ಬೀದರ್‌ | ಸರ್ಕಾರಿ ಶಾಲೆ ಉಳಿದರೆ ಕನ್ನಡ ಉಳಿಯಲು ಸಾಧ್ಯ : ಸುಭಾಷ ರತ್ನ

Date:

ಗಡಿ ಭಾಗದ ಜಿಲ್ಲೆಗಳಲ್ಲಿ ಕನ್ನಡ ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಬಡಮಕ್ಕಳಿಗೆ ಶಿಕ್ಷಣ ಕೊಡಲು ಸಾಧ್ಯ. ಇಲ್ಲದಿದ್ದರೆ ಶಿಕ್ಷಣ ಎಂಬುದು ಬಡವರ ಮಕ್ಕಳಿಗೆ ಗಗನ ಕುಸುಮವಾಗುತ್ತದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸುಭಾಷ ರತ್ನ ತಿಳಿಸಿದರು.

- Advertisement -

ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಲೋಕಮಂಚ್ ಟ್ರಸ್ಟ್ ವತಿಯಿಂದ ಬೀದರ್‌ ನಗರದ ಮೈಲೂರ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ ಅವರ 105ನೇ ಜಯಂತಿ ಅಂಗವಾಗಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼಅಣ್ಣಾಭಾವು ಸಾಠೆಯವರು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಉತ್ತುಂಗಕ್ಕೇರಿದ್ದು ಜ್ವಲಂತ ಸಾಕ್ಷಿ. ಅವರ ಸದಾಶಯದಂತೆ ಅವರ ಹೆಸರಿನಲ್ಲಿ 300 ಬಡ ನಿರ್ಗತಿಕ ಮಕ್ಕಳಿಗೆ ತಲಾ ನಾಲ್ಕರಂತೆ 1,200 ನೋಟ್ ಬುಕ್ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ವಿರಚಿತ ಭಾಗ್ಯವಿಧಾತಾ ಪುಸ್ತಕ ವಿತರಣೆ ಕಾರ್ಯ ಶ್ಲಾಘನೀಯʼ ಎಂದರು.

ಹಿರಿಯ ಸಾಹಿತಿ ರಮೇಶ ಬಿರಾದಾರ ಮಾತನಾಡಿ, ʼಖಾಸಗೀಕರಣ ಪೋಷಣೆ, ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಸರ್ಕಾರಿ ಶಾಲೆಗಳು ಅವನತಿಯ ಅಂಚಿನಲ್ಲಿವೆ.‌ ಸರ್ಕಾರ, ಅಧಿಕಾರಿಗಳು, ಶಿಕ್ಷಕರು ಮತ್ತು ಪಾಲಕರು ಜಾಗೃತಿ ವಹಿಸಿದರೆ ಸರ್ಕಾರಿ ಶಾಲೆ ಉಳಿಸಬಹುದು. ಖಾಸಗಿ ಶಾಲೆಯಲ್ಲಿ ಸಂಬಳ ಕಡಿಮೆ ಇದ್ದರೂ ಪರಿಶ್ರಮ ಇದೆ. ಕೆಲ ಸರ್ಕಾರಿ ಶಾಲಾ ಶಿಕ್ಷಕರಿಗೆ ವೇತನ ಅಧಿಕ ಪಡೆದರೂ ಸೋಮಾರಿತನ ಹೆಚ್ಚುತ್ತಿದೆ. ಇದು ಹೀಗೆ ಮುಂದುವರೆದರೆ ಮತ್ತು ನಮ್ಮ ದೇಶ ಖಾಸಗೀಕರಣವಾಗಿ ಮುಂದಿನ ಪೀಳಿಗೆಗೆ ಸರ್ಕಾರಿ ನೌಕರಿ ಎಂಬುದು ಮರೀಚಿಕೆಯಾಗಲಿದೆʼ ಎಂದು ಕಳವಳ ವ್ಯಕ್ತಪಡಿಸಿದರು.

ಅಣ್ಣಾಭಾವು ಸಾಠೆ ಟ್ರಸ್ಟ್ ಅಧ್ಯಕ್ಷ ಎಂ.ಎಸ್.ಮನೋಹರ ಪ್ರಾಸ್ತಾವಿಕ ಮಾತನಾಡಿ, ʼಟ್ರಸ್ಟ್ ವತಿಯಿಂದ ಪ್ರತಿ ವರ್ಷ ಬಡ ಮಕ್ಕಳ ಅಧ್ಯಯನಕ್ಕಾಗಿ ಉಚಿತ ನೋಟ್ ಬುಕ್ ವಿತರಣೆ, ಸಾಹಿತ್ಯ ಮತ್ತು ಜನಪದ ಸಂಸ್ಕೃತಿ ಸಂವರ್ಧಿಸುವ ಕಾರ್ಯ ಮಾಡಲಾಗುತ್ತಿದೆ. ನಶೆಮುಕ್ತ ಸಮಾಜಕ್ಕಾಗಿ ಮಕ್ಕಳಿಗೆ ಪ್ರತಿಜ್ಞೆ ಬೋಧಿಸಲಾಗಿದೆʼ ಎಂದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಶಾಲಿವಾನ ಬಡಿಗೇರ ಅಧ್ಯಕ್ಷತೆ ವಹಿಸಿದ್ದರು. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮ ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ | ಈ ತಾಂಡಾಕ್ಕೆ ದಾರಿ ಯಾವುದಯ್ಯಾ?

ಕಾರ್ಯಕ್ರಮದಲ್ಲಿ ಉರ್ದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ಖಾದರ, ಸ.ಪ್ರೌ.ಶಾಲೆಯ ಮುಖ್ಯಗುರು ರಾಘವೇಂದ್ರ ಕುಲಕರ್ಣಿ, ಪ್ರಮುಖರಾದ ವಿಜಯಕುಮಾರ ಸಾಗರ, ಆಲಿಯಾ ಬೇಗಂ ಸೇರಿದಂತೆ ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕ ದೇವಿಪ್ರಸಾದ ಕಲಾಲ್ ನಿರೂಪಿಸಿದರು. ಟ್ರಸ್ಟ್ ಕಾರ್ಯದರ್ಶಿ ಪ್ರವೀಣ ಮೀರಾಗಂಜಕರ ಸ್ವಾಗತಿಸಿದರು. ಮನೋಹರ ಮರ್ಜಾಪುರಕರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...