ಬೀದರ್ | ವಸತಿ ಶಾಲೆ ಪ್ರಾಚಾರ್ಯರ ವಿರುದ್ಧ ಕಿರುಕುಳ ಆರೋಪ; ಕಠಿಣ ಕ್ರಮಕ್ಕೆ ಡಿವಿಪಿ ಆಗ್ರಹ

Date:

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಬೀದರ್‌ ಜಿಲ್ಲೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ. ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶೆಟ್ಟಿ ಕುಲಕರ್ಣಿಯನ್ನು ಕೂಡಲೇ ಹುದ್ದೆಯಿಂದ ಅಮಾನತು ಮಾಡಿ ತನಿಖೆ ನಡೆಸುವಂತೆ ಬೀದರ್ ಜಿಲ್ಲಾ ದಲಿತ ವಿ‌ದ್ಯಾರ್ಥಿ ಪರಿಷತ್ ಒತ್ತಾಯಿಸಿದೆ.

“ಸರ್ಕಾರಿ ವಸತಿ ಶಾಲೆಗಳಲ್ಲಿ ಓದುವ ಮಕ್ಕಳು ಆರ್ಥಿಕವಾಗಿ ಬಡವರಾಗಿರುತ್ತಾರೆ. ತಮ್ಮ ಮನೆಯಲ್ಲಿ ವಿದ್ಯಾಭ್ಯಾಸ ನಡೆಸಲು ತೊಂದರೆಯಾಗುವ ಮಕ್ಕಳು ಹೆಚ್ಚು ವಸತಿ ಶಾಲೆಗಳ ಮೊರೆ ಹೋಗುತ್ತಾರೆ. ಇದನ್ನೇ ದುರುಪಯೋಗ ಪಡಿಸಿಕೊಂಡ ಪ್ರಾಂಶುಪಾಲರು ಇಂತಹ ಹೀನ ಕೃತ್ಯಗಳನ್ನು ನಡೆಸುತ್ತಾರೆ. ಶಾಲೆಯಲ್ಲಿ ಕಲಿಸುವ ಶಿಕ್ಷಕರು ಅದರಲ್ಲಿಯೂ ವಸತಿ ಶಾಲೆಯ ಶಿಕ್ಷಕರು ಅಲ್ಲಿ ವಿದ್ಯಾಭ್ಯಾಸ ಪಡೆಯುವ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಂಡು ಶಿಕ್ಷಣ ನೀಡಬೇಕು. ಇಂತಹ ಹೀನ ಕೆಲಸಗಳಿಂದ ಎಲ್ಲ ವಸತಿ ಶಾಲೆಗಳ ಮೇಲೆ ಪಾಲಕರಿಗೆ ಅನುಮಾನ ಮೂಡುತ್ತದೆ. ಇದರಿಂದ ವಸತಿ ಶಿಕ್ಷಣದಿಂದ ಪಾಲಕರು ತಮ್ಮ ಮಕ್ಕಳನ್ನು ದೂರ ಇಡುವ ಕಲ್ಪನೆ ಮೂಡುತ್ತದೆ ಎಂಬುದಕ್ಕೆ ಇದೊಂದು ಪ್ರಕರಣ ಸಾಕ್ಷಿಯಾಗುತ್ತದೆ” ಎಂದು ಆರೋಪಿಸಿದರು.

“ತಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಕುರಿತು ವಸತಿ ಶಾಲೆಯ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತಮಗೆ ಆದ ಅನ್ಯಾಯದ ಬಗ್ಗೆ ತಮ್ಮ ಕೈ ಬರಹದ ಮೂಲಕ ಅಲ್ಲಿನ ಮೇಲ್ವಿಚಾರಕರ ಗಮನಕ್ಕೆ ತಂದಿದ್ದಾರೆ. ಆದರೆ ಪತ್ರ ಬರೆದು 10 ದಿನಗಳಾದರೂ ಅಲ್ಲಿನ ಶಿಕ್ಷಕ ವೃಂದ ಯಾವುದೇ ಸ್ಪಂದನೆ ನೀಡದಿರುವುದು ಪ್ರಾಂಶುಪಾಲರನ್ನು ರಕ್ಷಿಸುವ ಕೆಲಸ ಮಾಡಿದಂತಿದೆ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಾಸ್ಟೆಲ್‌ ವಾರ್ಡನ್‌ ಅಮಾನತಿಗೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಆಗ್ರಹ

“ಬೀದರ್ ಜಿಲ್ಲಾಧಿಕಾರಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾ ಸಮನ್ವಯ ಅಧಿಕಾರಿಗಳು ಈ ಪ್ರಕಾರವನ್ನು ಗಂಭೀರವಾಗಿ ಪರಿಗಣಿಸಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶೆಟ್ಟಿ ಕುಲಕರ್ಣಿಯನ್ನು ಅಮಾನತು ಮಾಡಿ ಸಂಪೂರ್ಣ ಶಿಕ್ಷಕ ವೃಂದವನ್ನು ತನಿಖೆ ಮಾಡಿ ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲಿನ ವಿದ್ಯಾರ್ಥಿನಿಯರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಜಿಲ್ಲೆಯಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು” ಎಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾಧ್ಯಕ್ಷ ಸಂದೀಪ್ ಕಾಂಟೆ ಎಚ್ಚರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ....

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...