ಬೀದರ್‌ | ಶನಿವಾರದ ಶಾಲಾ ಸಮಯ ಬದಲಾವಣೆಗೆ ಪ್ರೌಢ ಶಾಲಾ ಶಿಕ್ಷಕರ ಸಂಘ ಮನವಿ

Date:

ಬೀದರ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶನಿವಾರದ ಸಮಯ ಬದಲಾವಣೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘ ಪದಾಧಿಕಾರಿಗಳು ಮಂಗಳವಾರ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಲೀಂ ಪಾಶಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ʼಇಲಾಖೆಯ ಆದೇಶದ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಿಂದ ಶನಿವಾರ ಬೆಳಿಗ್ಗೆ 7:30 ರಿಂದ ಮಧ್ಯಾಹ್ನ 12ರವರೆಗೆ ತರಗತಿ ನಡೆಸಲಾಗುತ್ತಿದೆ. ಆದರೆ, ಈ ಅವಧಿ ಅನುಕೂಲಕರವಾಗಿರದ ಕಾರಣ ಅರ್ಧಕ್ಕೂ ಹೆಚ್ಚು ಮಕ್ಕಳು ವಿಳಂಬ ಇಲ್ಲವೇ ಗೈರು ಹಾಜರಾಗುತ್ತಿದ್ದಾರೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ʼಶಿಕ್ಷಕರು ಸಕಾಲಕ್ಕೆ ಹಾಜರಾಗುತ್ತಿದ್ದರೂ, ಶಾಲೆ ಅವಧಿ ಬೇಗ ಇರುವುದರಿಂದ ವಾಹನ ಸೌಕರ್ಯ ಹಾಗೂ ಇತರ ಕಾರಣಗಳಿಂದ ಬಹಳಷ್ಟು ಮಕ್ಕಳಿಗೆ ಶಾಲೆಗೆ ಬರಲು ವಿಳಂಬವಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ವಿಶೇಷವಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆʼ ಎಂದು ಹೇಳಿದರು.

ಈ ಹಿಂದಿನಂತೆ ಶನಿವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ತರಗತಿ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಮಂಡಿಸಿದರು.

ಇದನ್ನೂ ಓದಿ : ಬೀದರ್‌ | ಸರ್ಕಾರಿ ಶಾಲೆ ಉಳಿವಿಗಾಗಿ ದುಂಡು ಮೇಜಿನ ಸಭೆ : ಚಳವಳಿಗೆ ಸಿದ್ಧತೆ

ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಸೂರ್ಯಕಾಂತ, ತಾಲ್ಲೂಕು ಘಟಕದ ಗೌರವಾಧ್ಯಕ್ಷ ಶಕೀಲ್ ಜಾಫ್ರಿ, ಅಧ್ಯಕ್ಷ ವೈಜಿನಾಥ ಸಾಳೆ, ಪ್ರಧಾನ ಕಾರ್ಯದರ್ಶಿ ಬಲವಂತರಾವ್ ರಾಠೋಡ್, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಜು ಸಾಗರ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರ ಬಾಪುರೆ, ಪ್ರಮುಖರಾದ ಎಂ.ಡಿ. ಶಾಬುದ್ದೀನ್, ಶಾಮಸುಂದರ ಖಾನಾಪುರೆ, ಸಂಜೀವ್ ರಾಜನಾಳೆ, ಜೈಸಿಂಗ್ ಠಾಕೂರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...