ಸಮಾಜ ವಿರೋಧಿ ಹಾಗೂ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತಾಲ್ಲೂಕಿನ ಖಟಕಚಿಂಚೋಳಿ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮದ ಪರಮೇಶ್ವರ (ಪಮ್ಯಾ) ಬಿರಾದಾರ್ (30) ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈತನು ಸುಮಾರು 6 ವರ್ಷದಿಂದ ಸಮಾಜ ವಿರೋಧಿ, ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿ ಸಾರ್ವಜನಿಕರ ಶಾಂತಿ, ನೆಮ್ಮದಿ ಹಾಳುಮಾಡುತ್ತಿದ್ದನು. ಈತನ ವಿರುದ್ದ ಖಟಕಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಕೊಲೆ, ಮಾರಣಾಂತಿಕ ಹಲ್ಲೆ, ಬೆದರಿಕೆ ಸೇರಿದಂತೆ 4 ಪ್ರಕರಣಗಳು ವರದಿಯಾಗಿದ್ದರೂ ತನ್ನ ಪ್ರವೃತ್ತಿ ಮುಂದುವರಿಸಿಕೊಂಡು ಬಂದಿದ್ದನು. ಹಾಗಾಗಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಈತನನ್ನು ಸುಮಾರು 6 ತಿಂಗಳು ಚಾಮರಾಜನಗರ ಜಿಲ್ಲೆಯ ಗುಂಡ್ಲಪೇಟೆ ಪೊಲೀಸ್ ಠಾಣೆ ವ್ಯಾಪ್ತಿಗೆ ಸ್ಥಳಾಂತರಿಸಲು ಗಡಿಪಾರು ಮಾಡಿ ಆದೇಶಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ಬೀದರ್ | ಮೇ 26ರಿಂದ ಬಿತ್ತನೆ ಬೀಜ ವಿತರಣೆ: ಕೊರತೆ ಆಗದಂತೆ ಕ್ರಮವಹಿಸಿ: ಡಿಸಿ ಶಿಲ್ಪಾ ಶರ್ಮಾ