ಪ್ರಯಾಣಿಕರ ಸೋಗಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಬ್ಯಾಗಿನಲ್ಲಿಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹೈದರಾಬಾದ್ ಮೂಲದ ಆರೋಪಿಯೊಬ್ಬನನ್ನು ಬೀದರ್ ಜಿಲ್ಲೆಯ ಭಾಲ್ಕಿ ಪೊಲೀಸರು ಬಂಧಿಸಿದ್ದಾರೆ.
ಪವನ್ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ ₹14 ಲಕ್ಷ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಪವನ್ ರೈಲು ಮೂಲಕ ಮಹಾರಾಷ್ಟ್ರದಿಂದ ಹೈದರಾಬಾದ್ಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದುದರ ಬಗ್ಗೆ ಖಚಿತ ಮಾಹಿತಿ ತಿಳಿದು ದಾಳಿ ಮಾಡಿದಾಗ ಆತನ ಬ್ಯಾಗ್‌ನಲ್ಲಿದ್ದ ₹14 ಲಕ್ಷ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿರುವುದಾಗಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮಹಾ ಕುಂಭಮೇಳದ ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ಬಿಡುಗಡೆ
ಅಕ್ರಮವಾಗಿ ಗಾಂಜಾ ಮಾರಾಟ ಪ್ರಕರಣ ಸಂಬಂಧ ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಜಪ್ತಿ ಮಾಡಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆಯೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿಯವರ ಮಾರ್ಗದರ್ಶನದಂತೆ ಭಾಲ್ಕಿ ಪೊಲೀಸರು ಈ ದಾಳಿ ನಡೆಸಿದ್ದು, ದಾಳಿ ವೇಳೆ ಭಾಲ್ಕಿ ತಹಶೀಲ್ದಾರ್ ಹಾಗೂ ಅಧಿಕಾರಿಗಳು ಇದ್ದರು.