ಜಿಲ್ಲೆಯಲ್ಲಿ ಬಿಸಿಲಿನ ತಾಪದಿಂದ ಉಷ್ಣಾಂಶ ಹೆಚ್ಚಾಗಿದುದ್ದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಬಿಸಿಲಿನ ತಾಪದಿಂದ ಉಂಟಾಗುವ ತೊಂದರೆಗಳ ಬಗ್ಗೆ ಎಚ್ಚರ ವಹಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲ ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ಎಲ್ಲ ಗರ್ಭಿಣಿ, ವಯಸ್ಸಾದವರಿಗೆ ಮತ್ತು ಎಲ್ಲ ಚೆಕ್ ಪೋಸ್ಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಓಆರ್‌ಎಸ್ ಪೊಟ್ಟಣಗಳನ್ನು ವಿತರಿಸುವುದು ಕಡ್ಡಾಯವಾಗಿರುತ್ತದೆ. ಎಲ್ಲರೂ ಓಆರ್‌ಎಸ್ ಪೊಟ್ಟಣಗಳನ್ನು ತಮ್ಮ ಸಂಸ್ಥೆಗಳಿಂದ ಪಡೆದುಕೊಂಡು ಅವಶ್ಯಕತೆ ಇದ್ದವರಿಗೆ ಹಂಚಬೇಕುʼ ಎಂದು ತಿಳಿಸಿದರು.
ʼಮನೆಯಲ್ಲಿ ತಯ್ಯಾರಿಸಬಹುದಾದ ಜೀವರಕ್ಷಕ ದ್ರಾವಣ ಮಾಡುವುದರ ಬಗ್ಗೆ ಪ್ರಾತ್ಯಕ್ಷತೆ ನೀಡುವುದು, ಬಿಸಿಲಿನ ತಾಪದಿಂದ ಉಂಟಾಗುವ ದುಷ್ಪರಿಣಾಮಗಳಿಂದ ತೀವ್ರಜ್ವರ, ಹೀಟ್ ಸ್ಟ್ರೋಕ್, ಪ್ರಜ್ಞಾಹೀನತೆ, ನಿರ್ಜಲೀಕರಣ ಇವುಗಳ ಬಗ್ಗೆ ತಿಳುವಳಿಕೆ ನೀಡಿ ಅಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಸಮೀಪದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಯನ್ನು ಸಂಪರ್ಕಿಸುವಂತೆ ತಿಳುವಳಿಕೆ ನೀಡಬೇಕುʼ ಎಂದರು.
ಸಾರ್ವಜನಿಕರು ಬೇಸಿಗೆಯಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ಅಂಶಗಳ ವಿವರ:
ಹೆಚ್ಚು ನೀರನ್ನುಕುಡಿಯಿತು, ಮಜ್ಜಿಗೆ, ಎಳನೀರು, ಹಣ್ಣಿನರಸವನ್ನು ಹೆಚ್ಚಾಗಿ ಸೇವಿಸಬಹುದು. ನೀರಿನ ಅಂಶ ಹೆಚ್ಚಾಗಿರುವ ತರಕಾರಿ, ಹಣ್ಣುಗಳನ್ನು ಸೇವಿಸುವುದು. ಉತ್ತಮ ಸಡಿಲವಾದ ತೆಳು ಹತ್ತಿಯ ಬಟ್ಟೆಯನ್ನು ಧರಿಸಿರಿ, ಗಾಳಿಯಾಡುವ ಪಾದರಕ್ಷೆ ಧರಿಸಿರಿ. ಹೊರಗಡೆ ತೆರಳುವ ವೇಳೆ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳುವು ಸಾಮಾನ್ಯ ಕ್ರಮಗಳನ್ನು ಪಾಲಿಸಿ.
ರೇಡಿಯೋ, ದೂರದರ್ಶನ ಹಾಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆದು ಅದರಂತೆ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಿ. ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಅನಾವಶ್ಯಕವಾಗಿ ಓಡಾಡಬೇಡಿ. ಈ ಅವಧಿಯಲ್ಲಿ ಶ್ರಮದಾಯಕ ಕೆಲಸಗಳಿಂದ ವಿಶ್ರಾಂತಿ ಪಡೆಯಿರಿ.
ಈ ಸುದ್ದಿ ಓದಿದ್ದೀರಾ? ಬೀದರ್‌ನಲ್ಲಿ ವಕ್ಪ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ರ್‍ಯಾಲಿ
ಬಿಸಿಲಿನಲ್ಲಿ ನಡೆಯುವಾಗ ಕಡ್ಡಾಯವಾಗಿ ಚಪ್ಪಲಿ ಧರಿಸಿ. ಚಹಾ, ಕಾಫಿ, ಹೆಚ್ಚು ಸಕ್ಕರೆ ಅಂಶ ಹೊಂದಿರುವ ಕಾರ್ಬೋನೇಟೆಡ್ ಪಾನೀಯ ಹಾಗೂ ಮದ್ಯಪಾನದಿಂದ ದೂರವಿರಿ. ಬಿಸಿಗಾಳಿ ಮತ್ತು ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಅಥವಾ 108/ 102 ನಂಬರ್‌ಗೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.