ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದ ಕಸ್ತೂರ ಬಾ ಗಾಂಧಿ ವಸತಿ ಶಾಲೆಯ ಮುಖ್ಯ ಶಿಕ್ಷಕ ಅಶೋಕ ರೆಡ್ಡಿ ಹೂಡೆ ಅವರ ಮೇಲೆ ಅದೇ ವಸತಿ ಶಾಲೆ ಹಾಸ್ಟೆಲ್ ವಾರ್ಡನ್ ಆರೋಪ ಮಾಡಿದ್ದು, ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
“ಕಸ್ತೂರ ಬಾ ಗಾಂಧಿ ವಸತಿ ಶಾಲೆಯಲ್ಲಿ ಕಳೆದ 3 ವರ್ಷದಿಂದ ಗುತ್ತಿಗೆ ಆಧಾರದ ಮೇಲೆ ಹಾಸ್ಟೆಲ್ ವಾರ್ಡನ್ ಆಗಿ ಸೇವೆ ಸಲ್ಲಿಸುತ್ತಿದ್ದು, ಶಾಲೆಯ ಮುಖ್ಯ ಶಿಕ್ಷಕ ಅಶೋಕ್ ರೆಡ್ಡಿ ಅವರು ವಾರ್ಡನ್‌ಗೆ 2 ವರ್ಷಗಳಿಂದ ಲೈಂಗಿಕ ಕಿರುಕುಳ ಕೊಟ್ಟು ಹಣದ ಆಮಿಷ ಒಡ್ಡುತ್ತಿದ್ದ. ಕೆಲಸದ ಸಂಬಂಧ ಅವರ ಕಚೇರಿಗೆ ತೆರಳಿದಾಗ ಅಸಭ್ಯವಾಗಿ ವರ್ತಿಸುವುದು, ಅಶ್ಲೀಲವಾಗಿ ಮಾತನಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ” ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಶಾಲೆ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ; ಒಂದೇ ದಿನದಲ್ಲಿ ಅಧಿಕಾರಿಗಳ ಭೇಟಿ
“ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ, ಬಟ್ಟೆ ಕೊಡಿಸುವುದಾಗಿ ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.