ಜಿಲ್ಲಾದ್ಯಂತ ಸತತವಾಗಿ ಮಳೆಯಾಗುತ್ತಿರುವುದರಿಂದ ವಿಧ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಆ.29) ರಂದು ಶುಕ್ರವಾರ ರಜೆ ಘೋಷಿಸಲಾಗಿದೆ.
ತೀವ್ರವಾಗಿ ಮಳೆಯಾಗುತ್ತಿದ್ದು, ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮೌಖಿಕ ಆದೇಶದಲ್ಲಿ ತಿಳಿಸಿದ್ದಾರೆ.
ಅಧಿಕ ಮಳೆ ಕಾರಣದಿಂದ ನಿನ್ನೆ ಆ.28 ರಂದು ಬೀದರ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಗುರುವಾರ ಇಡೀ ದಿನ ಬಿಟ್ಟು ಬಿಡದೆ ಸತತ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಇದನ್ನೂ ಓದಿ : ಬೀದರ್ | ಮಳೆ ಅಬ್ಬರ, ನದಿ, ಕೆರೆಗಳಲ್ಲಿ ಉಬ್ಬರ, ಜನಜೀವನ ತತ್ತರ!