ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

Date:

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌ ಪಡೆಯಲು ಹಣ ಪಡೆದರೆ ಪಡಿತರ ಅಂಗಡಿಗಳ ಮಾನ್ಯತೆಯನ್ನು ರದ್ದುಪಡಿಸುವ ಸಾಧ್ಯತೆ ಇದೆ.

- Advertisement -

ಪಡಿತರ ಮಾರಾಟದಲ್ಲಿ ಅಕ್ರಮ ಕಂಡುಬಂದಿರುವ ಕುರಿತು ಬೀದರ್‌ ಜಿಲ್ಲಾಡಳಿತ ಪಡಿತರ ಅಂಗಡಿಗಳ ಮೇಲೆ ದಾಳಿ ಮಾಡಿದ್ದು, ಮಾನ್ಯತೆ ರದ್ದು ಮಾಡಿದೆ. ಅಕ್ರಮದಲ್ಲಿ ನಿರತರಾದವರ ಮೇಲೆ ಚಾಟಿ ಬೀಸಿದ್ದು, ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಸರ್ಕಾರದ ನಿಯಮ ಉಲ್ಲಂಘಿಸಿದ ಜಿಲ್ಲೆಯ 22 ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಗೊಳಿಸಿ ಅವುಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ” ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

“ಬೀದರ್‌ ನಗರದ 11 ನ್ಯಾಯಬೆಲೆ ಅಂಗಡಿ, ಬೀದರ್‌ ಗ್ರಾಮೀಣ ಭಾಗದ 4, ಹುಮನಾಬಾದ್‌ ತಾಲೂಕಿನ 4, ಭಾಲ್ಕಿ ತಾಲೂಕಿನ 2 ಅಂಗಡಿಗಳು ಸೇರಿದಂತೆ ಒಟ್ಟು 22 ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಗೊಳಿಸಿ ಅವುಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

“ಪಡಿತರ ಚೀಟಿದಾರರಿಗೆ ನಿಗದಿಗಿಂತ ಕಡಿಮೆ ಪ್ರಮಾಣದಲ್ಲಿ ಅಕ್ಕಿ ವಿತರಣೆ ಮಾಡಿರುವುದು, ಪಡಿತರ ಚೀಟಿದಾರರಿಂದ ಬಯೋಮೆಟ್ರಿಕ್‌ ಪಡೆಯಲು ತಲಾ 10 ರೂ. ಪಡೆದಿರುವುದು ಮತ್ತು ಬಿಲ್‌ ಪುಸ್ತಕ, ಮಾರಾಟ ಪುಸ್ತಕ, ದಾಸ್ತಾನು ಫಲಕ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮಕೈಗೊಳ್ಳಲಾಗಿದೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

“ಅಕ್ರಮ ಎಸಗಿರುವ 22 ನ್ಯಾಯ ಬೆಲೆ ಅಂಗಡಿಗಳಿಂದ 53.54 ಲಕ್ಷ ರೂ.ಮೌಲ್ಯದ 1793.46 ಕ್ವಿಂಟಲ್‌ ಅಕ್ಕಿ ಜಪ್ತಿ ಮಾಡಿದ್ದು, 32 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಜಿಲ್ಲೆಯ 6 ಕಡೆ ದಾಳಿ ನಡೆಸಿ ಅನಧಿಕೃತವಾಗಿ ಸಂಗ್ರಹಿಸಿದ್ದ ಹೆಚ್ಚುವರಿ ಬೆಲೆಗೆ ಮಾರಾಟ ಮಾಡುತ್ತಿದ್ದ 228 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ” ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಹಾರ ಅದಾಲತ್‌ಗೆ ಗ್ರಾಹಕರ ಆಗ್ರಹ

“ಬೀದರ್‌ ಜಿಲ್ಲೆಯ ಹಲವು ಭಾಗದಲ್ಲಿ ಪಡಿತರದಾರರೊಂದಿಗೆ ಸರಿಯಾಗಿ ನಡೆದುಕೊಳ್ಳದೇ ಅಕ್ರಮದಲ್ಲಿ ಭಾಗಿಯಾಗಿರುವ ದೂರುಗಳು ಕೇಳಿ ಬರುತ್ತಲೇ ಇವೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯವರಿಗೆ ದೂರು ನೀಡಿದರೆ ಅವರು ಎಚ್ಚರಿಕೆ ನೀಡುತ್ತಿದ್ದರು. ಈಗ ಬಿಗಿ ಕ್ರಮ ಕೈಗೊಂಡಿರುವುದು ಸೂಕ್ತವಾಗಿದೆ” ಎಂದು ಜಿಲ್ಲೆಯ ಹಲವು ಪಡಿತರಚೀಟಿ ಹೊಂದಿರುವ ಗ್ರಾಹಕರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

“ಆಹಾರ ಇಲಾಖೆ ಅವ್ಯವಸ್ಥೆ, ಪಡಿತರ ಮೋಸ, ಜನರಿಗೆ ಆಗುತ್ತಿರುವ ಅಡಚಣೆ ತಪ್ಪಿಸಲು ಹೀಗೆ ನಿಯಮಿತವಾಗಿ ಕ್ರಮ ಆಗಬೇಕು. ಈ ಮೊದಲು ಇದ್ದ ಹಾಗೆ ತಿಂಗಳಿಗೆ ಒಂದು ಬಾರಿಯಾದರೂ ʼಆಹಾರ ಅದಾಲತ್‌ʼ ಆಯೋಜಿಸಬೇಕು” ಎಂದು ಗ್ರಾಹಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲೆಯಲ್ಲಿ 484 ಕೈಗಾರಿಕಾ ಹುದ್ದೆಗಳು ಖಾಲಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಮುಂದೆ ಬರುತ್ತಿರುವ ಉದ್ಯಮಿಗಳಿಗೆ ಅಗತ್ಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ತಿರಂಗಾ ಯಾತ್ರೆ: ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...

ಉಡುಪಿ | ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿ ಉದ್ಯಮಿಗಳಿಗೆ ಬೆದರಿಕೆ ಪ್ರಕರಣ: ಆರೋಪಿ ಸೆರೆ

ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿಕೊಂಡು ಜಿಲ್ಲೆಯ ಉದ್ಯಮಿ ಹಾಗೂ...