ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

Date:

Advertisements

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸರ್ಕಾರ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾ ಮಂಡಳಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಸಂಘಟನೆಯ ಪ್ರಮುಖರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತ ಅಧಿಕಾರಿಗೆ ಸಲ್ಲಿಸಿದರು.

ʼರೈತರು ಸಾಲದಲ್ಲಿ ಬದುಕಿ ಸಾಲದಲ್ಲೇ ಮರಣ ಹೊಂದುತ್ತಿರುವ ದುಸ್ಥಿತಿ ತಡೆಯಬೇಕು. ಕೆಲ ಬ್ಯಾಂಕ್‌ನವರು ರೈತರ ಸಾಲದ ಕುರಿತು ಕೋರ್ಟ್‌ಗಳಲ್ಲಿ ದಾವೆ ಹೂಡಿ ರೈತರಿಗೆ ಮಾನಸಿಕ ಕಿರುಕುಳ ನೀಡುತ್ತಿರುವುದು ನಿಲ್ಲಿಸಬೇಕು. ಕೃಷಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ರೈತ-ಕೃಷಿಕರ ಕಲ್ಯಾಣ ಮಂಡಳಿ ರಚಿಸಬೇಕುʼ ಎಂದು ಆಗ್ರಹಿಸಿದರು.

Advertisements

ʼರೈತರಿಗೆ ಬರುವ ಸರ್ಕಾರಿ ಸೌಲಭ್ಯ ಹಣವನ್ನು ಕೆಲ ಬ್ಯಾಂಕ್‌ಗಳು ನೇರವಾಗಿ ಕಡಿತ ಮಾಡುತ್ತಿರುವ ಅಕ್ರಮ ತಡೆಯಬೇಕು. ಜಿಲ್ಲೆಯ ಹಳ್ಳಿಖೇಡ(ಬಿ) ಸಮೀಪದ ಬೀದರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಿಸಿ, ಕಾರ್ಮಿಕರ ಬಾಕಿ 35 ಕೋಟಿ ಹಣ ತಕ್ಷಣ ಬಿಡುಗಡೆ ಮಾಡಬೇಕು. ರಸಗೊಬ್ಬರ ವಿತರಣೆಯಲ್ಲಿ ಆಗುತ್ತಿರುವ ಅಕ್ರಮಗಳನ್ನು ತಡೆದು, ರೈತರಿಗೆ ಸಕಾಲದಲ್ಲಿ ಲಭ್ಯವಾಗುವಂತೆ ಕ್ರಮ ವಹಿಸಬೇಕುʼ ಎಂದು ಒತ್ತಾಯಿಸಿದರು.

ರೈತರಿಗೆ ಹಗಲು ವೇಳೆಯಲ್ಲೇ ನಿರಂತರ ವಿದ್ಯುತ್ ಪೂರೈಕೆ ಒದಗಿಸಬೇಕು, ವಿದ್ಯುತ್ ಖಾಸಗೀಕರಣ ಮಸೂದೆ ಹಿಂಪಡೆಯಬೇಕು. ರೈತರ ಮತ್ತು ಕೃಷಿ ಕಾರ್ಮಿಕರ ಎಲ್ಲಾ ಸಾಲಗಳನ್ನು ಮನ್ನಾ ಮಾಡಬೇಕು. ರೈತರು ಮತ್ತು ಕೃಷಿ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದುʼ ಎಂದು ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಅಖಿಲ ಭಾರತ ಕಿಸಾನ್ ಸಭೆಯ ಮುಖಂಡರಾದ ಬಾಬುರಾವ ಹೊನ್ನಾ, ಸೂರ್ಯಕಾಂತ ಮದಕಟ್ಟಿ, ನಜೀರ ಅಹ್ಮದ್, ಎಂ.ಡಿ. ಶಫಾಯತ್ ಅಲಿ, ಎಂಡಿ ವಹೀದ್‌ಮಿಯ್ಯಾ ಸಂತಪೂರ, ಜೈಶೀಲಾ, ಮುನಿರೋದ್ದೀನ್, ಮೋತಿರಾಮ, ಪ್ರಭು ತಗಣಿಕರ್, ರಾಮಣ್ಣಾ, ಶೀಲ ಸಾಗರ, ಸುಜನಾರಾಣಿ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X