ಬೀದರ್‌ | ಧಾರಾಕಾರ ಮಳೆ : ಮನೆಗೆ ನುಗ್ಗಿದ ನೀರು, ಸ್ಥಳಕ್ಕೆ ಧಾವಿಸಿದ ತಹಸೀಲ್ದಾರ್

Date:

ಸೋಮವಾರ ಸುರಿದ ಧಾರಾಕಾರ ಮಳೆಗೆ ಔರಾದ್‌ ತಾಲ್ಲೂಕಿನ ಮಮದಾಪುರ ಗ್ರಾಮದ ಬಡಾವಣೆಯೊಂದರ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತು.

- Advertisement -

ಬೆಳಿಗ್ಗೆ ಬಿಸಿಲು ವಾತಾವರಣ ಇತ್ತು. ಸಂಜೆ ದಟ್ಟ ಮೋಡ ಕವಿದು ಆರಂಭವಾದ ಮಳೆ ಬಿಟ್ಟುಬಿಡದೆ ಸುರಿಯಿತು. ಮಳೆ ನೀರು ತಗ್ಗು ಪ್ರದೇಶದಲ್ಲಿ ಇರುವ ಮನೆಗಳಿಗೆ ಹೊಳೆಯಂತೆ ಹರಿಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಳೆಯ ಮುನ್ಸೂಚನೆ ಇಲ್ಲದೆ ಬಡಾವಣೆಯ ಜನರಿಗೆ ಮಳೆ ನೀರು ಮನೆಗೆ ನುಗ್ಗಿದಾಗ ಆತಂಕಕ್ಕೆ ಒಳಗಾದರು. ತಗ್ಗು ಪ್ರದೇಶದಲ್ಲಿರುವ ಭೀಮರಾವ್‌ ಕೊಟಗೀರೆ, ಜೈವಂತ ಕೊಟಗೀರೆ, ಕೇರೋಬಾ ಸೇರಿದಂತೆ ಇತರರ ಮನೆಗಳಿಗೆ ನೀರು ನುಗ್ಗಿದೆ.

ವಿಷಯ ತಿಳಿದು ತಹಸೀಲ್ದಾರ್‌ ಮಹೇಶ ಪಾಟೀಲ್‌ ಭೇಟಿ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು. ಅಗ್ನಿಶಾಮಕ ಸಿಬ್ಬಂದಿ ಹಾಗೂ ಗ್ರಾಮಸ್ಥರು ಮನೆಗಳಲ್ಲಿ ಸಿಲುಕಿದ ಮಹಿಳೆಯರು, ಮಕ್ಕಳಿಗೆ ಹಾಗೂ ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

ಬೀದರ್‌ ಜಿಲ್ಲಾದ್ಯಂತ ಸೋಮವಾರ ಬಿರುಸಿನ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು. ಬೀದರ್‌ ನಗರದ ಮುಖ್ಯ ರಸ್ತೆಗಳು ಜಲಾವೃತಗೊಂಡು ಸವಾರರು ಪರದಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...