ಬೀದರ್ ಜಿಲ್ಲಾ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಮೇಲೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕೆಂದು ಶನಿವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಾಜಿ ಸಚಿವ, ಶಾಸಕ, ಮುಖಂಡರ ಸಭೆ ನಡೆಯಿತು.
ಬೀದರ ಜಿಲ್ಲೆಯ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆಯ ಹಿತದೃಷ್ಟಿಯಿಂದ ಸಭೆ ನಡೆಸಲಾಗಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಆಗುತ್ತಿದ್ದು, ಅದನ್ನು ಸರಿಪಡಿಸುವುದು ಸೇರಿದಂತೆ ಇತರ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
ಮಾಜಿ ಸಚಿವ ರಾಜಶೇಖರ ಬಿ.ಪಾಟೀಲ, ಮಾಜಿ ಶಾಸಕ ಅಶೋಕ ಖೇಣಿ ಅವರ ನೇತ್ರತ್ವದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಕೆ.ಪುಂಡಲಿಕರಾವ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಪ್ರದೀಪ ಕುಶನೂರ, ರಘುನಾಥರಾವ ಜಾಧವ, ವಿದ್ಯಾಸಾಗರ ಸಿಂಧೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮನ್ನಾನ್ ಸೇಠ, ರಾಜ್ಯ ಕುರಿ ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ ಚಿದ್ರಿ, ಜಿಲ್ಲಾ ಕಾಂಗ್ರೆಸ್ ಪಕ್ಷದ ದತ್ತಾತ್ರೇಯ ಮೂಲಗೆ, ಮುಖಂಡರಾದ ಧನರಾಜ ತಾಳಂಪಳ್ಳಿ, ಕೆಪಿಸಿಸಿ ಸಂಯೋಜಕರು ಅಜಮತ ಪಟೇಲ, ಮಾಜಿ ಕಾರ್ಯದರ್ಶಿ ವೈಜಿನಾಥ ಯನಾಗುಂದೆ ಮತ್ತಿತರರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಬೀದರ್ | ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಮಾತ್ರಭಾಷೆ ಕನ್ನಡದಲ್ಲೇ 4,321 ವಿದ್ಯಾರ್ಥಿಗಳು ಫೇಲ್!