕ್ಕಳಿಗೆ ಸರಿಯಾಗಿ ಬೋಧನೆ ಮಾಡದೇ ಇರುವುದು ಹಾಗೂ ಸರ್ಕಾರಿ ನೌಕರರಲ್ಲದ ರೀತಿಯಲ್ಲಿ ವರ್ತಿಸಿರುವುದು ಸಾಬೀತಾದ ಹಿನ್ನೆಲೆ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿಯೊಬ್ಬರನ್ನು ಅಮಾನತು ಮಾಡಲಾಗಿದೆ.

- Advertisement -

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೌರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಸಮಾಜ ಶಿಕ್ಷಕಿ ಶ್ರೀದೇವಿ ಚಿರಡೆ ಎಂಬುವರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕ ಸುರೇಶ ಹೆಚ್.ಜಿ. ಅವರು ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಶಿಕ್ಷಕಿ ಶ್ರೀದೇವಿ ಅವರು ಕಳೆದ 12 ವರ್ಷಗಳಿಂದ ಸದರಿ ಶಾಲೆಯಲ್ಲಿ ಸಮಾಜ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆಗೆಸೇರಿದ ಬಳಿಕ ಅವರು ಬೋಧಿಸುವ ಪಾಠ ಯಾವ ಮಕ್ಕಳಿಗೂ ಅರ್ಥವಾಗುತ್ತಿಲ್ಲ. ಇವರ ಬೋಧನೆ ಬಗ್ಗೆ ಗ್ರಾಮಸ್ಥರು ಅನೇಕ ಸಲ ಶಾಲಾ ಮುಖ್ಯಗುರು, ಮೇಲಾಧಿಕಾರಿಗಳ ಗಮನಕ್ಕೆ ತಂದು ದೂರು ನೀಡಿದರೂ ಯಾವುದೇ ರೀತಿಯ ಬದಲಾವಣೆ ಆಗುತ್ತಿಲ್ಲ ಎಂದು ಆರೋಪಿಸಿ ಅದೇ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಶಾಂತವೀರಯ್ಯ ಕೋಮಾರೆ ಅವರು ಡಿಡಿಪಿಐ ಅವರಿಗೆ ದೂರು ಸಲ್ಲಿಸಿದ್ದರು.

‘ಗ್ರಾಮಸ್ಥರಿಗೆ ಮತ್ತು ಇಲಾಖೆಯ ಅಧಿಕಾರಿಗಳಿಗೆ ಯಾವುದೇ ಕಿಮತ್ತು ಕೊಡದೆ ಮನಬಂದಂತೆ ಹಿಯಾಳಿಸಿ, ಬೈದು ಅವಮಾನಿಸುತ್ತಾರೆ. ಸದರಿ ಶಿಕ್ಷಕಿಯನ್ನು ಅಮಾನತುಗೊಳಿಸಿ ಶಾಲೆಯ ಮಕ್ಕಳ ಭವಿಷ್ಯ ಕಾಪಾಡಬೇಕೆಂದು ಅವರು ದೂರು ನೀಡಿದರು. ದೂರಿನ ಅನ್ವಯ ಬಸವಕಲ್ಯಾಣ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೇಮಿಸಿ ಸತ್ಯಾಸತ್ಯತೆ ಕುರಿತು ಪರಿಶೀಲಿಸಿ ವರದಿ ನೀಡುವಂತೆ ತಿಳಿಸಲಾಗಿತ್ತು.

ಇದನ್ನೂ ಓದಿ : ಬೀದರ್ | ಲಿಂಗತ್ವ ಅಲ್ಪಸಂಖ್ಯಾತ ಯುವತಿ ಮೇಲೆ ಹಲ್ಲೆ : ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬಿಇಒ ಅವರು ವಿಚಾರಣೆ ನಡೆಸಿ, ಸದರಿ ಶಿಕ್ಷಕಿ ಅವರು ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮಗಳು ಉಲ್ಲಂಘಿಸಿ ಸರ್ಕಾರಿ ನೌಕರರಲ್ಲದ ರೀತಿಯಲ್ಲಿ ವರ್ತಿಸಿರುವುದು ಸಾಬೀತಾದ ಹಿನ್ನೆಲೆ ವಿಚಾರಣೆ ಕಾಯ್ದಿರಿಸಿ ಗೌರ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿ ಶ್ರೀದೇವಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಡಿಡಿಪಿಐ ಸುರೇಶ್ ಹೆಚ್.ಜಿ. ಅವರು ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರದ ಕೊಂಬೆ ಬಿದ್ದು ವ್ಯಕ್ತಿಗೆ ಶಾಶ್ವತ ಅಂಗವೈಕಲ್ಯ; ₹2.77 ಕೋಟಿ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಗುಲ್ಮೋಹರ್‌ ಮರದ ಕೊಂಬೆ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...