ಬೀದರ್‌ | ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ; ಚಾಟಿ ಏಟು ತಿಂದ ಶಾಸಕ ಶರಣು ಸಲಗರ

Date:

ಅತಿವೃಷ್ಟಿ ಬಾಧಿತ ಬಸವಕಲ್ಯಾಣ ಕ್ಷೇತ್ರದ ರೈತರ ಪ್ರತಿ ಎಕರೆಗೆ ₹25,000 ಪರಿಹಾರ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಸವಕಲ್ಯಾಣದಲ್ಲಿ ಶುಕ್ರವಾರ ಶಾಸಕ ಶರಣು ಸಲಗರ ನೇತ್ರತ್ವದಲ್ಲಿ ಬಿಜೆಪಿಯಿಂದ ಬೃಹತ್‌ ಅರೆಬೆತ್ತಲೆ ಪ್ರತಿಭಟನೆ ನಡೆಯಿತು.

- Advertisement -

ಮಹಾತ್ಮ ಗಾಂಧಿ ವೃತ್ತದಿಂದ ಆರಂಭವಾದ ಮೆರವಣಿಗೆ ಡಾ.ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡಿತು. ಮೆರವಣಿಗೆಯಲ್ಲಿ ತಾಲ್ಲೂಕಿನ ಅಪಾರ ಸಂಖ್ಯೆಯಲ್ಲಿ ಜನರು ಸೇರಿದರು. ಮೆರವಣಿಗೆಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪರಿಹಾರಕ್ಕೆ ಆಗ್ರಹಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್ ದತ್ತಾತ್ರೇಯ ಗಾದಾ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...
WhatsApp Image 2025 10 18 at 7.00.21 AM
ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು.

ಶಾಸಕ ಶರಣು ಸಲಗರ ಮಾತನಾಡಿ, ʼಮುಂಗಾರು ಹಂಗಾಮಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಸೋಯಾಬಿನ್, ತೊಗರಿ, ಹೆಸರು, ಉದ್ದು ಮತ್ತಿತರರ ಬೆಳೆಗಳು ಸಂಪೂರ್ಣ ಹಾಳಾಗಿವೆ. ರೈತರ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿ ಹೋಗಿದೆ. ಆದರೆ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲದ್ದರಿಂದ ಅವರು ಸ್ಪಂದಿಸುತ್ತಿಲ್ಲ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ದಿಕ್ಕುತೋಚದಂತಾಗಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಶರಣು ಸಲಗರ ಅವರು ಕೇವಲ ಚಡ್ಡಿ ಹಾಕಿಕೊಂಡು ತಲೆಗೆ ಹಸಿರು ಟವೆಲ್ ಕಟ್ಟಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅವರು, ತಾವೇ ಬಾರುಕೋಲಿನಿಂದ ಮೈಗೆ ಹೊಡೆದುಕೊಂಡರು. ಬಳಿಕ ರೈತರಿಂದ ಚಾಟಿ ಏಟು ತಿಂದರು. ಇದರಿಂದ ಬರೆ ಎಳೆದಂತೆ ಗಾಯಗಳಾಗಿ ಅವರ ಬೆನ್ನು, ಹೊಟ್ಟೆ ಕೆಂಪುಕೆಂಪಾಗಿತ್ತು.

WhatsApp Image 2025 10 18 at 7.01.17 AM

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಪಾಟೀಲ, ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಜ್ಞಾನೇಶ್ವರ ಮುಳೆ, ನಗರ ಘಟಕದ ಅಧ್ಯಕ್ಷ ಸಿದ್ದು ಬಿರಾದಾರ ಹಾಗೂ ಇತರೆ ಪದಾಧಿಕಾರಿಗಳು, ಕಾರ್ಯಕರ್ತರು, ರೈತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

WhatsApp Image 2025 10 18 at 7.03.42 AM
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಗ್ಯಾನೇಶ ಕುಮಾರ್ ರಾಜೀನಾಮೆ ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

ಎಸ್ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶಕುಮಾರ ರಾಜೀನಾಮೆ ನೀಡುವಂತೆ ಆಗ್ರಹಿಸಿ,...

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ...