ಬೀದರ್‌ | ಶಾಸಕ ಪ್ರಭು ಚವ್ಹಾಣ ಪುತ್ರನ ಅತ್ಯಾಚಾರ ಪ್ರಕರಣ ಎಸ್‌ಐಟಿಗೆ ಒಪ್ಪಿಸಿ : ರವೀಂದ್ರ ಸ್ವಾಮಿ

Date:

ಪುತ್ರನ ಅತ್ಯಾಚಾರ ಪ್ರಕಣಕ್ಕೆ ಕುಮ್ಮಕ್ಕು ನೀಡುತ್ತಿರುವ ಔರಾದ ಕ್ಷೇತ್ರದ ಹಾಲಿ ಶಾಸಕ ಪ್ರಭು ಚವ್ಹಾಣ ಅವರನ್ನು ಕೂಡಲೇ ಬಂಧಿಸಬೇಕು. ಅತ್ಯಾಚಾರ ಆರೋಪ ಹೊತ್ತಿರುವ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ ಚವ್ಹಾಣ ವಿರುದ್ಧದ ಪ್ರಕರಣವನ್ನು ಎಸ್‌ಐಟಿ ತನಿಖೆಯಾಗಬೇಕು ಎಂದು ಏಕತಾ ಫೌಂಡೇಶನ್ ಅಧ್ಯಕ್ಷ ರವೀಂದ್ರ ಸ್ವಾಮಿ ತಿಳಿಸಿದರು.

- Advertisement -

ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ʼಮಹಾರಾಷ್ಟ್ರ ಮೂಲದ ಸಂಧ್ಯಾ ರಾಠೋಡ್ ಎಂಬ ಯುವತಿಗೆ ಕಳೆದ ವರ್ಷ ವಿವಾಹವಾಗುವುದಾಗಿ ನಂಬಿಸಿ ಬೆಂಗಳೂರು, ಶಿರಡಿ ಸೇರಿದಂತೆ ಅನೇಕ ಕಡೆ ಕರೆದೊಯ್ದು ಆಕೆಯ ಶೀಲ ಹಾಳು ಮಾಡಿರುವುದು ಅಲ್ಲದೆ ಆಕೆಯೊಂದಿಗೆ ನಿಶ್ಚಿತಾರ್ಥ ನಡೆದಿತ್ತು. ನಿಶ್ಚಿತಾರ್ಥ ಕುರಿತು ಶಾಸಕ ಪ್ರಭು ಚವ್ಹಾಣ ಅವರ ಮನೆಗೆ ಯುವತಿಯ ಪೋಷಕರು ತೆರಳಿದಾಗ ಯುವತಿಯ ತಾಯಿಗೆ ಹಲ್ಲೆ ಮಾಡಿ, ತನ್ನ ಪ್ರಭಾವ ಬಳಸಿ ಅವರ ಮೇಲೆಯೇ ಪ್ರಕರಣ ದಾಖಲಿಸಿರುವುದು ನಾಚಿಕೆಗೇಡಿನ ಸಂಗತಿʼ ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ʼಈ ಹಿಂದೆ ಔರಾದ ತಾಲೂಕಿನ ಮತ್ತೋರ್ವ ಯುವತಿಯೊಂದಿಗೂ ಪ್ರತೀಕ ಚವ್ಹಾಣ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ನಂಬಿಸಿ ಅವರಿಂದ 26 ಎಕರೆ ಜಮೀನು ವಶಪಡಿಸಿಕೊಂಡು ಅವರ ಕುಟುಂಬವನ್ನು ಬೀದಿಗೆ ತಳ್ಳಿದ್ದಾರೆ. ಹೀಗೆ ಅನೇಕ ಯುವತಿಯರ ಬದುಕು ಹಾಳು ಮಾಡುತ್ತಿದ್ದಾರೆ. ಪುತ್ರನ ಇಂತಹ ಕೃತ್ಯದ ಖಂಡಿಸಿ ಬುದ್ಧಿ ಹೇಳಬೇಕಾದ ಶಾಸಕ ಪ್ರಭು ಚವ್ಹಾಣ ಅವರು ತಮ್ಮ ಪುತ್ರನ ಪರ ಪತ್ರಿಕಾಗೋಷ್ಠಿ ನಡೆಸಿ ಈ ಪ್ರಕರಣವನ್ನು ಬೇರೆಡೆ ತಿರುಗಿಸುವ ಪ್ರಯತ್ನಿಸಿ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಇತರರ ಹೆಸರು ಪ್ರಸ್ತಾಪ ಮಾಡಿದ್ದಾರೆʼ ಎಂದು ಕಿಡಿಕಾರಿದರು.

ʼಕಳೆದ ಒಂದೂವರೆ ದಶಕದಿಂದ ಔರಾದ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ನೆಲಕಚ್ಚಿದೆ. ಭೂಕಬಳಿಕೆ ಮುಗಿಲು ಮುಟ್ಟಿದೆ. ಅತ್ಯಾಚಾರ
ತಾಂಡವವಾಡುತ್ತಿದೆ. ತಮ್ಮ ರಾಜಕೀಯ ಪ್ರಭಾವ ಬಳಸಿ ಅತ್ಯಾಚಾರ ಪ್ರಕರಣಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಏಕತಾ ಫೌಂಡೇಶನ್ ಜೊತೆ ಗುರುತಿಸಿಕೊಂಡಿರುವ ಔರಾದ, ಕಮಲನಗರ ತಾಲೂಕಿನ ಹಲವು ಮುಖಂಡರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಅವರನ್ನು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡಿದ್ದಾರೆʼ ಎಂದು ಆರೋಪಿಸಿದರು.

ʼಈ ಪ್ರಕರಣದ ನೊಂದ ಯುವತಿಯರಿಗೆ ನ್ಯಾಯ ದೊರೆಯುವವರೆಗೂ ಏಕತಾ ಫೌಂಡೇಶನ್ ಅವರ ಬೆನ್ನಿಗೆ ನಿಲ್ಲಲಿದೆ. ಅತ್ಯಾಚಾರದ ಆರೋಪ ಎದುರಿಸುತ್ತಿರುವ ಪ್ರತೀಕ ಚವ್ಹಾಣ ಅವರ ಪ್ರಕರಣ ನಿಶ್ಚಿತಾರ್ಥಕ್ಕೂ ಮೊದಲು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಯುವತಿಯೊಂದಿಗೆ ನಡೆದ ಅತ್ಯಾಚಾರ ಕುರಿತಾದ ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸಲಿʼ ಒತ್ತಾಯಿಸಿದರು.

ಇದನ್ನೂ ಓದಿ : ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಚಿಂತಕರ ಆಗ್ರಹ

ಪತ್ರಿಕಾಗೋಷ್ಠಿಯಲ್ಲಿ ತೇಜರಾವ ಮೂಳೆ, ಅಶೋಕ ಪಾಟೀಲ ಹೊಕ್ರಾಣಾ, ಸಂದೀಪ ಪಾಟೀಲ ಹಂಗರಗಾ, ಧನಾಜಿ ಕಾಂಬಳೆ, ಪ್ರಭು ಸ್ವಾಮಿ, ಹಣ್ಮು ಪಾಜಿ, ಪ್ರಕಾಶ ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...