ಬೀದರ್‌ | ಮೌಲ್ಯಾಧಾರಿತ ಶಿಕ್ಷಣ ಜೊತೆಗೆ ಸಂಸ್ಕಾರ ಕಲಿಸುವುದು ಮುಖ್ಯ : ವಿಜಯಕುಮಾರ್‌ ಬಾಬಣೆ

Date:

ಇಂದಿನ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಜೊತೆಗೆ ನಾಗರಿಕತೆ ಮತ್ತು ಸಂಸ್ಕಾರ ಕಲಿಸುವುದು ತುಂಬಾ ಅಗತ್ಯವಾಗಿದೆ ಎಂದು ಜ್ಞಾನ ದಾಸೋಹ ಶಿಕ್ಷಣ ಟ್ರಸ್ಟ್‌ ಅಧ್ಯಕ್ಷ ವಿಜಯಕುಮಾರ್‌ ಬಾಬಣೆ ಹೇಳಿದರು.

- Advertisement -

ಔರಾದ್‌ ತಾಲ್ಲೂಕಿನ ಧರಿಹನುಮಾನ ದೇವಸ್ಥಾನ ಸಮೀಪದ ಜ್ಞಾನ ಭಾರತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ ಮಾತೆಯರಿಂದ ಮಕ್ಕಳಿಗೆ ಕೈತುತ್ತು ಉಣಿಸುವ ಕಾರ್ಯಕ್ರಮ, ವಿಜ್ಞಾನ ಮೇಳ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼಇತ್ತೀಚೆಗೆ ಮೊಬೈಲ್‌ ಎಂಬ ಮಾಯ ಕನ್ನಡಿ ಬಂದ ಬಳಿಕ ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಕಲಿಯುವ ಆಸಕ್ತಿ ಕಡಿಮೆ ಆಗುತ್ತಿದೆ. ಶಿಕ್ಷಣ ಎಷ್ಟೇ ಕಲಿತರೂ ಉತ್ತಮ ಮಾನವೀಯ ಮೌಲ್ಯಗಳು ಇಲ್ಲದಿದ್ದರೆ ವ್ಯರ್ಥ. ಪೋಷಕರು, ಶಿಕ್ಷಕರು ಮಕ್ಕಳಲ್ಲಿ ಉತ್ತಮ ಸಂಸ್ಕಾರ ಕಲಿಸಬೇಕಾಗಿದೆʼ ಎಂದು ಸಲಹೆ ನೀಡಿದರು.

ತಾಯಂದಿರ ಕೈತುತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ.ಸುರೇಂದ್ರ ಅವರು ಮಾತನಾಡಿ, ʼಬಾಲ್ಯದಲ್ಲಿ ತಾಯಿ ನೀಡುವ ಕೈತುತ್ತು ಕೇವಲ ಆಹಾರವಲ್ಲ. ಅದರಲ್ಲಿ ಪ್ರೀತಿ, ವಾತ್ಸಲ್ಯ ಹಾಗೂ ಅಂತಃಕರಣ, ಆನಂದ ಹಾಗೂ ಸದ್ಭಾವನೆ ಇರುತ್ತದೆ. ಅಮ್ಮನ ಕೈತುತ್ತು ಅಮೃತಕ್ಕೆ ಸಮವಾಗಿದೆ. ಅಮ್ಮನ ಉಪಕಾರ ತೀರಿಸಲು ಸಾಧ್ಯವಿಲ್ಲ. ಬದುಕಿನಲ್ಲಿ ನೈತಿಕ ಮೌಲ್ಯಗಳು ಅಳವಡಿಸಿಕೊಳ್ಳಬೇಕಾದರೆ ಪೋಷಕರ ಕಾಳಜಿ, ಜವಾಬ್ದಾರಿ ಮುಖ್ಯವಾಗಿದೆʼ ಎಂದರು.

WhatsApp Image 2025 04 04 at 5.40.22 PM
ಮಕ್ಕಳಿಗೆ ಪೋಷಕರು ಕೈತುತ್ತು ಉಣಿಸಿ ಸಂಭ್ರಮಿಸಿದರು.

ವಿಜ್ಞಾನ ಮೇಳ ಉದ್ಘಾಟಿಸಿ ಶಿಕ್ಷಕ ದೇವಿಪ್ರಸಾದ ಕಲಾಲ್‌ ಮಾತನಾಡಿ, ʼವಿಜ್ಞಾನ ಮೇಳವು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಪೂರಕವಾಗಿದೆ. ಶಾಲೆಗಳಲ್ಲಿ ವಿಜ್ಞಾನ ಮೇಳ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಯು ಮಕ್ಕಳಲ್ಲಿ ಲೋಕದ ಹೊಸತನ ಪರಿಚಯಿಸುವ ಕಾರ್ಯವಾಗಿದೆʼ ಎಂದರು.

ಶಿಕ್ಷಕ ಮಹಮ್ಮದ್‌ ರಫಿ ಮಾತನಾಡಿ, ʼಮಕ್ಕಳಲ್ಲಿ ಅಗಾಧವಾದ ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸುವ ಕೆಲಸ ಶಿಕ್ಷಕರು ಮಾಡಬೇಕಿದೆ. ವಿದ್ಯಾರ್ಥಿಗಳು ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯʼ ಎಂದರು,

ಇದೇ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ನೂತನ ಕ್ರೀಡಾಂಗಣ ಹಾಗೂ ಆಠೋಪಕರಣ ಮೈದಾನವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮ ಅಂಗವಾಗಿ ಬೆಳಿಗ್ಗೆ ಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ವಿವಿಧ ಕ್ರೀಡೆ ಏರ್ಪಡಿಸಲಾಯಿತು. ಮಧ್ಯಾಹ್ನ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಈ ಸುದ್ದಿ ಓದಿದ್ದೀರಾ? ಔರಾದ್‌ | ಬೀದಿ ನಾಯಿ ದಾಳಿಗೆ ಜಿಂಕೆ ಸಾವು

ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಬಾಲಾಜಿ ಕುಂಬಾರ್‌, ಮಲ್ಲಪ್ಪಗೌಡ್‌, ಸಂಸ್ಥೆಯ ಕಾರ್ಯದರ್ಶಿ ಗುರುನಾಥ ದೇಶಮುಖ, ಖಾಸಗಿ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಬಸವರಾಜ ಶೆಟಕಾರ್, ಸಂಜುಕುಮಾರ್ ಶೆಟಕಾರ್, ಜೈವಂತ ಉಜನಿ, ಲಕ್ಷ್ಮಿಕಾಂತ್ ಅಚಿಗಾಂವೆ, ಪ್ರಭುಸ್ವಾಮಿ, ಸಂಜು ಕಂಠಾಳೆ, ಭೀಮಾಶಂಕರ ಜೀರ್ಗೆ, ಸೂರ್ಯಕಾಂತ, ಸುಧಾಕರ್ ಬಿರಾದಾರ, ಸಂಜು ಬಿರಾದಾರ, ಅನೀಲಕುಮಾರ ಸಿಂಧೆ, ಶಾಲೆಯ ಮುಖ್ಯಶಿಕ್ಷಕರಾದ ಮಧುಕರ ಭಂಗಾರೆ, ಚಿರಂಜೀವಿ ಪಾಟೀಲ್ ಸೇರಿದಂತೆ ಶಾಲಾ ಸಿಬ್ಬಂದಿ, ಪೋಷಕರು ಹಾಜರಿದ್ದರು. ಶಿಕ್ಷಕ ಶಿವಾನಂದ ಕೋಟೆ ನಿರೂಪಿಸಿದರು. ವಿದ್ಯಾರ್ಥಿನಿ ದಿವ್ಯಾ ಮಲ್ಲಪ್ಪಗೌಡ್‌ ಸ್ವಾಗತಿಸಿದರು. ವಿದ್ಯಾರ್ಥಿನಿ ಪುಷ್ಪಲತಾ ಶ್ರೀಕಾಂತ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...