ಬೀದರ್‌ | ಅಂತರ ಕಾಲೇಜು ಬ್ಯಾಸ್ಕೆಟ್‍ಬಾಲ್ ಟೂರ್ನಿ : ವಿಜಯಪುರ ಎಸ್‌ಬಿಎಸ್ ಮಹಿಳಾ ಕಾಲೇಜು ಪ್ರಥಮ

Date:

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ ಸಹಯೋಗದಲ್ಲಿ ಬೀದರ್‌ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯ ಆವರಣದಲ್ಲಿ ಅಂತರ ಕಾಲೇಜು ಬ್ಯಾಸ್ಕೆಟ್‍ಬಾಲ್ ಟೂರ್ನಿ ಹಾಗೂ ವಿಶ್ವವಿದ್ಯಾಲಯದ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯಿತು.

- Advertisement -

ಎರಡು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಒಟ್ಟು 8 ಮಹಿಳಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದರು. ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನವನ್ನು ವಿಜಯಪುರದ ಬಿ.ಎಲ್.ಡಿ. ಸಂಸ್ಥೆಯ ಎಸ್.ಬಿ.ಎಸ್. ಮಹಿಳಾ ಕಾಲೇಜು ಪಡೆದರೆ, ದ್ವಿತೀಯ ಸ್ಥಾನವನ್ನು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಪಡೆಯಿತು. ಹಾಗೂ ಧಾರವಾಡದ ಶ್ರೀ ಸತ್ಯ ಸಾಯಿ ಮಹಿಳಾ ಮಹಾವಿದ್ಯಾಲಯ ವಿದ್ಯಾರ್ಥಿಗಳು ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
WhatsApp Image 2025 10 30 at 1.56.40 PM

ಕ್ರೀಡೆಯಲ್ಲಿ ಹೆಚ್ಚಿನ ಅವಕಾಶ :

ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಹೆಣ್ಣುಮಕ್ಕಳು ಕ್ರೀಡೆಯಲ್ಲೂ ಸಾಧನೆಗೆ ಪ್ರಯತ್ನಿಸಬೇಕು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೆ ಬಹಳಷ್ಟು ಅವಕಾಶಗಳು ಇವೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕುʼ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಚಾರ್ಯ ಪ್ರೊ.ಮನೋಹರಕುಮಾರ ಮಾತನಾಡಿ, ʼಕ್ರೀಡೆಯಲ್ಲಿ ಸೋಲು ಹಾಗೂ ಗೆಲುವನ್ನು ಸಮನಾಗಿ ಸ್ವೀಕರಿಸಬೇಕುʼ ಎಂದು ಹೇಳಿದರು.

ಬೀದರ್ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರವಿ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.

WhatsApp Image 2025 10 30 at 1.56.17 PM

ಇದನ್ನೂ ಓದಿ : ಬೀದರ್‌ | ಕರ್ತವ್ಯ ಲೋಪ : ಬಿಸಿಎಂ ಅಧಿಕಾರಿ ಅಮಾನತು

‌ಸಮಾರಂಭದಲ್ಲಿ ಅಂತರರಾಷ್ಟ್ರೀಯ ಬ್ಯಾಸ್ಕೆಟ್‍ಬಾಲ್ ಪಟು ಸಿರಾಜುದ್ದೀನ್ ಪತೆ ಕಹಾನಿ, ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಕಿರಣಕುಮಾರ, ಪಶು ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಶಿವಕುಮಾರ, ದೈಹಿಕ ಶಿಕ್ಷಣ ನಿರ್ದೇಶಕರಾದ ಶಂಕರ, ಸಂಜೀವಕುಮಾರ ಅಪ್ಪೆ ಉಪಸ್ಥಿತರಿದ್ದರು. ಡಾ.ಮನೋಹರ ಮೇತ್ರೆ ಸ್ವಾಗತಿಸಿದರು. ವಿಜಯಲಕ್ಷ್ಮಿ ನಿರೂಪಿಸಿದರು. ಡಾ.ವಿದ್ಯಾ ಪಾಟೀಲ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...