ಬೀದರ್‌ | ಹೇಮರೆಡ್ಡಿ ಮಲ್ಲಮ್ಮ ಬದುಕು ಮನುಕುಲಕ್ಕೆ ಆದರ್ಶ : ಸಚಿವ ರಹೀಂ ಖಾನ್

Date:

14ನೇ ಶತಮಾನದ ಶಿವಶರಣರಲ್ಲಿ ಪ್ರಜ್ವಲಿಸಿದ ಹೇಮರೆಡ್ಡಿ ಮಲ್ಲಮ್ಮ ದೈವಭಕ್ತಿ, ಕಾಯಕ ನಿಷ್ಠೆ, ದಾನ ಧರ್ಮದಿಂದ, ಆದರ್ಶ ಗೃಹಿಣಿಯಾಗುವ ಮೂಲಕ ಲೋಕ ಪ್ರಸಿದ್ಧಿ ಪಡೆದಿದ್ದರು. ಶ್ರೀಶೈಲ ಮಲ್ಲಿಕಾರ್ಜುನನ್ನು ಸಾಕ್ಷಾತ್ಕರಿಸಿಕೊಂಡ ಹೇಮರೆಡ್ಡಿ ಮಲ್ಲಮ್ಮ ಬದುಕು ಮನುಕುಲಕ್ಕೆ ಆದರ್ಶ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಹೇಳಿದರು.

- Advertisement -

ನಗರದ ಹೇಮರೆಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ‌ ಶನಿವಾರ ಆಯೋಜಿಸಿದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ʼಮಹಾತ್ಮರು ಕೇವಲ ಒಂದು ಜಾತಿಗೆ ಸೀಮಿತರಾಗಬಾರದು. ಹೇಮರೆಡ್ಡಿ ಮಲ್ಲಮ್ಮ ಅವರ ಆದರ್ಶಗಳನ್ನು ತಾವೆಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಈ ಮೂಲಕ ಸನ್ಮಾರ್ಗದಲ್ಲಿ ಸಾಗಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಶಾಸಕ ಡಾ.ಶೈಲೆಂದ್ರ ಬೆಲ್ದಾಳೆ ಮಾತನಾಡಿ, ʼಹೇಮರೆಡ್ಡಿ ಮಲ್ಲಮ್ಮ ಅವರ ಪರಮ ಶಿವಭಕ್ತೆ. ತಮ್ಮ ಸಮಾಜದವರದ್ದು ಬೇಡುವ ಕೈಯಾಗಬಾರದು ಕೊಡುವ ಕೈಯಾಗಬೇಕು ಎನ್ನುವುದು ಮಲ್ಲಮ್ಮನವರ ಆಸೆಯಾಗಿತ್ತು ಅದರಂತೆ ರೆಡ್ಡಿ ಸಮಾಜ ಈಗ ಬಲಿಷ್ಠ ಸಮಾಜವಾಗಿದೆ. ಸಮಾಜದವರ ಮನವೀಯಂತೆ ಸಮುದಾಯ ಭವನಕ್ಕಾಗಿ 15 ಲಕ್ಷ ಅನುದಾನ ನೀಡಿದ್ದೇನೆʼ ಎಂದರು.

ಹಿರಿಯ ಉಪನ್ಯಾಸಕ ಶಿವಶರಣಪ್ಪಾ ಹುಗ್ಗಿ ಪಾಟೀಲ್ ಹೇಮರೆಡ್ಡಿ ಮಲ್ಲಮ್ಮ ಜೀವನ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಸರ್ಕಾರಿ ಸೇವೆಗೆ ಆಯ್ಕೆಯಾದ, ಮುಂಬಡ್ತಿ, ನಿವೃತ್ತರಾದ ಹಾಗೂ ಎಂಬಿಬಿಎಸ್ ಪದವಿ ಪಡೆದವರಿಗೆ ಸನ್ಮಾನಿಸಲಾಯಿತು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಪೌರಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್, ಬೀದರ ನಗರಸಭೆ ಅಧ್ಯಕ್ಷ ಮಹ್ಮದ ಗೌಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2025 05 10 at 8.11.43 PM

ನಗರಸಭೆ ಸದಸ್ಯ ರಾಜು ಚಿಂತಾಮಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಎನ್.ವಿ.ಗುರೂಜಿ, ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಶಂಕರರೆಡ್ಡಿ ಚಿಟ್ಟಾ, ನಿವೃತ್ತ ಎಡಿಸಿ ಬಾಬುರೆಡ್ಡಿ ಸಂಗ್ರಾಮ ರೆಡ್ಡಿ, ಗೋಪಾಲ್ ರೆಡ್ಡಿ, ರವಿ ರೆಡ್ಡಿ, ಚಂದ್ರಶೇಖರ ರೆಡ್ಡಿ, ಶ್ರೀನಿವಾಸ್ ರೆಡ್ಡಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಮಾತ್ರಭಾಷೆ ಕನ್ನಡದಲ್ಲೇ 4,321 ವಿದ್ಯಾರ್ಥಿಗಳು ಫೇಲ್!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...