ಬೀದರ್‌ | ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ : ರೈತ ಸಂಘ ಆಗ್ರಹ

Date:

ಬೀದರ್ ಕೃಷಿ ಅವಲಂಬಿತ ಜಿಲ್ಲೆಯಾಗಿರುವುದರಿಂದ ರೈತರ ಆರ್ಥಿಕತೆ ಬೆಳವಣಿಗೆ ಕುರಿತು ಸರ್ಕಾರ ಹೆಜ್ಜೆ ಇಡುತ್ತಿಲ್ಲ. ಇದರಿಂದ ರೈತರು ಸಾಲದ ಸುಳಿಗೆ ಸಿಲುಕಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಲಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

- Advertisement -

ಈ ಸಂಬಂಧ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, ʼಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಕಾರ್ಖಾನೆಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿ ಕಬ್ಬಿಗೆ ₹2,700 ಬೆಲೆ ನಿಗದಿಯಾಗಿದೆ. ಆದರೆ ಯಾವುದೇ ಕಾರ್ಖಾನೆಗಳು ಕಬ್ಬಿಗೆ ₹2,700 ದರದಂತೆ ಖರೀದಿಸಿ ಪಾವತಿಸಿಲ್ಲ. ಕಬ್ಬು ಕಟಾವು ಆದ 15 ದಿನದಲ್ಲಿ ರೈತರಿಗೆ ಹಣ ಪಾವತಿಸಬೇಕೆಂಬ ನಿಯಮವಿದ್ದರೂ 3 ತಿಂಗಳಾದರೂ ಹಣ ಪಾವತಿಸುತ್ತಿಲ್ಲ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಗಮನ ಹರಿಸಬೇಕುʼ ಎಂದರು.

ʼನೆಟೆ ರೋಗದಿಂದ ತೊಗರಿ ಬೆಳೆ ಹಾನಿಯಾದ ರೈತರಿಗೆ ಪರಿಹಾರ ಪಾವತಿಸುತ್ತಿಲ್ಲ. ನೆಪ ಮಾತ್ರಕ್ಕೆ ಸೋಯಾ ಖರೀದಿ ಕೇಂದ್ರ ತೆರೆಯಲಾಗಿದ್ದು, ಕೆಲ ರೈತರ ಸೋಯಾ ಮಾತ್ರ ಖರೀದಿಸಲಾಗಿದೆ. ನೋಂದಣಿಯಾದ ಉಳಿದ ರೈತರ ಸೋಯಾ ಖರೀದಿಸಿಲ್ಲ. ಡಿಸಿಸಿ ಬ್ಯಾಂಕ್‌ನಲ್ಲಿ ರೈತರಿಗೆ ಹೊಸ ಸಾಲ, ಸರಕಾರದಿಂದ ಘೋಷಣೆಯಾದ ರಿಯಾಯಿತಿ ಸಾಲ ಸಿಗುತ್ತಿಲ್ಲ. ಬೆಳೆ ನಷ್ಟದಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ ರೈತರಿಗೆ ಬ್ಯಾಂ‌ಕ್‌ ಅಧಿಕಾರಿಗಳು ಸಾಲ ಮರುಪಾವತಿಸುವಂತೆ ಕಿರುಕುಳ ನೀಡುತ್ತಿದ್ದಾರೆ. ಇದನ್ನು ಸರ್ಕಾರ ಯಾಕೆ ತಡೆಯುತ್ತಿಲ್ಲʼ ಎಂದು ಪ್ರಶ್ನಿಸಿದರು.

ʼಸರ್ಕಾರ ಒಮ್ಮೆಯೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತಿಲ್ಲ. ಇದರಿಂದ ಬಹಳಷ್ಟು ರೈತರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಬೆಳೆ ವಿಮೆ ಪಾವತಿಸಿದ ರೈತರಿಗೆ ವಿಮೆ ಹಣ ಜಮೆ ಮಾಡಬೇಕು. ಮನರೇಗಾ ಯೋಜನೆಯಡಿ ರೈತರ ಹೊಲಗಳಲ್ಲಿ ಕಳೆ, ಕುಂಟೆ, ಔಷಧಿ, ಭತ್ತ ಕಟಾವಿಗೆ ಹಣ ಮೀಸಲಿಡಬೇಕು. ರೈತರ ಜಮೀನುಗಳಿಗೆ ಸರಿಯಾಗಿ ವಿದ್ಯುತ್‌ ನೀಡಬೇಕು. ಕಾಡು ಪ್ರಾಣಿಗಳಿಂದ ಮತ್ತು ಬೆಂಕಿಗಾಹುತಿಯಿಂದ ಬೆಳೆ ನಾಶವಾದ ರೈತರಿಗೆ ಸರ್ಕಾರದಿಂದ ವೈಜ್ಞಾನಿಕ ಪರಿಹಾರ ಒದಗಿಸುವ ಕಾನೂನು ಜಾರಿಗೊಳಿಸಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಕ್ಕಿಜ್ವರ : ಜಿಲ್ಲೆಯ ಗಡಿಗಳಲ್ಲಿ 13 ಚೆಕ್‍ಪೋಸ್ಟ್‌ ಸ್ಥಾಪನೆ

ಕರ್ನಾಟಕ ರಾಜ್ಯ ರೈತ ಸಂಘದ ಪ್ರಮುಖರಾದ ನಾಗಶೆಟ್ಟಪ್ಪ ಲಂಜವಾಡೆ, ವೀರಾರೆಡ್ಡಿ ಪಾಟೀಲ, ರುದ್ರಯ್ಯಾ ಸ್ವಾಮಿ, ಬಸವರಾಜ ಅಷ್ಟೂರ್, ವಿಠ್ಠಲರೆಡ್ಡಿ ಆಣದೂರ, ಸೋಮನಾಥ ಎಣಕೂರ, ಖಾನ್‌ ಸಾಬ್,‌ ಷಣ್ಮುಖಪ್ಪಾ ಆಣದೂರ, ರಾಜಕುಮಾರ, ಕಲ್ಲಪ್ಪಾ ಗೌದೆ, ಗುಂಡೇರಾವ ಕುಲಕರ್ಣಿ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಉಡುಪಿ | ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ: ‘ಹಿಂದೂ ಹುಲಿಗಳು’ ಈಗ ಎಲ್ಲಿದ್ದಾರೆ? : ಸುಂದರ ಮಾಸ್ತರ್

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ದೇವರ ಪೂಜೆಗೆ...

ಬೀದರ್‌ | ಬಿರುಸಿನ ಮಳೆ; ಬಾಡುವ ಬೆಳೆಗಳಿಗೆ ಜೀವಕಳೆ

ಮಳೆಗಾಲದಲ್ಲಿಯೂ ಬೇಸಿಗೆಯ ಧಗೆಗೆ ತತ್ತರಿಸಿದ್ದ ಜನರಿಗೆ ಗುರುವಾರ ಸಂಜೆ ಜಿಲ್ಲೆಯ ವಿವಿಧೆಡೆ...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...