ಬೀದರ್‌ | ಕನ್ನಡ ಬರೀ ಭಾಷೆಯಲ್ಲ, ಸಂಸ್ಕೃತಿ ಪ್ರತೀಕ : ಸಿಇಒ ಗಿರೀಶ ಬದೋಲೆ

Date:

ಕನ್ನಡವು ಬರೀ ಭಾಷೆಯಲ್ಲ, ಜಗತ್ತಿನ ಶ್ರೀಮಂತ ಸಂಸ್ಕೃತಿಯ ಅಭಿವ್ಯಕ್ತಿ. ನಾಡಿನ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಎತ್ತಿಹಿಡಿಯುವ ಬದ್ಧತೆ ನಮ್ಮ ಆದ್ಯತೆಯಾಗಲಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ ತಿಳಿಸಿದರು.

- Advertisement -

ಬೀದರ ಜಿಲ್ಲಾ ಪಂಚಾಯತ ಆವರಣದಲ್ಲಿ ಆಯೋಜಿಸಲಾಗಿದ್ದ ಶನಿವಾರ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ಮಾತನಾಡಿದ ಅವರು, ʼಕನ್ನಡವು ಜಗತ್ತಿನ ಅತ್ಯಂತ ಪುರಾತನ ಭಾಷೆಗಳಲ್ಲಿ ಒಂದು ಮಾತ್ರವಲ್ಲ, ಜಗತ್ತಿನ ಸುಂದರ ಭಾಷೆಗಳಲ್ಲಿಯೂ ಒಂದು. ಭಾರತೀಯ ಭಾಷೆಗಳಲ್ಲಿ ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆ ಕನ್ನಡದ್ದುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ʼರಾಷ್ಟ್ರಕವಿ ಕುವೆಂಪು ಅವರು ಬಣ್ಣಿಸಿದಂತೆ ಕನ್ನಡವು ‘ಹರಬರೆಯುವ, ಹರಿ ತಿರಿಯುವ ಭಾಷೆ’. ಕನ್ನಡ ನೆಲದ ವಚನಕಾರರು ಮತ್ತು ದಾಸರು ಕನ್ನಡವು ಹರಿಹರರ ನೆಚ್ಚಿನ ಭಾಷೆ ಎಂಬುದನ್ನು ನಿರೂಪಿಸಿದ್ದಾರೆ. ಅತ್ಯಂತ ಶ್ರೀಮಂತಿಕೆಯ ಭಾಷೆಯ ಬಗ್ಗೆ ಕನ್ನಡಿಗರಲ್ಲಿ ಹೆಮ್ಮೆ, ಅಭಿಮಾನಗಳಿರಬೇಕುʼ ಎಂದು ಪ್ರತಿಪಾದಿಸಿದರು.

WhatsApp Image 2025 11 01 at 8.49.38 AM

ʼರಾಜ್ಯೋತ್ಸವದ ಈ ಶುಭ ದಿನದಂದು ಬೀದರ ಜಿಲ್ಲಾ ಪಂಚಾಯತಿಯನ್ನು ಜನಸ್ನೇಹಿ ಜಿಲ್ಲಾ ಪಂಚಾಯತಿಯನ್ನಾಗಿಸೋಣ, ಸರಕಾರದ ಜನಪರ ಯೋಜನೆಗಳನ್ನು ಜನತೆಗೆ ಕರ್ತವ್ಯ ನಿಷ್ಠೆ, ಶ್ರದ್ಧೆ, ಪ್ರಾಮಾಣಿಕತೆಗಳಿಂದ ಒದಗಿಸುವ ಮೂಲಕ ಬೀದರ ಜಿಲ್ಲಾ ಪಂಚಾಯತಿಯನ್ನು ಜನಪರ, ಜನಮುಖಿ ಜಿಲ್ಲಾ ಪಂಚಾಯತಿಯನ್ನಾಗಿಸೋಣʼ ಎಂದು ಅಧಿಕಾರಿಗಳಿಗೆ ಹೇಳಿದರು.

ಇದನ್ನೂ ಓದಿ : ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ : ಸಚಿವ ಈಶ್ವರ ಖಂಡ್ರೆ

ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಮುಖ್ಯ ಯೋಜನಾಧಿಕಾರಿ ಕಿಶೋರಕುಮಾರ ದುಬೆ, ಯೋಜನಾ ನಿರ್ದೇಶಕ ಸೂರ್ಯಕಾಂತ ಬಿರಾದರ, ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ಶಿವಾಜಿ ಡೋಣಿ,ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿಗಳು ಮತ್ತು ಇತರೆ ಅಧಿಕಾರಿಗಳಾದ ರಮೇಶ ನಾಥೆ, ಬೀರೇಂದ್ರಸಿಂಗ್, ಜಯಪ್ರಕಾಶ ಚೌಹಾಣ, ಎಪಿಒ ಸುಭಾಸ್,ಪಿಎಇಒ ರಾಜಶೇಖರ ನೆಲ್ಲಿ ಸೇರಿದಂತೆ ಜಿಲ್ಲಾ ಪಂಚಾಯತಿಯ ಅಧಿಕಾರಿಗಳು, ಸಿಬ್ಬಂದಿಯವರು ಉಪಸ್ಥಿತರಿದ್ದರು. ಪ್ರವೀಣಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...