ಬೀದರ್‌ | ತಂತ್ರಜ್ಞಾನ ಕ್ಷೇತ್ರದಲ್ಲಿ ಕನ್ನಡ ಹೆಚ್ಚು ಬಳಕೆಯಾಗಲಿ : ನಾಗಪ್ಪ ಜಾನಕನೂರ್

Date:

ಕನ್ನಡ ನಾಡು-ನುಡಿ ಉಳಿಯಬೇಕಾದರೆ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚು ಬಳಸಬೇಕು. ಶೈಕ್ಷಣಿಕ, ಸಾಮಾಜಿಕ, ರಾಜಕೀಯ, ಆರ್ಥಿಕ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸುವ ಕಾರ್ಯದಲ್ಲಿ ತೊಡಗಬೇಕು ಎಂದು ಶ್ರೀ ಸಿದ್ಧರೂಢ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ನಾಗಪ್ಪ ಜಾನಕನೂರ್ ಹೇಳಿದರು.

- Advertisement -

ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ ಸಹಯೋಗದಲ್ಲಿ ಬೀದರ್‌ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ ಕನ್ನಡ ನಾಡು-ನುಡಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಹಿರಿಯ ಸಾಹಿತಿ ಪುಣ್ಯವತಿ ವಿಸಾಜಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಎಲ್ಲವೂ ಎಲ್ಲವೂ ಸಮೃದ್ಧಿಯಾಗಿದೆ. ದಿನನಿತ್ಯವೂ ಕನ್ನಡ ಹೆಚ್ಚು ಬಳಸಬೇಕು, ನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ಉಳಿಸಿ ಬೆಳೆಸಲು ಶ್ರಮಿಸಬೇಕಿದೆʼ ಎಂದು ನುಡಿದರು.

ಬೀದರ್‌ ತಾಲೂಕು ಕಸಾಪ ಅಧ್ಯಕ್ಷ ಟಿ.ಎಂ.ಮಚ್ಚೆ ಅವರು ಮಾತನಾಡಿ, ʼಗಡಿ ಭಾಗದಲ್ಲಿ ಕನ್ನಡ ಭಾಷೆ, ನುಡಿಯ ಜಾಗೃತಿ ಮೂಡಿಸಬೇಕಿದೆ. ಅನ್ಯ ಭಾಷೆಗಳೊಂದಿಗೆ ಮಿಶ್ರಿತವಾದ ಕನ್ನಡವನ್ನು ಶುದ್ಧ ಭಾಷೆಯನ್ನಾಗಿ ಮಾಡುವಪ್ರಯತ್ನ ಮಾಡಬೇಕುʼ ಎಂದು ಹೇಳಿದರು.

Advertisements

ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಪ್ರೊ.ಮನೋಜಕುಮಾರ ಕುಲಕರ್ಣಿ ಮಾತನಾಡಿ, ʼಕನ್ನಡ ಅನ್ಯ ಭಾಷಿಕರಿಗೆ ಕಲಿಸುವುದು ಬಹಳ ಮುಖ್ಯ. ಕನ್ನಡ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರೂ ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಬೇಕುʼ ಎಂದರು.

ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕಿ ಡಾ.ಮಕ್ತುಂಬಿ ಎಂ. ಮಾತನಾಡಿ, ʼಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಬೇಕು. ಪುಸ್ತಕಗಳನ್ನು ಮಕ್ಕಳಿಗೆ ಕೊಟ್ಟರೆ ಅವರು ಓದುವತ್ತ ಮನಸ್ಸು ಮಾಡುತ್ತಾರೆ. ಒಂದು ಸಲ ಓದುವ ಹವ್ಯಾಸ ಬೆಳೆಸಿಕೊಂಡರೆ ಅವರು ಮುಂದುವರೆಸಿಕೊಂಡು ಹೋಗುತ್ತಾರೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಆರ್‌ಎಸ್‌ಎಸ್ ಕಾನೂನು ಬಾಹಿರ ನೀತಿ ವಿರೋಧಿಸಿ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಪ್ರೊ.ಶ್ರೀಕಾಂತ ಪಾಟೀಲ್ ಸೇರಿದಂತೆ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ವಿದ್ಯಾರ್ಥಿನಿ ಕೀರ್ತನಾ ಪ್ರಾರ್ಥನೆ ನೆರವೇರಿಸಿದರು. ಡಾ.ಮನೋಹರ ನಿರೂಪಿಸಿದರು. ಪ್ರೊ. ಶ್ರೀನಿವಾಸ ಸ್ವಾಗತಿಸಿದರು. ಪಾರ್ವತಿ ಮೇತ್ರೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...