ಬೀದರ್ | ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ, ವಿದ್ಯಾರ್ಥಿಗೆ ಗಂಭೀರ ಗಾಯ; ಗ್ರಾಮಸ್ಥರ ಪ್ರತಿಭಟನೆ

Date:

ರಾಷ್ಟ್ರೀಯ ಹೆದ್ದಾರಿ ‘161ಎ’ಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜೀರ್ಗಾ (ಬಿ) ಗ್ರಾಮದಲ್ಲಿ ನಡೆದಿದೆ.

- Advertisement -

ಘಟನೆಯಲ್ಲಿ ಜೀರ್ಗಾ(ಬಿ) ಗ್ರಾಮದ ವಿದ್ಯಾರ್ಥಿ ವಿಕಾಸ ಸೋಪಾನ (14) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಔರಾದ ಕಡೆಯಿಂದ ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿ 10 ಅಡಿ ಹಾರಿ ಬಿದಿದ್ದಾರೆ. ಘಟನೆಯು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.

ಗ್ರಾಮಸ್ಥರ ಪ್ರತಿಭಟನೆ: ಅಪಘಾತ ಸಂಭವಿಸಿದನ್ನು ಖಂಡಿಸಿ ಗ್ರಾಮಸ್ಥರು ಹೆದ್ದಾರಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಿದ್ಯಾರ್ಥಿಗೆ ಪರಿಹಾರ ಒದಗಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಹಂಪ್ಸ್‌ ಹಾಕಬೇಕು. ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಶೀಘ್ರವೇ ಕಾಮಗಾರಿ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಔರಾದ್ ತಹಶೀಲ್ದಾರ್ ಮಲ್ಲಶೆಟ್ಟಿ ಚಿದ್ರೆ, ಸಿಪಿಐ ಆರ್.ಕೆ ಠಾಕೂರ್, ಸಂತಪೂರ ಠಾಣೆ ಪಿಎಸ್ಐ ನಂದಕುಮಾರ್ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...