ಬೀದರ್ | ಜನಿವಾರ ಪ್ರಕರಣ: ಸುಚಿವೃತ್‌ಗೆ ನನ್ನ ಕಾಲೇಜಿನಲ್ಲಿ ಉಚಿತ ಸೀಟ್ ಕೊಡುವೆ; ಈಶ್ವರ ಖಂಡ್ರೆ

Date:

ಜನಿವಾರ ಧರಿಸಿದ ಕಾರಣಕ್ಕೆ ಕೆ-ಸಿಇಟಿ ಗಣಿತ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತನಾದ ವಿದ್ಯಾರ್ಥಿ ಸುಚಿವೃತ್ ಕುಲಕರ್ಣಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ, ಆತ್ಮಸ್ಥೈರ್ಯ ತುಂಬಿದರು.

- Advertisement -

ರವಿವಾರ ಬೆಳಿಗ್ಗೆ ಸಚಿವ ರಹೀಂ ಖಾನ್ ಅವರ ಜೊತೆಯಲ್ಲಿ ಸುಚಿವೃತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ ಸಚಿವ ಈಶ್ವರ ಖಂಡ್ರೆ ಅವರು, ‘ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ ಇಂತಹ ಲೋಪವಾಗಿದ್ದು, ಇದು ನೋವಿನ ಸಂಗತಿ. ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

‘ಇಂತಹ ಒಂದು ಘಟನೆ ನಡೆಯಬಾರದಾಗಿತ್ತು. ಈ ಬಗ್ಗೆ ನನ್ನ ಗಮನಕ್ಕೆ ಬಂದ ಕೂಡಲೇ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೆ, ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಿದೆ’ ಎಂದರು.

ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ಆಗಬಾರದು ಎಂಬುದು ಎಲ್ಲರ ಭಾವನೆ, ಹೀಗಾಗಿ ಭಾಲ್ಕಿಯ ನನ್ನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತ ಸೀಟ್ ನೀಡುವುದಾಗಿ ಸಚಿವರು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಜನಿವಾರ ವಿವಾದ | ಒಂದು ಕೈಯಲ್ಲಿ ದೊಣ್ಣೆ, ಮತ್ತೊಂದು ಕೈಯಲ್ಲಿ ಬೆಣ್ಣೆ – ಇದು ಬಿಜೆಪಿ ನೀತಿ

ಸುಚಿವ್ರತ್‌ಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲು ಅವಕಾಶವಿದೆಯೇ ಎಂಬ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ ಈಶ್ವರ ಖಂಡ್ರೆ ವಿದ್ಯಾರ್ಥಿಗೆ ಕಾಮೆಡ-ಕೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಅವಕಾಶವಿದೆ. ಆ ಸೀಟು ಲಭಿಸಿದರೂ ನೆರವು ನೀಡಲಾಗುವುದು, ಸರ್ಕಾರ ನೊಂದ ವಿದ್ಯಾರ್ಥಿ ಮತ್ತು ಕುಟಂಬದ ಸದಸ್ಯರೊಂದಿಗಿದೆ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...