ಬೀದರ್‌ | ಸಕಾಲಕ್ಕೆ ಸಿಗದ ಗೌರವಧನ : 147 ಅತಿಥಿ ಶಿಕ್ಷಕರು ಹೈರಾಣು

Date:

ಔರಾದ್‌-ಕಮಲನಗರ ಅವಳಿ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 147 ಅತಿಥಿ ಶಿಕ್ಷಕರಿಗೆ 3 ತಿಂಗಳಿನಿಂದ ಗೌರವ ಧನ ಜಮೆಯಾಗಿಲ್ಲ. ಸರ್ಕಾರದ ಬಿಡಿಗಾಸು ಗೌರವಧನ ನಂಬಿಕೊಂಡು ಜೀವನ ನಡೆಸುತ್ತಿರುವ ಅತಿಥಿ ಶಿಕ್ಷಕರು ಸಾಲದಲ್ಲೇ ದಿನದೂಡುತ್ತಿದ್ದಾರೆ.

- Advertisement -

ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 632 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರಿಗೆ ₹10 ಸಾವಿರ ಗೌರವಧನ ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರಿಗೆ ಗೌರವಯುತವಾಗಿ ಬದುಕಲು ನಿಗದಿತ ಸಮಯಕ್ಕೆ ಸರ್ಕಾರ ಸಂಭಾವನೆ ಹಣ ಪಾವತಿಸಬೇಕು. ಆದರೆ, ತಿಂಗಳುಗಟ್ಟಲೆ ಕಾಯಬೇಕಾಗಿದೆ. ಅಲ್ಲಿಯವರೆಗೆ ನಮ್ಮ ಪಾಡೇನುʼ ಎಂದು ಅತಿಥಿ ಶಿಕ್ಷಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ʼಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ತಾಲ್ಲೂಕಿನ ಅತಿಥಿ ಶಿಕ್ಷಕರಿಗೆ ಈಗಾಗಲೇ ಜನವರಿ ತನಕ ಗೌರವಧನ ಪಾವತಿಸಲಾಗಿದೆ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳ ನಿಷ್ಕಾಳಜಿಯಿಂದ ಔರಾದ್‌ ತಾಲ್ಲೂಕಿನ ಪ್ರಾಥಮಿಕ ಅತಿಥಿ ಶಿಕ್ಷಕರಿಗೆ 2024ನೇ ಸಾಲಿನ ಅಕ್ಟೊಬರ್‌, ನವೆಂಬರ್‌ ಹಾಗೂ ಡಿಸೆಂಬರ್‌ ತಿಂಗಳ ವೇತನ ನೀಡದೆ ಬಾಕಿ ಉಳಿಸಿಕೊಂಡಿದೆʼ ಎಂದು ಅತಿಥಿ ಶಿಕ್ಷಕರು ಗೋಳು ತೋಡಿಕೊಂಡಿದ್ದಾರೆ.

ಈ ಹಿಂದೆ ಕೂಡ ಜೂನ್‌ನಿಂದ ಅಕ್ಟೋಬರ್‌ವರೆಗೆ ಅತಿಥಿ ಶಿಕ್ಷಕರಿಗೆ ಗೌರವಧನ ಸಿಗದೇ ಇರುವ ಕಾರಣಕ್ಕೆ ವರ್ಷಕ್ಕೊಮ್ಮೆ ಬರುವ ದಸರಾ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪರರ ಬಳಿ ಸಾಲ ಪಡೆದು ನಿರಾಸೆಯಿಂದ ಹಬ್ಬ ಆಚರಿಸುವ ಪರಿಸ್ಥಿತಿ ಬಂದಿತ್ತು. ತದನಂತರ ವೇತನ ಜಮೆಯಾಗಿತ್ತು. ಈಗ ಮತ್ತೆ ಅಕ್ಟೊಬರ್‌ದಿಂದ ಡಿಸೆಂಬರ್‌ವರೆಗೆ ಮೂರು ತಿಂಗಳ ಗೌರವಧನ ಜಮೆ ಬಿಡುಗಡೆ ಮಾಡದೆ ಜನವರಿ ತಿಂಗಳ ಗೌರವಧನ ಮಾತ್ರ ಪಾವತಿಸಿದ್ದಾರೆ.

ಪ್ರಾಥಮಿಕ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಸಲು ಸರ್ಕಾರ ಡಿಸೆಂಬರ್ ತಿಂಗಳಲ್ಲಿ ಅನುದಾನ ಬಿಡುಗಡೆಗೊಳಿಸಿ ಜನವರಿ 27ರ ಒಳಗಾಗಿ ಬಿಲ್‌ ಸಲ್ಲಿಸುವಂತೆ ತಿಳಿಸಲಾಗಿತ್ತು. ಆದರೆ, ಅತಿಥಿ ಶಿಕ್ಷಕರಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಅಧಿಕಾರಿಗಳು ಬಿಲ್‌ ಪಾವತಿಸದ ಕಾರಣಕ್ಕೆ ವಾಪಸ್‌ ಹೋಗಿದೆ, ಹೀಗಾಗಿ ಶಿಕ್ಷಕರಿಗೆ ಗೌರವಧನ ಬಿಡುಗಡೆಗೆ ವಿಳಂಬ ಆಗಿರುವುದು ಈಗ ಬಹಿರಂಗವಾಗಿದೆ.

ಈ ಕುರಿತು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘವು ಬೀದರ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ʼ2024-25ನೇ ಸಾಲಿನಲ್ಲಿ ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಬಂದ ಅನುದಾನ ಔರಾದ್‌ನ ಶಿಕ್ಷಣ ಇಲಾಖೆ ಅಧಿಕಾರಿಗಳು ಸಕಾಲಕ್ಕೆ ಪಾವತಿಸದ ಕಾರಣಕ್ಕೆ ವಾಪಸ್‌ ಹೋಗಿದೆ. ಇದರಿಂದ ಅತಿಥಿ ಶಿಕ್ಷಕರಿಗೆ ಮೂರು ತಿಂಗಳ ಗೌರವಧನ ಪಾವತಿಯಾಗಿಲ್ಲ. ಕೂಡಲೇ ಅತಿಥಿ ಶಿಕ್ಷಕರ ಬಾಕಿ ಗೌರವಧನ ಪಾವತಿಸಬೇಕು. ಇಲ್ಲದಿದ್ದರೆ ಬಿಇಒ ಕಚೇರಿ ಎದುರುಗಡೆ ಧರಣಿ ನಡೆಸಲಾಗುವುದುʼ ಎಂದು ಅತಿಥಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ದ್ವಿತೀಯ ಪಿಯು ಪರೀಕ್ಷೆ : 794 ವಿದ್ಯಾರ್ಥಿಗಳು ಗೈರು

ಈ ವಿಚಾರವಾಗಿ ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ‌ ಬಿ.ಜೆ.ರಂಗೇಶ ಅವರು ʼಈದಿನ.ಕಾಮ್‌ ಜೊತೆ ಮಾತನಾಡಿ, ʼಅತಿಥಿ ಶಿಕ್ಷಕರಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನ ವಾಪಸ್‌ ಹೋಗಿತ್ತು. ಇದೀಗ ಮತ್ತೆ ಬಂದಿದೆ. ನಾನು ತಿಂಗಳ ಹಿಂದೆ ಹೊಸದಾಗಿ ಬಂದಿರುವೆ. ಒಂದೆರಡು ದಿನಗಳಲ್ಲಿ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ ಮಾಡಲಾಗುವುದುʼ ಎಂದು ತಿಳಿಸಿದ್ದಾರೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...