ಬೀದರ್, ಔರಾದ್, ಚಿಟ್ಟಗುಪ್ಪ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಗುಡುಗು ಸಹಿತ ಮಳೆ ಸುರಿಯಿತು.
ಮಧ್ಯಾಹ್ನ 2ಗಂಟೆವರೆಗೆ 40 ಡಿಗ್ರಿ ಸೆಲ್ಸಿಯಸ್ ಆಸುಪಾಸು ಬಿಸಿಲು ದಾಖಲಾಗಿತ್ತು. ತದನಂತರ ದಟ್ಟ ಕಾರ್ಮೋಡ ಕವಿದು ಅರ್ಧಗಂಟೆಗೂ ಹೆಚ್ಚು ಕಾಲ ಬಿರುಗಾಳಿ, ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.
ಕಳೆದ ನಾಲ್ಕೈದು ದಿನಗಳಿಂದ ಗರಿಷ್ಠ ತಾಪಮಾನದಿಂದ ಕಂಗೆಟ್ಟಿದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಸಂಜೆವರೆಗೂ ಮೋಡ ಕವಿದು ತಂಪು ಗಾಳಿ ಮುಂದುವರೆದಿತ್ತು.
ಔರಾದ್ ತಾಲ್ಲೂಕಿನ ಮಮದಾಪುರ ಗ್ರಾಮದ ಹಾವಯ್ಯ ಬಸಯ್ಯಾ ಎಂಬುವವರಿಗೆ ಸೇರಿದ ಎರಡು ಎತ್ತುಗಳು ಸಿಡಿಲಿಗೆ ಮೃತಪಟ್ಟಿವೆ. ಚಿಟಗುಪ್ಪ ತಾಲ್ಲೂಕಿನ ಕಂದಗೂಳ ಗ್ರಾಮದಲ್ಲಿ ಸಿಡಿಲಿಗೆ ತೆಂಗಿನ ಮರದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಈ ಸುದ್ದಿ ಓದಿದ್ದೀರಾ? ಬೀದರ್ | ಕಲ್ಲಂಗಡಿ ಕೃಷಿಯಲ್ಲಿ ಸಿರಿ ಕಂಡ ಯುವಕ : ವರ್ಷಪೂರ್ತಿ ಬೆಳೆ; ಲಕ್ಷ ಲಕ್ಷ ಆದಾಯದ ಹೊಳೆ!