ಬೀದರ್‌ | ಗುಡುಗು, ಸಿಡಿಲಿನ ಅಪಾಯದಿಂದ ಸುರಕ್ಷಿತವಾಗಿರುವುದು ಹೇಗೆ? ಇಲ್ಲಿವೆ ಸಲಹೆ

Date:

ಗುಡುಗು, ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ನೀಡುವ ಸಲಹೆ, ಸೂಚನೆಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮನವಿ ಮಾಡಿದ್ದಾರೆ.

- Advertisement -

ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಅಪಾಯದಿಂದ ತಪ್ಪಿಸಿಕೊಳ್ಳಲು ಏನೆಲ್ಲಾ ಮುಂಜಾಗೃತಾ ಕ್ರಮವಹಿಸಬೇಕು ಎನ್ನುವ ಬಗ್ಗೆ ಬೀದರ್ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲವು ಸಲಹೆಗಳನ್ನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು ಮೀನುಗಾರಿಕೆ ಮತ್ತು ದೋಣಿಗಳನ್ನು ನಡೆಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದು ಸೂಕ್ತವಲ್ಲ.

ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯಿರಿ ಬೆಟ್ಟ ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬಹುದು.

ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರಿ. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಿ.

ವಾಹನ ಚಾಲನೆ ಮಾಡುತ್ತಿದ್ದರೆ, ತಕ್ಷಣವೇ ನಿಲ್ಲಿಸಿ ಅದರಲ್ಲೇ ಆಶ್ರಯ ಪಡೆಯಿರಿ. ವಾಹನದ ಕಿಟಕಿಗಳನ್ನು ಮುಚ್ಚಿ. ಅರಣ್ಯ ಪ್ರದೇಶದಿಂದ ಹಾಗೂ ಗಿಡ-ಮರಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಸಾಗಿರಿ. ಮೋಟಾರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರಿ

ಚಾರ್ಜ್‌ಗೆ ಹಾಕಿರುವ ಫೋನ್‌ ಅನ್ನು ಬಳಸಬೇಡಿ. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ದೂರ ನಿಂತು ಅಂತರವನ್ನು ಕಾಯ್ದುಕೊಳ್ಳಿ.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಅಥವಾ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಿ.

ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನಚ್ಚರಿಕೆಗಳಿಗಾಗಿ Common Alerting Protocol (CAP) ಮುಖಾಂತರಗಳಿಂದ ಹವಾಮಾನ ಇಲಾಖೆ ನೀಡುವ ಸಂದೇಶಗಳನ್ನು ಗಮನಿಸಿ.

ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಅಶ್ರಯ ಪಡೆಯಬೇಡಿ. ಇವು ಮಿಂಚನ್ನು ಆಕರ್ಷಿಸುತ್ತವೆ. ಲೋಹದ ವಸ್ತುಗಳನ್ನು ಬಳಸಬೇಡಿ. ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಿ.

ಕಬ್ಬಿಣದ ಸರಳುಗಳಿಂದ ಕೂಡಿದ ಕೊಡೆ (ಛತ್ರಿ)ಗಳನ್ನು ಬಳಸಬೇಡಿ. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಿ. ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ನೋಡಿಕೊಳ್ಳಿ.

ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳಿಂದ ದೂರವಿರಿ. ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಿ.

ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಿ. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಿರಿ.

ಕೆಲವು ಸಲ ಮಿಂಚಿನ ಹೊಡೆತದಿಂದಾಗಿ ಕಾಳ್ಗಿಚ್ಚು ಸಂಭವಿಸುವ ಸಾಧ್ಯತೆ ಇರುತ್ತದೆ. ಅಂತಹ ಸಂದರ್ಭದಲ್ಲಿ ಜಿಲ್ಲಾಡಳಿತದ ತುರ್ತು ಕಾರ್ಯಚರಣಾ ಕೇಂದ್ರಕ್ಕೆ ಮಾಹಿತಿ ನೀಡಿ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...