ಬೀದರ್ | ಕಬಡ್ಡಿ ಸ್ಪರ್ಧೆ : ಇಕ್ಬಲ್ ಪಟೇಲ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Date:

Advertisements

ಬೀದರ್‌ ಜಿಲ್ಲೆಯ ಹುಲಸೂರ ಪಟ್ಟಣದ ಇಕ್ಬಲ್ ಪಟೇಲ್ ಶಿಕ್ಷಣ ಸಂಸ್ಥೆಯ ಶೇಕ್ ಮೈನುದ್ದೀನ್ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜಿನ ದೀಪಕ್ ದತ್ತಾತ್ರಿ, ನಯುಮ್ ಖಲೀಮ್, ಯುವರಾಜ್ ದಾಮೋದರ್ ಜಿಲ್ಲಾ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಫಯಾಜ್‌ ಪಟೇಲ್‌ ತಿಳಿಸಿದ್ದಾರೆ.

ʼಗಡಿ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಜೊತೆಗೆ ಸಂಸ್ಕಾರ, ಕ್ರೀಡಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಸಂಸ್ಥೆಯ ಗುರಿಯಾಗಿದೆ. ಪಿಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ಮುಖಾಂತರ ರಾಜ್ಯಕ್ಕೆ ಆಯ್ಕೆಯಾಗಿರುವುದು ಸಂತಸ ಮೂಡಿಸಿದ್ದು, ರಾಜ್ಯ ಮಟ್ಟದಲ್ಲೂ ವಿದ್ಯಾರ್ಥಿಗಳು ಗೆದ್ದು ಬರಲಿʼ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಕನ್ನಡ ಮಾಧ್ಯಮ ಶಾಲೆ ಮುಚ್ಚಿದರೆ ಹೋರಾಟ: ಸುರೇಶ ಚನಶೆಟ್ಟಿ ಎಚ್ಚರಿಕೆ

ವಿದ್ಯಾರ್ಥಿಗಳ ಸಾಧನೆಗೆ ಇಕ್ಬಲ್‌ ಪಟೇಲ್ ಶಿಕ್ಷಣ ಸಂಸ್ಥೆಯ‌ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು, ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X