ಬೀದರ್‌ | ಕನಕದಾಸರು ತಳಸಮುದಾಯದ ಗಟ್ಟಿ ಧ್ವನಿ : ಎಸ್.ಎಂ.ಜನವಾಡಕರ್

Date:

ಕನಕದಾಸರು ಕೇವಲ ದೇವರ ಭಕ್ತನಾಗಿ ಸೀಮಿತನಾದವರಲ್ಲ, ಅವರು ತತ್ವ ಚಿಂತಕರು, ಸಾಮಾಜಿಕ ವಿಶ್ಲೇಷಕರು ಹಾಗೂ ತಳಸಮುದಾಯದ ಪರವಾಗಿ ಧ್ವನಿ ಎತ್ತಿದ ಯೋಧರು ಎಂದು ಹಿರಿಯ ಸಾಹಿತಿ ಎಸ್.ಎಂ.ಜನವಾಡಕರ್ ಶ್ಲಾಘಿಸಿದರು.

- Advertisement -

ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೀದರ್‌ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ  ʼಕನಕ ಸಂಸ್ಕೃತಿ ಸಂಚಲನ, ಕನಕ ನಡೆ ನುಡಿ ಉತ್ಸವʼ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ʼಕನಕದಾಸರು ತಮ್ಮ ಸಂಗೀತ, ಪದ್ಯ ಹಾಗೂ ಕೀರ್ತನೆಗಳಲ್ಲಿ ದೇವರ ಮಹಿಮೆ ಹೇಳಿದರೂ, ಅದರ ಒಳನೋಟದಲ್ಲಿ ನಮ್ಮ ಸಮಾಜದ ದುರವಸ್ಥೆಗಳನ್ನು ನೈತಿಕ ಪಾಠಗಳನ್ನು ಮುಡಿಪಾಗಿಸಿ ಜನರ ಹೃದಯದಲ್ಲಿ ಬದಲಾವಣೆಯ ಬೀಜ ಬಿತ್ತಿದರುʼ ಎಂದರು.

ಸಂತ ಕವಿ ಕನಕದಾಸ ಮತ್ತು ತತ್ತ್ವಪದಕಾರರ ಅಧ್ಯಯನ ಕೇಂದ್ರದ ಸಂಚಾಲಕ ಡಾ.ಸಂಜೀವಕುಮಾರ ಅತಿವಾಳೆ ಮಾತನಾಡಿ, ʼಇಂದಿನ ಯುವ ಜನತೆ ಕನಕದಾಸರ ಆದರ್ಶಮಯ ಜೀವನ ಶೈಲಿ ಮತ್ತು ಆಚಾರ ವಿಚಾರಗಳಿಂದ ಪ್ರೇರಣೆ ಪಡೆಯಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಕಾಲೇಜುಗಳ ಹಂತದಲ್ಲಿ ಆಯೋಜಿಸಲಾಗಿದೆʼ ಎಂದರು.

ʼಕನಕದಾಸರು ತಮ್ಮ ಕಾವ್ಯಗಳ ಮೂಲಕ ಸಮಾಜದಲ್ಲಿ ನೈತಿಕ ಮೌಲ್ಯಗಳನ್ನು ವಿಸ್ತಾರಗೊಳಿಸಿದ್ದಾರೆ. ಅವರ ತತ್ವಪದಗಳು ನಾಡಿನ ಸಂಸ್ಕೃತಿಯ ಆಳವಾದ ಪ್ರತಿಬಿಂಬವಾಗಿವೆ. ಇಂತಹ ಮಹಾನ್ ವ್ಯಕ್ತಿಯ ಆಲೋಚನೆಗಳು ಮುಂದಿನ ಪೀಳಿಗೆಗೆ ತಲುಪಬೇಕಾದ ಅಗತ್ಯವಿದೆʼ ಎಂದರು.

WhatsApp Image 2025 10 16 at 8.48.52 AM 1

ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ಶರಣಪ್ಪ ಮಲಗೊಂಡ್ ಅವರು ಮಾತನಾಡಿ, ʼದಾಸರ ಚಾರಿತ್ರ‍್ಯ ಮತ್ತು ಸಂಸ್ಕಾರಗಳನ್ನು ನಾವೆಲ್ಲರೂ ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳುವುದು ಬಹಳ ಅವಶ್ಯಕವಾಗಿದೆ. ಅವರು ಬೋಧಿಸಿದ ಮೌಲ್ಯಗಳು ನೈತಿಕ ಬದುಕಿಗೆ ದಾರಿದೀಪದಂತಿವೆʼ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನೌಬಾದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಶಂಕರ್ ಗಣಗೊಂಡ ಮಾತನಾಡಿ, ʼಸಮಾಜದಲ್ಲಿ ಜಾತಿ-ಜಾತಿ ಎಂದು ವಿಭಜನೆಗೊಂಡು ಹೊಡೆದಾಡುವುದಕ್ಕಿಂತ, ನಾವೆಲ್ಲರೂ ಮನುಷ್ಯತ್ವ ಹೊಂದಿದ ಮನುಷ್ಯರೆಂಬ ಅರಿವಿನಿಂದ ನಡೆಯಬೇಕು. ಅಂದಾಗ ಮಾತ್ರ ನಮ್ಮ ಬದುಕು ನಿಜವಾದ ಅರ್ಥವನ್ನು ಪಡುತ್ತದೆʼ ಎಂದು ತಿಳಿಸಿದರು.

ಕನಕ ಸಂಸ್ಕೃತಿ ಸಂಚಲನ ಪ್ರತಿಭಾ ಸ್ಪರ್ಧೆಯಲ್ಲಿ ಕನಕ ಕಾವ್ಯ ಓದು, ವ್ಯಾಖ್ಯಾನ ಗಾಯನ, ರಸಪ್ರಶ್ನೆಯಲ್ಲಿ ಭಾಗವಹಿಸಿದ ಕಾಲೇಜುಗಳಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೌಬಾದ ಬೀದರ, ಬಿ.ವ್ಹಿ ಭೂಮರೆಡ್ಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಬೀದರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮನ್ನಳ್ಳಿ, ಕರ್ನಾಟಕ ಕಲಾ, ವಿಜ್ಞಾನ, ಹಾಗೂ ವಾಣಿಜ್ಯ ಮಹಾವಿದ್ಯಾಲಯ ಬೀದರ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬೀದರ, ಸಿದ್ದಾರ್ಥ್ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಒಟ್ಟು 72 ಜನ ವಿದ್ಯಾರ್ಥಿಗಳಿಗೆ ಆಯಾ ಕಾಲೇಜು ಅನುಗುಣವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಪ್ರಮಾಣ ಪತ್ರ ನೀಡಿ ಗೌರವಿಸಲಾಗಿದೆ.

ನಿವೃತ್ತ ಉಪನ್ಯಾಸಕರಾದ ಉಮಾಕಾಂತ ಮೀಸೆ, ಬಿ.ಎಂ.ಅಮರವಾಡಿ, ಸತ್ಯನಾರಾಯಣ, ಮಾತನಾಡಿದರು. ಇದೇ ಸಂದರ್ಭದಲ್ಲಿ ಕನಕ ಯುವ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ ರವೀಂದ್ರ ಲಂಜವಾಡಕರ್ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ | ಮಾಧ್ಯಮಗಳ ಪ್ರಾಮಾಣಿಕತೆ-ಬದ್ಧತೆಯಿಂದ ಸಾಮಾಜಿಕ ಏಳಿಗೆ ಸಾಧ್ಯ : ಡಾ.ಪ್ರಹ್ಲಾದ ಚೆಂಗಟಿ

ಡಾ.ರಾಜಕುಮಾರ ಅಲ್ಲೂರೆ ಸ್ವಾಗತಿಸಿದರು, ಲಕ್ಷಣ ಮೇತ್ರೆ, ನಿರೂಪಿಸಿದರೆ, ಭೀಮಶಾ ಬರಗಾಲ ವಂದಿಸಿದರು. ಕಾಲೇಜಿನ ಸಿಬ್ಬಂದಿ, ಉಪನ್ಯಾಸಕರು, ವಿದ್ಯಾರ್ಥಿಗಳು, ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವಮಂಟಪ ಉತ್ಸವ

ವಿಶ್ವಬಸವಧರ್ಮ ಅನುಭವಮಂಟಪ, ಬಸವಕಲ್ಯಾಣ ವತಿಯಿಂದ ನವೆಂಬರ್ 28 ಮತ್ತು 29ರಂದು 47ನೇ...

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...