ಬೀದರ್‌ | ವಿಮಾ ಯೋಜನೆ ವಂಚನೆಗೆ ಕಡಿವಾಣ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

Date:

Advertisements

ಹಲವು ವರ್ಷಗಳಿಂದ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ  ಆರೋಪಿಸಿದರು.

ಜಿಲ್ಲೆಯ ಭಾಲ್ಕಿ ಪಟ್ಟಣದ ಪುರಭವನದಲ್ಲಿ ಜಿಲ್ಲಾ ರೈತ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮನವಿ ಪತ್ರ ಸ್ವೀಕರಿಸಿ ಮಾತನಾಡಿದರು.

“ಫಸಲ್ ವಿಮಾ ಯೋಜನೆ ಸರಿಯಾಗಿ ಅನುಷ್ಟಾನ ಆಗುತ್ತಿಲ್ಲ. ಜಿಲ್ಲೆಯ ರೈತರು ನೂರಾರೂ ಕೋಟಿ ರೂ. ವಿಮೆ ಕಂತು ಕಟ್ಟಿದ್ದಾರೆ. ಆದರೆ, ಕಡಿಮೆ ಹಣ ಪಾವತಿಸಲಾಗುತ್ತಿದೆ. ಕಳೆದ ವರ್ಷ ಜಿಲ್ಲೆಯ ರೈತರು 220 ಕೋಟಿ ರೂ. ವಿಮೆ ಕಂತು ಕಟ್ಟಿದ್ದಾರೆ. ಆದರೆ 50 ಕೋಟಿ ರೂ ಮಾತ್ರ ಪರಿಹಾರ ನೀಡಲಾಗಿದೆ. ಸುಮಾರು 170 ಕೋಟಿ ರೂಪಾಯಿಯನ್ನು ಖಾಸಗಿ ವಿಮೆ ಕಂಪನಿ ಲೂಟಿ ಹೊಡಿದಿದೆ” ಎಂದು ಆರೋಪಿಸಿದರು.

Advertisements

“ಈ ಬಾರಿ ರಾಜ್ಯದಲ್ಲಿ ನಮ್ಮ ಸರ್ಕಾರವಿದ್ದು, ನಾನು ಜಿಲ್ಲಾ ಉಸ್ತುವಾರಿ ಸಚಿವನಿದ್ದೇನೆ. ಇನ್ಮುಂದೆ ವಿಮೆ ಕಂಪನಿ ಮೋಸದಾಟಕ್ಕೆ ಬ್ರೇಕ್ ಹಾಕಲಾಗುತ್ತದೆ” ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಫಲವತ್ತಾದ ಭೂಮಿ ಇದೆ. ಮಾಂಜ್ರಾ, ಕಾರಂಜಾ ನದಿ ನೀರು ಹರಿಯುತ್ತಿದೆ. ಕೃಷಿಗೆ ಪೂರಕ ವಾತಾವರಣ ಇಲ್ಲಿದೆ. ಬಯಲು, ನೀರಾವರಿ ಸೇರಿ ಎಲ್ಲ ಬೆಳೆ ಬೆಳೆಯಲು ಅವಕಾಶ ಇಲ್ಲಿದೆ. ಆದರೆ, ರೈತರಲ್ಲಿ ಜಾಗೃತಿ ಕೊರತೆಯಿಂದ ಉತ್ತಮ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ” ಎಂದು ಕಳವಳ ವ್ಯಕ್ತಪಡಿಸಿದರು.

“ಜಿಲ್ಲೆಯಲ್ಲಿ ನೀರಾವರಿ ಯೋಜನೆ ಸಮರ್ಪಕವಾಗಿ ಬಳಕೆ ಆಗಬೇಕಿದೆ. ಗೋದಾವರಿ ಬೇಸ್ 23  ಟಿಎಂಸಿ ನೀರು ನಮ್ಮ ಪಾಲಿಗೆ ಸಿಗಬೇಕಿದೆ. ಈಗಾಗಲೇ ಕಾರಂಜಾ ಜಲಾಶಯ, ಅತಿವಾಳ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ ತಾಲೂಕಿನಲ್ಲಿ ನೀರಾವರಿ ಪ್ರದೇಶ ಹೆಚ್ಚಿಸಲಾಗಿದೆ” ಎಂದರು.

ಮುಂಬರುವ ದಿನಗಳಲ್ಲಿ ಚುಳಕಿ ನಾಲಾ ಕಾಲುವೆ, ಕೆರೆ ಅಭಿವೃದ್ಧಿ, ಮೇಹಕರ್ ಏತ ನೀರಾವರಿ ಯೋಜನೆ ಅನುಷ್ಟಾನಕ್ಕೆ ಒತ್ತು ನೀಡಲಾಗುವುದು. ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು. ರೈತ ವಿರೋಧಿ ಕರಾಳ ಮೂರು ಕಾಯಿದೆಗಳಲ್ಲಿ ಈಗಾಗಲೇ ಕೃಷಿ ಉತ್ಪನ್ನ ಮಾರುಕಟ್ಟೆ ಸಂಬಂಧಿಸಿದ ಕಾಯಿದೆ ರದ್ದು ಪಡಿಸಲಾಗಿದೆ. ಉಳಿದರೆಡು ಕಾಯಿದೆ ರದ್ದು ಪಡಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ” ಎಂದು ತಿಳಿಸಿದರು.

ಜಿಲ್ಲಾ ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ಮಾತನಾಡಿ, “ಜಿಲ್ಲೆಯಲ್ಲಿ  ಒಂದಿಲ್ಲ ಒಂದು ಸಮಸ್ಯೆಯಿಂದ ರೈತರು ಸಮಸ್ಯೆ ಅನುಭವಿಸುತ್ತಿದ್ದು ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ರೈತರ ಬೇಡಿಕೆ ಈಡೇರಿಕೆಗೆ ಸರ್ಕಾರ ಸ್ಪಂದಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿದ್ಯುತ್‌ ಬಿಲ್ ಬಾಕಿ ಇದ್ದರು ‘ಗೃಹಜ್ಯೋತಿ’ ಲಾಭ ಪಡೆಯಬಹುದು: ಇಂಧನ ಇಲಾಖೆ

ತಾಲೂಕು ಅಧ್ಯಕ್ಷ ಬಾಬುರಾವ ಜೋಳದಾಪಕೆ ಮಾತನಾಡಿ, “ಜಿಲ್ಲೆಯ ರೈತರ ಜೀವನಾಡಿ ಆಗಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಿಸಲು ಸರ್ಕಾರ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರುಗಳಾದ ದಯಾನಂದ ಸ್ವಾಮಿ, ಶ್ರೀಮಂತ ಬಿರಾದಾರ್, ಶೇಷರಾವ ಕಣಜಿ, ವೈಜಿನಾಥ ವಡ್ಡೆ, ಚಂದ್ರಶೇಖರ ಜಮಖಂಡಿ, ನಾಗಯ್ಯ ಸ್ವಾಮಿ, ಸುಭಾಷ ರಗಟೆ, ಮನೋಹರರಾವ ಹೊರಂಡಿ, ಸತ್ಯವಾನ ಸೂರ್ಯವಂಶಿ, ಸುಧಾಕರ ಬೋಗಡೆ, ಮಲ್ಲಿಕಾರ್ಜುನ ಬಿರಾದಾರ್, ಶಂಕರೆಪ್ಪ ಪಾರಾ, ಪ್ರಕಾಶ ಬಾವುಗೆ, ಭವರಾವ ಪಾಟೀಲ್, ಪ್ರವೀಣ ಕುಲಕರ್ಣಿ, ರಾಮರಾವ ಶೆಡೋಳೆ, ಝರಣಪ್ಪ ದೇಶಮುಖ, ವಿಶ್ವನಾಥ ಧರಣ , ಬಸಪ್ಪ ಮರಖಲ್, ಗಣಪತರಾವ ವಲ್ಲಾಪೆ, ಉತ್ತಮರಾವ ಮಾನೆ, ವಿಠಲ ಪಾಟೀಲ್, ಶಿವಾನಂದ ಹುಡಗೆ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X