ಬೀದರ್‌ | ಕಾನೂನು ಬಾಹಿರ ಚಟುವಟಿಕೆ : ಮಾರ್ಚ್ ತಿಂಗಳಲ್ಲಿ 189 ಪ್ರಕರಣ; 431 ಆರೋಪಿಗಳ ಬಂಧನ

Date:

ಮಾರ್ಚ್‌ ತಿಂಗಳಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಕಾನೂನು ಬಾಹಿರವಾಗಿ ನಡೆದ ಜೂಜಾಟ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ, ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಅಕ್ರಮ ಮದ್ಯ ಮಾರಾಟ ಕುರಿತು 189 ಪ್ರಕರಣಗಳನ್ನು ದಾಖಲಿಸಿ ಬ ಒಟ್ಟು 431 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ ತಿಳಿಸಿದ್ದಾರೆ.

- Advertisement -

ಬಂಧಿತರಿಂದ ₹35.34 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡು ಆರೋಪಿತರನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರಕರಣಗಳ ವಿವರ :

22 ಜೂಜಾಟ ಪ್ರಕರಣಗಳಲ್ಲಿ 227 ಆರೋಪಿತರನ್ನು ಬಂಧಿಸಿ ₹3.03 ಲಕ್ಷ, 11 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ 19 ಆರೋಪಿಗಳನ್ನು ಬಂಧಿಸಿ ₹62.70 ಸಾವಿರ, 49 ಮಟ್ಕಾ ಪ್ರಕರಣಗಳಲ್ಲಿ 65 ಆರೋಪಿಗಳನ್ನು ಬಂಧಿಸಿ ₹78.34 ಸಾವಿರ, ಪಡಿತರ ಅಕ್ಕಿ ಅಕ್ರಮ ಸಂಗ್ರಹ 7 ಪ್ರಕರಣಗಳಲ್ಲಿ 11 ಆರೋಪಿತರನ್ನು ಬಂಧಿಸಿ ₹6.43 ಲಕ್ಷ, ಡ್ರಗ್ಸ್ 3 ಪ್ರಕರಣಗಳಲ್ಲಿ 4 ಆರೋಪಿತರನ್ನು ಬಂಧಿಸಿ 22.51 ಲಕ್ಷ, ಹಾಗೂ 97 ಅಬಕಾರಿ ಪ್ರಕರಣಗಳಲ್ಲಿ 105 ಆರೋಪಿಗಳನ್ನು ಬಂಧಿಸಿ ₹1.95 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ʼಆರೋಪಿಗಳು ಪದೇ ಪದೇ ಕಾನೂನು ವಿರುದ್ದ ಚಟುವಟಿಕೆಗಳಲ್ಲಿ ತೊಡಗಿದರೆ ಅಂತಹ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ಗಡಿಪಾರು ಮಾಡಲಾಗುವುದುʼ ಎಂದು ಎಸ್ಪಿ ಪ್ರದೀಪ ಗುಂಟಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...